Facebook Twitter Instagram
    Monday, August 31
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರಾಗೃಹದಲ್ಲಿ ಕೈದಿಗೆ ರಾಜಾತಿಥ್ಯ: ಜೈಲು ಅಧೀಕ್ಷಕಿ ಶಾಂತಮ್ಮ ಎತ್ತಂಗಡಿ
    ಇತ್ತೀಚಿನ ಸುದ್ದಿ

    ಕಾರಾಗೃಹದಲ್ಲಿ ಕೈದಿಗೆ ರಾಜಾತಿಥ್ಯ: ಜೈಲು ಅಧೀಕ್ಷಕಿ ಶಾಂತಮ್ಮ ಎತ್ತಂಗಡಿ

    August 31, 2026
    Share

    ಮಂಡ್ಯ: ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬನಿಗೆ ರಾಜಾತಿಥ್ಯ ನೀಡಿದ ಹಾಗೂ ಜೈಲಿನ ಕೊಠಡಿಗಳಿಗೆ ಹಣ ನಿಗದಿಪಡಿಸಿದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಕಾರಾಗೃಹ ಅಧೀಕ್ಷಕಿ ಶಾಂತಮ್ಮ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಿ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

    ಪ್ರಕರಣದ ಹಿನ್ನೆಲೆ:

    ಭೂ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಡಿಎಲ್‌ಆರ್ (ADLR) ಅಧಿಕಾರಿ ಮಹಮದ್ ಹುಸೇನ್ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದನು. ಯಾವುದೇ ಗಂಭೀರ ಕಾಯಿಲೆ ಇಲ್ಲದಿದ್ದರೂ ಬೆನ್ನು ನೋವಿನ ನೆಪವೊಡ್ಡಿ ಆತನನ್ನು ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿದ್ದ ವೇಳೆ ಹುಸೇನ್ ತನ್ನ ಗೆಳತಿಯೊಂದಿಗೆ ರಾಜಾರೋಷವಾಗಿ ಕಾಲ ಕಳೆಯುತ್ತಿದ್ದ ವಿಷಯ ಬೆಳಕಿಗೆ ಬಂದಿತ್ತು.

    ನ್ಯಾಯಾಧೀಶರ ಭೇಟಿ ವೇಳೆ ಬಂಡವಾಳ ಬಯಲು:

    ನ್ಯಾಯಾಲಯಕ್ಕೆ ಯಾವುದೇ ಮಾಹಿತಿ ನೀಡದೆ ಕೈದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ. ಚಂದ್ರಶೇಖರ್ ಅವರು ಮಿಮ್ಸ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದಾಗ ಈ ಕರ್ಮಕಾಂಡ ಬಯಲಾಗಿತ್ತು. ವಿಚಾರಣೆ ನಡೆಸದೆ ಕೈದಿಗೆ ಆಸ್ಪತ್ರೆಯಲ್ಲಿ ಸೌಲಭ್ಯ ಕಲ್ಪಿಸಿದ್ದಕ್ಕಾಗಿ ನ್ಯಾಯಾಧೀಶರು ಸ್ಥಳದಲ್ಲೇ ಅಧೀಕ್ಷಕಿ ಶಾಂತಮ್ಮ ಅವರಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

    ಕೊಠಡಿಗಳಿಗೆ ರೇಟ್ ಫಿಕ್ಸ್ ಆರೋಪ & ಕ್ರಮ:

    ಈ ಘಟನೆಯ ಬೆನ್ನಲ್ಲೇ ಜೈಲಿನೊಳಗಿನ ಸೆಲ್‌ಗಳಿಗೆ (ಕೊಠಡಿ) ದರ ನಿಗದಿಪಡಿಸಿ ಅಕ್ರಮ ಎಸಗುತ್ತಿರುವ ಬಗ್ಗೆಯೂ ಮಾಧ್ಯಮಗಳಲ್ಲಿ ವಿಸ್ತೃತ ವರದಿಗಳು ಪ್ರಸಾರವಾಗಿದ್ದವು. ಮಾಧ್ಯಮಗಳ ವರದಿ ಹಾಗೂ ಪ್ರಾಥಮಿಕ ತನಿಖೆಯನ್ನು ಆಧರಿಸಿ ಇಲಾಖೆ ತಕ್ಷಣ ಎಚ್ಚೆತ್ತುಕೊಂಡಿದ್ದು, ಶಾಂತಮ್ಮ ಅವರನ್ನು ಮಂಡ್ಯದಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಎತ್ತಂಗಡಿ ಮಾಡಿದೆ.

    Post Views: 6

    Related Posts

    ಮಂಗಳೂರು: ಅಣ್ಣ-ತಮ್ಮನ ನಡುವೆ ಜಗಳ- ಚಾಕುವಿನಿಂದ ಇರಿದು ಅಣ್ಣನ ಕೊಲೆ..!!

    August 31, 2026

    ಬೆಳ್ತಂಗಡಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

    August 31, 2026

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಅಣ್ಣ-ತಮ್ಮನ ನಡುವೆ ಜಗಳ- ಚಾಕುವಿನಿಂದ ಇರಿದು ಅಣ್ಣನ ಕೊಲೆ..!!

    August 31, 2026

    ಕಾರಾಗೃಹದಲ್ಲಿ ಕೈದಿಗೆ ರಾಜಾತಿಥ್ಯ: ಜೈಲು ಅಧೀಕ್ಷಕಿ ಶಾಂತಮ್ಮ ಎತ್ತಂಗಡಿ

    August 31, 2026

    ಬೆಳ್ತಂಗಡಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

    August 31, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.