ಮಂಗಳೂರು: ರಾಜ್ಯದಲ್ಲಿ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಪಶ್ಚಿಮ ವಲಯ ಐಜಿಪಿಯಾಗಿದ್ದ ಅಮಿತ್ ಸಿಂಗ್ ಕೆಎಸ್‌ಆರ್‌ಪಿ ಪಡೆಯ ಐಜಿಪಿಯಾಗಿ ವರ್ಗಾವಣೆ ಆಗಿದ್ದಾರೆ. ಅವರ ಜಾಗಕ್ಕೆ 2010ರ ಬ್ಯಾಚ್ ಐಪಿಎಸ್ ಅಧಿಕಾರಿ ಆರ್.ಚೇತನ್ ಅವರನ್ನು ನೇಮಕ ಮಾಡಲಾಗಿದೆ.
ಇದೇ ವೇಳೆ, ಮಂಗಳೂರು ಕಮಿಷನರೇಟ್ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಮಿಥುನ್ ಎಚ್.ಎನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರನ್ನು ಗದಗ ಜಿಲ್ಲೆಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ.
ಅಮಿತ್ ಸಿಂಗ್ ಅವರು 2024ರ ಜನವರಿ 1ರಂದು ಮಂಗಳೂರಿನ ಪಶ್ಚಿಮ ವಲಯ ಐಜಿಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಬೆಳಗಾವಿ ಕಮಿಷನರ್ ಆಗಿದ್ದ ಭೂಷಣರಾವ್ ಬೋರಸೆ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿ ನೇಮಿಸಲಾಗಿದೆ.




