Facebook Twitter Instagram
    Saturday, September 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ-ಮೂವರ ಮೇಲೆ FIR
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ-ಮೂವರ ಮೇಲೆ FIR

    September 3, 2026
    Share

    ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವ ಕಾಂಗ್ರೆಸ್ ಮುಖಂಡ ಸೇರಿ ಮೂವರ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಾಂಗ್ರೆಸ್ ಸಾಮಾಜಿಕ ಜಾಲತಾಣ ನಿರ್ವಹಿಸುವ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಆಪ್ತ ರಿತಿಲ್ ಪೂಜಾರಿ, ಸಂಘ ಪರಿವಾರದ ಕಾರ್ಯಕರ್ತರಾದ ಪ್ರೇಮ್ ಭಂಡಾರಿ, ಬಜರಂಗದಳ ಮಾಜಿ ಸಂಚಾಲಕ ಸಂಜಯ್ ಹೆಗ್ಡೆ ಎಂಬವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ಮೂಡುಬಿದಿರೆಯ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಮೂಡುಬಿದಿರೆ ಬಸ್ ನಿಲ್ದಾಣದ ಬಳಿಯ ಕೆಫೆಯೊಂದಕ್ಕೆ ಉಪಾಹಾರ ಸೇವಿಸಲು ತೆರಳಿದ್ದರು. ಈ ವೇಳೆ ಆರೋಪಿಗಳು ಕೆಫೆಗೆ ಅಕ್ರಮವಾಗಿ ನುಗ್ಗಿ ವಿದ್ಯಾರ್ಥಿಗಳ ಹೆಸರು ಕೇಳಿ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.

    ಆರೋಪಿಗಳ ಬೆದರಿಕೆಯಿಂದ ಹೆದರಿದ ವಿದ್ಯಾರ್ಥಿಗಳು ದೂರು ನೀಡಲು ನಿರಾಕರಿಸಿದ್ದರು. ಆದರೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್ಸೈ ಪ್ರತಿಭಾ ನೀಡಿರು ದೂರಿನಂತೆ ಕಲಂ126(2), 352, 351(2) 2 3(5)ಬಿಎನ್ಎಸ್ ನಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

    ಆರೋಪಿಗಳ ಪೈಕಿ ಸಂಘ ಪರಿವಾರದ ಕಾರ್ಯಕರ್ತರಾದ ಪ್ರೇಮ್ ಭಂಡಾರಿ, ಸಂಜಯ್ ಹೆಗ್ಡೆ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯೊಂದರಲ್ಲೇ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಇವರ ಮೇಲೆ ರೌಡಿ ಶೀಟ್ ತೆರೆಯಲಾಗಿತ್ತು. ಸದ್ಯ ಆರೋಪಿಗಳ ರೌಡಿ ಶೀಟ್ ಸಂಬಂಧಿತ ಬಾಂಡ್ ನ ಅವಧಿ ಮುಗಿದಿದೆ ಎಂದು ತಿಳಿದು ಬಂದಿದೆ.

    Post Views: 43

    Related Posts

    ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 5, 2026

    ಉಪ್ಪಿನಂಗಡಿ: ವಾಹನಗಳ ಡೀಸೆಲ್ ಕಳವು..!! ಇಬ್ಬರ ಬಂಧನ

    September 4, 2026

    ಕರ್ತವ್ಯ ಲೋಪ ಆರೋಪ- ಬಂಟ್ವಾಳ ಠಾಣೆಯ ಪೊಲೀಸ್ ಕಾನ್ಸ್ ಸ್ಟೇಬಲ್ ಸೇವೆಯಿಂದ ಅಮಾನತು

    September 4, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    September 5, 2026

    ಉಪ್ಪಿನಂಗಡಿ: ವಾಹನಗಳ ಡೀಸೆಲ್ ಕಳವು..!! ಇಬ್ಬರ ಬಂಧನ

    September 4, 2026

    ಕರ್ತವ್ಯ ಲೋಪ ಆರೋಪ- ಬಂಟ್ವಾಳ ಠಾಣೆಯ ಪೊಲೀಸ್ ಕಾನ್ಸ್ ಸ್ಟೇಬಲ್ ಸೇವೆಯಿಂದ ಅಮಾನತು

    September 4, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.