Facebook Twitter Instagram
    Friday, September 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್- ಲಕ್ಷಕ್ಕೂ ಅಧಿಕ ಹಣ ಸುಲಿಗೆ
    ಇತ್ತೀಚಿನ ಸುದ್ದಿ

    ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್- ಲಕ್ಷಕ್ಕೂ ಅಧಿಕ ಹಣ ಸುಲಿಗೆ

    September 4, 2026
    Share

    ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಸೇರಾಜೆ ನಿವಾಸಿ ಎ.ಎಸ್. ಸುಜೀತ್ ನೀಡಿದ ದೂರಿನ ಆಧಾರದಲ್ಲಿ ಕಾಸರಗೋಡಿನ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    ದೂರಿನಲ್ಲಿ ಉಲ್ಲೇಖಿಸಲಾದ ವಿವರಗಳ ಪ್ರಕಾರ, ಆಗಸ್ಟ್ 29ರಂದು ಸಂಜೆ ಸುಮಾರು 6 ಗಂಟೆಗೆ ವೇಲ್ಸ್ ಸಮೀಪದ ಉಕ್ಕಿನಡ್ಕದಲ್ಲಿ ಈ ಘಟನೆ ನಡೆದಿದೆ. ಉಕ್ಕಿನಡ್ಕದಲ್ಲಿದ್ದ ಸುಜೀತ್ ಅವರನ್ನು ತಡೆದ ಆರೋಪಿಗಳ ತಂಡವು ಮರದ ದೊಣ್ಣೆ ಹಾಗೂ ಕತ್ತಿ ತೋರಿಸಿ ಬೆದರಿಕೆ ಹಾಕಿದೆ. ಬಳಿಕ ಅವರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು ಜೇಕಳ ಸಮೀಪದ ಕ್ವಾರ್ಟರ್ಸ್‌ಗೆ ತಲುಪಿಸಲಾಗಿದೆ.

    ಕ್ವಾರ್ಟರ್ಸ್‌ನ ಕೊಠಡಿಯಲ್ಲಿ ಸುಜೀತ್ ಅವರನ್ನು ಕೂಡಿಹಾಕಿ ಬಟ್ಟೆ ಬಿಚ್ಚಿಸಿ ಬೆದರಿಕೆ ಒಡ್ಡಲಾಗಿದೆ. ನಂತರ ಕೊಠಡಿಯಲ್ಲಿದ್ದ ಅಪ್ರಾಪ್ತ ಬಾಲಕನೊಂದಿಗೆ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಲಾಗಿದೆ. ಈ ವೀಡಿಯೋವನ್ನು ಇಟ್ಟುಕೊಂಡು, ಹಣ ನೀಡದಿದ್ದರೆ ಪೋಕ್ಸೋ (POCSO) ಪ್ರಕರಣದಲ್ಲಿ ಸಿಲುಕಿಸುವುದಾಗಿ ಹಾಗೂ ಕೊಲೆ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಬೆದರಿದ ಯುವಕನಿಂದ ಒಟ್ಟು 1,02,000 ರೂಪಾಯಿ ಹಣವನ್ನು ಪಡೆದುಕೊಂಡ ಬಳಿಕ ಆರೋಪಿಗಳು ಅವರನ್ನು ಬಿಡುಗಡೆ ಮಾಡಿದ್ದಾರೆ.

    ಘಟನೆಗೆ ಸಂಬಂಧಿಸಿ ಈಗಾಗಲೇ ಗುರುತು ಪತ್ತೆಯಾಗಿರುವ ಆರೋಪಿಗಳ ವಿರುದ್ಧ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ತನಿಖೆ ಚುರುಕುಗೊಳಿಸಲಾಗಿದ್ದು, ಘಟನೆ ನಡೆದ ಸ್ಥಳಗಳು ಹಾಗೂ ಆರೋಪಿಗಳು ಸಂಚರಿಸಿರಬಹುದಾದ ಪ್ರದೇಶಗಳಲ್ಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಪ್ರಕರಣದ ಹಿನ್ನೆಲೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಆರೋಪಿಗಳು ಹಾಗೂ ಸಂತ್ರಸ್ತನ ನಡುವಿನ ಹಳೆಯ ಸಂಬಂಧ, ಹಣದ ವ್ಯವಹಾರ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಿರತರಾಗಿದ್ದಾರೆ.

    Post Views: 13

    Related Posts

    ಉಡುಪಿ: ನಕಲಿ ರಶೀದಿ ನೀಡಿ 83.1 ಗ್ರಾಂ ಚಿನ್ನ ಪಡೆದು ವಂಚನೆ ಆರೋಪ- ಪ್ರಕರಣ ದಾಖಲು

    September 4, 2026

    ಮೂಡುಬಿದಿರೆ: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ-ಮೂವರ ಮೇಲೆ FIR

    September 3, 2026

    ಸುಳ್ಯ: 14 ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯ ಬಂಧನ

    September 3, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ನಕಲಿ ರಶೀದಿ ನೀಡಿ 83.1 ಗ್ರಾಂ ಚಿನ್ನ ಪಡೆದು ವಂಚನೆ ಆರೋಪ- ಪ್ರಕರಣ ದಾಖಲು

    September 4, 2026

    ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್- ಲಕ್ಷಕ್ಕೂ ಅಧಿಕ ಹಣ ಸುಲಿಗೆ

    September 4, 2026

    ಮೂಡುಬಿದಿರೆ: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ-ಮೂವರ ಮೇಲೆ FIR

    September 3, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.