Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    Share

    ಉಡುಪಿ: ಆರೋಪಿಯೊಬ್ಬನಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುವ ಉದ್ದೇಶದಿಂದ ಮತ್ತೊಬ್ಬರ ಆಧಾರ್ ಕಾರ್ಡ್ ವಿವರಗಳನ್ನು ನಕಲಿಯಾಗಿ ಸೃಷ್ಟಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪದ ಮೇಲೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಉಮ್ಮರ್ ಫಾರೂಕ್ (ಬಂಟ್ವಾಳ) ಹಾಗೂ ನಿಶಾಂತ್ ಕುಮಾರ್ (ಮಂಗಳೂರು) ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಈ ಕುರಿತು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆಡಳಿತಾಧಿಕಾರಿ ಅಬ್ಬಾಸ್ ಅವರು ನೀಡಿದ ದೂರಿನ ಆಧಾರದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ದೂರಿನ ಪ್ರಕಾರ, ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣವೊಂದರಲ್ಲಿ ನೋಮಾನ್ ಎಂಬ ಆರೋಪಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಫಾರೂಕ್ ಎಂಬಾತನು ಪ್ರಶಾಂತ್ ಅವರ ಆಧಾರ್ ಕಾರ್ಡ್ ಸಂಖ್ಯೆಯನ್ನು ಬಳಸಿಕೊಂಡು, ಕೆ.ಟಿ. ಮೊಹಮ್ಮದ್ ಎಂಬವರ ಹೆಸರು ಮತ್ತು ವಿಳಾಸವನ್ನು ನಕಲಿಯಾಗಿ ಸೃಷ್ಟಿಸಿ, ಮತ್ತೊಬ್ಬ ವ್ಯಕ್ತಿಯಂತೆ ನಟಿಸಿ ನಕಲಿ ಆಧಾರ್ ಕಾರ್ಡ್ ಸಿದ್ಧಪಡಿಸಿದ್ದಾನೆ. ಬಳಿಕ ನ್ಯಾಯಾಲಯಕ್ಕೆ ಮೋಸ ಮಾಡುವ ಉದ್ದೇಶದಿಂದ ಆ ದಾಖಲೆಯನ್ನು ಜಾಮೀನು ಪ್ರಕ್ರಿಯೆಯಲ್ಲಿ ಹಾಜರುಪಡಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
    ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 110/2026ರಂತೆ ಬಿಎನ್‌ಎಸ್ 2023ರ ಕಲಂ 319(2), 336(3), 318(4), 229(1), 340(2) ಹಾಗೂ ಕಲಂ 35ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿಗಳ ಪತ್ತೆಗಾಗಿ ಮೇಲಾಧಿಕಾರಿಗಳ ಆದೇಶದಂತೆ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಪಿ. ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪನಿರೀಕ್ಷಕ (ತನಿಖೆ-2) ರತ್ನಾಕರ ಕೆ. ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
    ತಂಡದಲ್ಲಿ ಎಎಸ್ಐ ಲೋಕೇಶ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಸಂತೋಷ್ ಹಾಗೂ ಜಗನ್ನಾಥ್ ನಾಯ್ಕ್, ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಆನಂದ್, ಆನಂದಯ್ಯ, ಮಣಿಪಾಲ ಠಾಣೆಯ ಮಲ್ಲಯ್ಯ ಹಿರೇಮಠ ಹಾಗೂ ಹೇಮಂತ್ ಸೇರಿದಂತೆ ಉಡುಪಿ ನಗರ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆ.

    Post Views: 1

    Related Posts

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.