Facebook Twitter Instagram
    Thursday, October 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ
    ಇತ್ತೀಚಿನ ಸುದ್ದಿ

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    Share

    ಮಂಗಳೂರು: ನಾಗರಿಕರ ವೈಯಕ್ತಿಕ ಹಾಗೂ ಗೌಪ್ಯ ಮಾಹಿತಿಯನ್ನು ಕಾನೂನುಬಾಹಿರವಾಗಿ ಸಂಗ್ರಹಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC) ತನಿಖೆಗೆ ಆದೇಶಿಸಿದೆ. ಅಮಾನತಿನಲ್ಲಿರುವ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಹಾಗೂ ಮಂಗಳೂರು ಉತ್ತರ (ಪಣಂಬೂರು) ವಿಭಾಗದ ಎಸಿಪಿ ಶ್ರೀಕಾಂತ್ ಅವರ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಆಯೋಗ ನಿರ್ದೇಶನ ನೀಡಿದೆ.

    ಈ ಕುರಿತು ಪ್ರಕರಣ ಸಂಖ್ಯೆ 3141/10/21/2026 ಅಡಿಯಲ್ಲಿ ವಿಚಾರಣೆ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಚೋಳ್ಯಾಡಿ ರಸ್ತೆ ನಿವಾಸಿ ಸುಮತಿ ನಾಯ್ಕ್ ಅವರು KSHRCಗೆ ದೂರು ಸಲ್ಲಿಸಿದ್ದರು.

    ದೂರಿನಲ್ಲಿ, ತಮ್ಮ ಗಮನಕ್ಕೆ ತರದೆ ಆಧಾರ್ ಸಂಖ್ಯೆ, ಮೊಬೈಲ್‌ ವಿವರ, ಪಾಸ್‌ಪೋರ್ಟ್ ಸೇರಿದಂತೆ ವೈಯಕ್ತಿಕ ಹಾಗೂ ಅತ್ಯಂತ ಗೌಪ್ಯ ದತ್ತಾಂಶಗಳನ್ನು NATGRID ವ್ಯವಸ್ಥೆಯ ಮೂಲಕ ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂದು ಆರೋಪಿಸಲಾಗಿದೆ.

    ದೂರು ಹಾಗೂ ಅದರಲ್ಲಿನ ಆರೋಪಗಳನ್ನು ಪರಿಶೀಲಿಸಿದ ಬಳಿಕ KSHRC ಸದಸ್ಯ ಎಸ್.ಕೆ. ವಂಟಿಗೋಡಿ ಅವರು ತನಿಖೆಗೆ ಆದೇಶಿಸಿ ಅಧಿಕೃತ ನಿರ್ದೇಶನ ಹೊರಡಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರು ಹಿರಿಯ ಪೊಲೀಸ್ ಅಧಿಕಾರಿಯ ಮೂಲಕ ಈ ಬಗ್ಗೆ ಸಮಗ್ರ ವಿಚಾರಣೆ ನಡೆಸಿ, ಅಗತ್ಯವಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಂಡು ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

    ಅಕ್ಟೋಬರ್ 06, 2026ರೊಳಗೆ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಬಳಿಕ ಪ್ರಕರಣದ ಮುಂದಿನ ವಿಚಾರಣೆ ಹಾಗೂ ತನಿಖಾ ವರದಿಯ ಪರಿಶೀಲನೆಯನ್ನು ಅಕ್ಟೋಬರ್ 07, 2026ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

    ನಾಗರಿಕರ ವೈಯಕ್ತಿಕ ಮಾಹಿತಿಯ ಗೌಪ್ಯತೆ ಹಾಗೂ ಅದರ ಬಳಕೆಗೆ ಸಂಬಂಧಿಸಿದಂತೆ ಗಂಭೀರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ KSHRCನ ಈ ತನಿಖಾ ಆದೇಶ ಮಹತ್ವ ಪಡೆದಿದೆ. ತನಿಖೆಯ ಬಳಿಕ ಆರೋಪಗಳ ಸತ್ಯಾಸತ್ಯತೆ ಹಾಗೂ ಯಾವುದೇ ಕಾನೂನು ಉಲ್ಲಂಘನೆಯಾಗಿದೆಯೇ ಎಂಬುದು ಸ್ಪಷ್ಟವಾಗಬೇಕಿದೆ.

    Post Views: 106

    mangalore PoliceInvestigation

    Related Posts

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026

    ಮಣಿಪಾಲ: ಮಾನವ ಅಸ್ಥಿಪಂಜರದ ಕೆಲವು ಭಾಗಗಳು ಪತ್ತೆ!!

    October 22, 2026

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.