Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    Share

    ಮಂಗಳೂರು : ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಗಾಣದಬೆಟ್ಟು ಜಂಕ್ಷನ್‌ನಲ್ಲಿ ಇಬ್ಬರು ರೌಡಿಶೀಟರ್‌ಗಳ ತಂಡಗಳು ಸಾರ್ವಜನಿಕ ರಸ್ತೆಯಲ್ಲಿ ತಲವಾರು ಝಳಪಿಸಿ ಗ್ಯಾಂಗ್ ವಾರ್ ನಡೆಸಲು ಯತ್ನಿಸಿದ ಘಟನೆಗೆ ನಡೆದಿದ್ದು, ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಕಂಕನಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಸೆಪ್ಟೆಂಬರ್ 9ರಂದು ರಾತ್ರಿ 11:00 ರಿಂದ 11:30 ರ ಸುಮಾರಿಗೆ ಕಣ್ಣೂರು ಗ್ರಾಮದ ಗಾಣದಬೆಟ್ಟು ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಠಾಣಾ ರೌಡಿ ಆಸಾಮಿ ‘ಡೀಲ್ ನೌಫಲ್’ ಹಾಗೂ ಆತನ ಸಹಚರರಾದ ಅಮ್ಮಿ, ಕೊಟ್ಟು ನಿಜಾಂ ಮತ್ತಿತರರು ಒಂದು ತಂಡದಲ್ಲಿದ್ದರೆ, ಇನ್ನೊಂದೆಡೆ ಮೃತಪಟ್ಟಿರುವ ರೌಡಿ ಟೊಪ್ಪಿ ನೌಫಲ್‌ನ ಸಹಚರರಾದ ರೌಡಿ ಆಸಾಮಿ ಅನ್ಸಾರ್, ಆಸೀಪ್ ಯಾನೆ ಮೊಪ್ಪು ಆಚಿ ಹಾಗೂ ಇಕ್ಬಾಲ್ ಯಾನೆ ಪಾಪು ಮತ್ತಿತರರು ಇನ್ನೊಂದು ತಂಡದಲ್ಲಿದ್ದರು.

    ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಎರಡು ಕಾರುಗಳಲ್ಲಿ ಬಂದಿದ್ದ ಈ ರೌಡಿ ಪಡೆಗಳು ಸಾರ್ವಜನಿಕ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಿ, ಕೈಯಲ್ಲಿ ಮಾರಕಾಯುಧಗಳಾದ ತಲವಾರುಗಳನ್ನು ಹಿಡಿದು ಝಳಪಿಸುತ್ತಾ ಪರಸ್ಪರ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಈ ರೌಡಿ ಗ್ಯಾಂಗ್‌ಗಳ ನಡುವಿನ ಗಲಾಟೆಯಿಂದ ಸ್ಥಳದಲ್ಲಿ ಭೀಕರ ವಾತಾವರಣ ನಿರ್ಮಾಣವಾಗಿ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗಿತ್ತು. ಅಲ್ಲದೆ, “ಈ ಬಗ್ಗೆ ಯಾರಾದರೂ ದೂರು ನೀಡಿದರೆ ಜೀವ ಸಹಿತ ಬಿಡುವುದಿಲ್ಲ” ಎಂದು ಸಾರ್ವಜನಿಕರಿಗೂ ಜೀವ ಬೆದರಿಕೆ ಒಡ್ಡಿದ್ದರು. ಇದರಿಂದಾಗಿ ಸಾರ್ವಜನಿಕರು ಭಯದಿಂದ ದೂರು ನೀಡಲು ಹಿಂಜರಿದಿದ್ದರು.

    ಘಟನೆಯ ಬಗ್ಗೆ ಸೆಪ್ಟೆಂಬರ್ 10ರಂದು ಮಾಹಿತಿ ಲಭಿಸುತ್ತಿದ್ದಂತೆ ಕಂಕನಾಡಿ ನಗರ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿ ಸಿದ್ಧರಾಮ ಅವರು ಸ್ಥಳಕ್ಕೆ ಧಾವಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
    ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಕಂಕನಾಡಿ ನಗರ ಪೊಲೀಸರು, ಅಕ್ರಮ ಕೂಟ ರಚನೆ, ಸಾರ್ವಜನಿಕ ಸ್ಥಳದಲ್ಲಿ ಮಾರಕಾಯುಧ ಪ್ರದರ್ಶನ, ಗ್ಯಾಂಗ್ ವಾರ್ ಯತ್ನ ಹಾಗೂ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಎರಡೂ ಗ್ಯಾಂಗ್‌ನ ಆರೋಪಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ಆರೋಪಿಗಳ ಬಂಧನಕ್ಕಾಗಿ ತನಿಖೆ ಚುರುಕುಗೊಳಿಸಿದ್ದಾರೆ

    Post Views: 1

    Related Posts

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.