Facebook Twitter Instagram
    Tuesday, September 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಆಟೋ ರಿಕ್ಷಾ -ಬೈಕ್ ಢಿಕ್ಕಿ – ಸವಾರ ಸಾವು..!!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಆಟೋ ರಿಕ್ಷಾ -ಬೈಕ್ ಢಿಕ್ಕಿ – ಸವಾರ ಸಾವು..!!

    August 31, 2026
    Share

    ಬಂಟ್ವಾಳ : ಆಟೋ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಮಾರ್ನಬೈಲು ಸಮೀಪದ ಸಜಿಪ ಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ರವಿವಾರ ರಾತ್ರಿ ನಡೆದಿದೆ.

    ಮೃತ ಯುವಕನನ್ನು ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ (25) ಎಂದು ಗುರುತಿಸಲಾಗಿದೆ. ನಂದಾವರ ಶಾಲಾ ಸಮೀಪ ಗ್ಯಾರೇಜ್ ನಡೆಸುತ್ತಿದ್ದ ಈತ ರವಿವಾರ ರಾತ್ರಿ ಸಜಿಪಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಪೆಲತ್ತಕಟ್ಟೆಯಲ್ಲಿ ಶಿವಾಜಿ ಕುಮಾರ್ ಎಂಬವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತಕ್ಷಣ ಸ್ಥಳೀಯರು ಆತನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ತಲೆಗೆ ಗಂಭೀರ ಗಾಯಗೊಂಡಿದ್ದ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

    ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಾವರ ನಿವಾಸಿ ಝೈನುಲ್ ಆಬಿದೀನ್ ಎಂಬವರು ನೀಡಿರುವ ದೂರಿನಂತೆ ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ರಶೀಕ್ ತಂದೆ, ತಾಯಿ, ಸಹೋದರ-ಸಹೋದರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ

    Post Views: 27

    Related Posts

    ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿ ಚೇತನ್ ಆರ್ ಅಧಿಕಾರ ಸ್ವೀಕಾರ

    September 1, 2026

    ಮಂಗಳೂರು: ಅಣ್ಣ-ತಮ್ಮನ ನಡುವೆ ಜಗಳ- ಚಾಕುವಿನಿಂದ ಇರಿದು ಅಣ್ಣನ ಕೊಲೆ..!!

    August 31, 2026

    ಕಾರಾಗೃಹದಲ್ಲಿ ಕೈದಿಗೆ ರಾಜಾತಿಥ್ಯ: ಜೈಲು ಅಧೀಕ್ಷಕಿ ಶಾಂತಮ್ಮ ಎತ್ತಂಗಡಿ

    August 31, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿ ಚೇತನ್ ಆರ್ ಅಧಿಕಾರ ಸ್ವೀಕಾರ

    September 1, 2026

    ಬಂಟ್ವಾಳ: ಆಟೋ ರಿಕ್ಷಾ -ಬೈಕ್ ಢಿಕ್ಕಿ – ಸವಾರ ಸಾವು..!!

    August 31, 2026

    ಮಂಗಳೂರು: ಅಣ್ಣ-ತಮ್ಮನ ನಡುವೆ ಜಗಳ- ಚಾಕುವಿನಿಂದ ಇರಿದು ಅಣ್ಣನ ಕೊಲೆ..!!

    August 31, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.