ಮಂಗಳೂರು: ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್‌ಬಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗಿರುವ ಅರ್ಜುನ್ ದೇವ್ ನಿರ್ದೇಶನ, ನಟನೆಯ “ಟಾಸ್” ತುಳು ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ತೆಲಿಕೆದ ಬೊಳ್ಳಿ ಡಾ|| ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆ, ಅರ್ಜುನ್ ದೇವ್ ನಿರ್ದೇಶನ ಮತ್ತು ಅಭಿನಯದ “ಟಾಸ್” ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ.
ನಿರ್ಮಾಪಕರು ಪಿ ಅಂಡ್ ವೈ ವಲ್ಡ್ ಟೂರ್ಸ್ ಎಲ್‌ಎಲ್‌ಪಿ ಸಾಗರ್ ಪೂಜಾರಿ, ಕಥೆ-ಚಿತ್ರಕಥೆ-ಸಂಭಾಷಣೆ ಗೀತೆಗಳು, ಡಾ. ದೇವದಾಸ್ ಕಾಪಿಕಾಡ್, ನಿರ್ದೇಶಕರು ಅರ್ಜುನ್ ದೇವ್, ಸಹ ನಿರ್ದೇಶಕರು ಯಶಾಂತ್ ಕಲ್ಲಡ್ಕ, ರಾಕೇಶ್ ಬಿ.ಜೆ., ವಿಕ್ರಮ್ ದೇವಾಡಿಗ, ಸಹಾಯಕ ನಿರ್ದೇಶಕರು ಸೌರವ್ ರಾಮ್, ಸುಜಿತ್ ವಿನೋದ್, ಆಶಿಷ್ ರಾವ್, ಛಾಯಾಗ್ರಹಣ ಜೋಯೆಲ್ ಶಮಡಿ’ ಸೋಜಾ, ಸಹಾಯಕ ಛಾಯಾಗ್ರಾಹಕರು ಅಮನ್ ಪ್ರಖ್ಯಾತ್, ಕಲಾ ನಿರ್ದೇಶನ ರಾಜೇಶ್ ಕೊಳಕೆ, ರಾಜೇಶ್ ಬಾಂಧ್ಯೋಡ್, ಸಂಕಲನ ಯಶ್ವಿನ್ ಕೆ. ಶೆಟ್ಟಿಗಾರ್, ಸಂಗೀತ ಮಣಿಕಾಂತ್ ಕದ್ರಿ, ಕಾರ್ಯಕಾರಿ ನಿರ್ಮಾಪಕರು ಸಂದೀಪ್ ಶೆಟ್ಟಿ, ವಸ್ತ್ರ ವಿನ್ಯಾಸ ಅನುಪ್ ಸಾಗರ್, ವಿತರಕರು ಸಚಿನ್ ಎಎಸ್ ಉಪ್ಪಿನಂಗಡಿ.
ತಾರಾಗಣದಲ್ಲಿ: ಡಾ|| ದೇವದಾಸ್ ಕಾಪಿಕಾಡ್, ಅರ್ಜುನ್ ದೇವ್, ನವೀನ್ ಡಿ. ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಪ್ರಕಾಶ್ ತುಮಿನಾಡು, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರ್, ಸುತೇಜ್ ಶೆಟ್ಟಿ, ಸಂಗೀತಾ ಶೆಟ್ಟಿ, ಶೋಭರಾಜ್ ಪಾವೂರ್, ಚೈತ್ರಾ ಶೆಟ್ಟಿ, ಕೃತಿ ಶೆಟ್ಟಿ ಅಭಿನಯಿಸಿದ್ದಾರೆ.
ಟಾಸ್ ತುಳು ಹಾಗೂ ಕನ್ನಡ ಭಾಷೆಯಲ್ಲಿ ತಯಾರಾಗಿದೆ. ಎರಡನ್ನೂ ಬೇರೆ ಬೇರೆಯಾಗಿ ಚಿತ್ರೀಕರಣ ಮಾಡಲಾಗಿದೆ. ಈ ಸಿನಿಮಾಗಳಿಗೆ ನಟ ಗಣೇಶ್ ಮತ್ತು ಶಿಲ್ಪಾ ಗಣೇಶ್ ಸಾಥ್ ನೀಡಿದ್ದಾರೆ.
ಟಾಸ್ ಸಿನಿಮಾ ಮಂಗಳೂರು, ಸುರತ್ಕಲ್, ಪಡುಬಿದ್ರೆ, ಉಡುಪಿ, ಮಣಿಪಾಲ, ಕುಂದಾಪುರ, ಕಾರ್ಕಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಸಹಿತ ಬೇರೆ ಬೇರೆ ಕಡೆಗಳಲ್ಲಿ ಬಿಡುಗಡೆಗೊಳ್ಳಲಿದೆ. ಬೆಂಗಳೂರು, ಮೈಸೂರು ಮೊದಲಾದ ಕಡೆಗಳಲ್ಲೂ ಸಿನಿಮಾ ಬಿಡುಗಡೆಯಾಗಲಿದೆ.
ಇದೊಂದು ಪಕ್ಕಾ ಕಾಮಿಡಿ ಸಿನಿಮಾ, ಸೆಂಟಿಮೆಂಟ್, ಆಕ್ಷನ್, ಥ್ರಿಲ್ಲರ್ ಹೀಗೆ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಪಕ್ಕಾ ಪ್ಯಾಕೇಜ್. ಎಲ್ಲಾ ಚಿಂತೆಗಳನ್ನು ಬಿಟ್ಟು ಎಂಜಾಯ್ ಮಾಡಬೇಕೆಂದು ರೆಡಿ ಮಾಡಿರುವ ಸಿನಿಮಾ ಇದು. ಹಣ ಕೊಟ್ಟು ಬರುವ ಪ್ರೇಕ್ಷಕರಿಗೆ ಏನೇನು ಬೇಕೋ ಎಲ್ಲವೂ “ಟಾಸ್” ಸಿನಿಮಾದಲ್ಲಿದೆ ಎಂದು ನಿರ್ದೇಶಕ ಅರ್ಜುನ್ ದೇವ್ ತಿಳಿಸಿದ್ದಾರೆ.




