Facebook Twitter Instagram
    Friday, August 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026
    Share

    ಬೆಂಗಳೂರು: ಸಿವಿಲ್ ಸ್ವರೂಪದ ಆಸ್ತಿ ವಿವಾದದಲ್ಲಿ ಉಯಿಲು (ವಿಲ್) ಪತ್ರಕ್ಕೆ ಕೇವಲ ಸಾಕ್ಷಿಯಾಗಿ ಸಹಿ ಹಾಕಿದ್ದ ವ್ಯಕ್ತಿಯನ್ನು ಅಕ್ರಮವಾಗಿ ಬಂಧಿಸಿದ ವೈಟ್‌ಫೀಲ್ಡ್ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕಾನೂನುಬಾಹಿರ ಕೃತ್ಯ ಎಸಗಿದ ವೈಟ್‌ಫೀಲ್ಡ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ), ಸಂಬಂಧಪಟ್ಟ ಎಸಿಪಿ ಹಾಗೂ ಡಿಸಿಪಿಗೆ ನ್ಯಾಯಾಲಯ ಬರೋಬ್ಬರಿ ₹3 ಲಕ್ಷ ದಂಡ ವಿಧಿಸಿ ಆದೇಶಿಸಿದೆ.

    ವರ್ತೂರು ನಿವಾಸಿ ಕೆ. ಎನ್. ಮೋಹನ್ ರೆಡ್ಡಿ ಅವರು ತಮ್ಮ ಮೇಲಿನ ಅಕ್ರಮ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಈ ಮಹತ್ವದ ತೀರ್ಪು ನೀಡಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಅರ್ಜಿದಾರ ಮೋಹನ್ ರೆಡ್ಡಿಗೆ ಆಗಸ್ಟ್ 27ರ ಗಡುವು ನೀಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಆದರೆ, ನೀಡಿದ ಗಡುವು ಮುಗಿಯುವ ಮುನ್ನವೇ, ಅಂದರೆ ಆಗಸ್ಟ್ 25ರಂದೇ ಅವರನ್ನು ತರಾತುರಿಯಲ್ಲಿ ಬಂಧಿಸಲಾಗಿತ್ತು. ಸಂಪೂರ್ಣವಾಗಿ ಸಿವಿಲ್ ಸ್ವರೂಪದ ಈ ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪಕ್ಕೆ ಅವಕಾಶವೇ ಇಲ್ಲದಿದ್ದರೂ, ವಿನಾಕಾರಣ ವ್ಯಕ್ತಿಯ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿದೆ ಎಂದು ಪೀಠ ಗರಂ ಆಯಿತು.

    ಅಧಿಕಾರಿಗಳಿಗೆ ₹3 ಲಕ್ಷ ದಂಡ ವಿಧಿಸುವುದರ ಜೊತೆಗೆ ಅವರ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಆದೇಶಿಸಿದ ನ್ಯಾಯಪೀಠ, ರಾಜ್ಯದಲ್ಲಿ ಇಂತಹ “ಪೊಲೀಸ್ ರಾಜ್ ವ್ಯವಸ್ಥೆ” ಕೊನೆಗೊಳ್ಳಬೇಕು; ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮಗಳ ಮೂಲಕ ಇದಕ್ಕೆ ಕಡಿವಾಣ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿತು.

    ನ್ಯಾಯಾಲಯದಲ್ಲಿ ಹಾಜರಿದ್ದ ವೈಟ್‌ಫೀಲ್ಡ್ ಪಿಎಸ್‌ಐ ಹಾಗೂ ತನಿಖಾಧಿಕಾರಿ ಸುನೀಲ್ ಕುಮಾರ್ ಅವರನ್ನು ಪ್ರಶ್ನಿಸಿದ ನ್ಯಾಯಮೂರ್ತಿಗಳು, “ಆರೋಪಿ ತನಿಖೆಗೆ ಅಸಹಕಾರ ತೋರಿದರೆ ಮಾತ್ರ ಬಂಧಿಸಬಹುದು. ಆದರೆ ನೋಟಿಸ್ ನೀಡಿದ ದಿನವೇ ಏಕೆ ಬಂಧಿಸಿದಿರಿ? ಯಾರ ಒತ್ತಡಕ್ಕೆ ಮಣಿದು ಈ ಕ್ರಮ ಕೈಗೊಂಡಿರಿ?” ಎಂದು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಅಧಿಕಾರಿಯಿಂದ ಯಾವುದೇ ಸ್ಪಷ್ಟ ಉತ್ತರ ಬರಲಿಲ್ಲ.

    ಸರ್ಕಾರಿ ವಕೀಲರು ಅಧಿಕಾರಿಯ ಪರವಾಗಿ ಕ್ಷಮಾದಾನ ಕೋರಿ ಸಮಜಾಯಿಷಿ ನೀಡಲು ಯತ್ನಿಸಿದರೂ ಪೀಠ ಅದನ್ನು ಸ್ಪಷ್ಟವಾಗಿ ನಿರಾಕರಿಸಿತು. “ಒಬ್ಬ ವ್ಯಕ್ತಿಯ ಮೂಲಭೂತ ಹಕ್ಕನ್ನು ಕಸಿಯುವಾಗ ಕೇವಲ ತನಿಖಾಧಿಕಾರಿ ಮಾತ್ರವಲ್ಲ, ಇಡೀ ಠಾಣೆ ಹಾಗೂ ಮೇಲ್ವಿಚಾರಣೆ ನಡೆಸದ ಡಿಸಿಪಿ, ಎಸಿಪಿ ಕೂಡ ಸಮಾನ ಹೊಣೆಗಾರರು. ಹೀಗಾಗಿ ದಂಡದ ಮೊತ್ತವನ್ನು ಅವರೂ ಭರಿಸಬೇಕು” ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.

    ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಮೂಗು ತೂರಿಸುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಕೆಳ ಹಂತದ ವಿಚಾರಣಾ ನ್ಯಾಯಾಲಯಗಳು ಕೂಡ ಪೊಲೀಸರ ವಾದವನ್ನು ಕುರುಡಾಗಿ ಒಪ್ಪಿ ಆದೇಶ ನೀಡುವುದನ್ನು ನಿಲ್ಲಿಸಬೇಕು ಎಂದು ಕಿಡಿಕಾರಿತು

    Post Views: 11

    Related Posts

    ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪ- ಆರೋಪಿಯ‌ ಬಂಧನ

    August 28, 2026

    ಉಡುಪಿ : ಸತ್ತ ಮಗನ ಹೆಸರಲ್ಲಿ ₹5 ಲಕ್ಷ ವಂಚನೆ- ಕುಟುಂಬಕ್ಕೆ ಜೀವ ಬೆದರಿಕೆ, ಇಬ್ಬರು ಅರೆಸ್ಟ್

    August 28, 2026

    ಮಂಗಳೂರು: ಲೈಸೆನ್ಸ್ ಇಲ್ಲದೆ ಬಸ್ ಚಾಲನೆ -ಚಾಲಕ, ಮಾಲಕನಿಗೆ ಜೈಲು ಶಿಕ್ಷೆ

    August 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪ- ಆರೋಪಿಯ‌ ಬಂಧನ

    August 28, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಉಡುಪಿ : ಸತ್ತ ಮಗನ ಹೆಸರಲ್ಲಿ ₹5 ಲಕ್ಷ ವಂಚನೆ- ಕುಟುಂಬಕ್ಕೆ ಜೀವ ಬೆದರಿಕೆ, ಇಬ್ಬರು ಅರೆಸ್ಟ್

    August 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.