Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026
    Share

    ಕಾಸರಗೋಡು: ಮರಳು ಸಾಗಣೆ ದೋಣಿಯ ಮೇಲೆ ಕರಾವಳಿ ಪೊಲೀಸರು ನಡೆಸಿದ ದಾಳಿಯ ವೇಳೆ ತಪ್ಪಿಸಿಕೊಳ್ಳಲು ನದಿಗೆ ಜಿಗಿದು ನಾಪತ್ತೆಯಾಗಿದ್ದ ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹೀಂ (35) ಎಂಬವರ ಮೃತದೇಹ ನಾಲ್ಕು ದಿನಗಳ ನಿರಂತರ ಹುಡುಕಾಟದ ಬಳಿಕ ಗುರುವಾರ ಬೆಳಗ್ಗೆ ಪತ್ತೆಯಾಗಿದೆ.

    ಶಿರಿಯಾ ನದಿಯ ಅಳಿವಿನಬಾಗಿಲು ಪ್ರದೇಶದಲ್ಲಿ ಮೀನುಗಾರರ ಬಲೆಗೆ ಸಿಲುಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

    ಸೆ.7ರಂದು ರಾತ್ರಿ 8 ಗಂಟೆ ಸುಮಾರಿಗೆ ಶಿರಿಯಾ ನದಿಯಲ್ಲಿ ಅಕ್ರಮ ಮರಳು ಸಾಗಣೆ ತಡೆಗೆ ಕರಾವಳಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮರಳು ಸಾಗಣೆದಾರರು ದೋಣಿಯಿಂದ ನೀರಿಗೆ ಜಿಗಿದಿದ್ದರು. ಈ ಪೈಕಿ ಇಬ್ಬರು ಈಜಾಡಿ ದಡ ಸೇರಿ ಪಾರಾಗಿದ್ದರು. ಆದರೆ ಇಬ್ರಾಹೀಂ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಕಳೆದ ಮೂರು ದಿನಗಳಿಂದ ಕೋಸ್ಟಲ್ ಪೊಲೀಸ್, ಕುಂಬಳೆ ಪೊಲೀಸ್ ಮತ್ತು ಸ್ಥಳೀಯ ಮೀನುಗಾರರು ಅವರಿಗಾಗಿ ತೀವ್ರ ಶೋಧ ನಡೆಸಿದರೂ ಪ್ರಯೋಜನವಾಗಿರಲಿಲ್ಲ.

    ಈ ಹಿನ್ನೆಲೆಯಲ್ಲಿ ಗುರುವಾರ ಬೆಳ\ಗ್ಗೆ ಉಡುಪಿಯ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆಯವರ ತಂಡವನ್ನು ಸ್ಥಳಕ್ಕೆ ಕರೆಸಲಾಗಿತ್ತು. ಈಶ್ವರ್ ಮಲ್ಪೆ ನೇತೃತ್ವದಲ್ಲಿ ನಡೆದ ಆಳವಾದ ಹುಡುಕಾಟದ ಬಳಿಕ ಮೃತದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ.

    ಸ್ಥಳಕ್ಕೆ ಆಗಮಿಸಿದ ಕುಂಬಳೆ ಕೋಸ್ಟಲ್ ಪೊಲೀಸರು ಮಹಜರು ನಡೆಸಿದರು.ಮೃತ ಇಬ್ರಾಹೀಂ ಆರಿಕ್ಕಾಡಿ ಕಡವತ್ನ ಅಬ್ದುಲ್ ಖಾದರ್ ಮತ್ತು ಝೈನಬಾ ದಂಪತಿಯ ಪುತ್ರ.

    Post Views: 1

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.