Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026
    Share

    ಉಡುಪಿ: ಮಣಿಪಾಲದ WGSHA ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾಭ್ಯಾಸ ಮಾಡುತ್ತಿದ್ದ ಅಸ್ಸಾಂ ಮೂಲದ ವಿದ್ಯಾರ್ಥಿನಿ ಪೌಲಾ ಲೆಸ್ಲಿ ವಾರ್ಜ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರ ಖಾಸಗಿ ದೂರಿನ ಬಳಿಕ ಯುವಕನೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

    ಅಸ್ಸಾಂ ರಾಜ್ಯದ ನಾಗಾಂವ್ ನಿವಾಸಿ, ಮೃತ ವಿದ್ಯಾರ್ಥಿನಿಯ ತಂದೆ ಲೆಸ್ಲಿ ಜೋಸೆಫ್ ಮ್ಯಾಥ್ಯೂ ಅವರು ನೀಡಿದ ಖಾಸಗಿ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಪೌಲಾ ಲೆಸ್ಲಿ ವಾರ್ಜ್ರಿ ಅವರು 2025ರ ನವೆಂಬರ್ 7ರ ರಾತ್ರಿ 11.45ರಿಂದ ನವೆಂಬರ್ 8ರ ಬೆಳಗ್ಗೆ 8.40ರ ನಡುವಿನ ಅವಧಿಯಲ್ಲಿ ಮಣಿಪಾಲದ ಕಾಯಿನ್ ಸರ್ಕಲ್ ಸಮೀಪದ ಐರಿಸ್ ಪ್ಲಾಜಾ ಕಟ್ಟಡದ 504ನೇ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

    ಈ ಸಂಬಂಧ ಮಣಿಪಾಲ ಠಾಣೆಯಲ್ಲಿ ಯುಡಿಆರ್ ನಂ.45/2025ರಂತೆ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ಸಲ್ಲಿಸಿ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿತ್ತು. ಬಳಿಕ ಮೃತೆಯ ಆಪಲ್ ಐಪ್ಯಾಡ್, ಐಫೋನ್, ಡೈರಿ ಹಾಗೂ ಇತರ ಡಿಜಿಟಲ್ ದಾಖಲೆಗಳನ್ನು ಕುಟುಂಬದವರ ವಶಕ್ಕೆ ನೀಡಲಾಗಿತ್ತು.

    ಮೃತೆಯ ಸಾಧನಗಳು ಹಾಗೂ ಡೈರಿಯನ್ನು ಪರಿಶೀಲಿಸಿದ ವೇಳೆ ಸಾಯಿ ಭಿಂಗಾರೆ @ ಸಾಯಿ ಪಾಟೀಲ್ ಎಂಬಾತನೊಂದಿಗೆ ಸ್ನ್ಯಾಪ್‌ಚಾಟ್ ಮೂಲಕ ನಡೆದಿದ್ದ ಸಂವಹನದ ದಾಖಲೆಗಳು ಪತ್ತೆಯಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದರಿಂದ ಯುವಕನಿಂದ ನಿರಂತರ ಕಿರುಕುಳ, ಬಲವಂತ ಅಥವಾ ಬ್ಲ್ಯಾಕ್‌ಮೇಲ್ ನಡೆದಿರಬಹುದೆಂಬ ಅನುಮಾನ ವ್ಯಕ್ತಪಡಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕುಟುಂಬದವರು ಮನವಿ ಮಾಡಿದ್ದರು.

    ಈ ದೂರಿನ ಆಧಾರದ ಮೇಲೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ಸಂಖ್ಯೆ 90/2026 ಅನ್ನು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 308(5)ರಂತೆ ದಾಖಲಿಸಿಕೊಳ್ಳಲಾಗಿತ್ತು.

    ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಸೂಚನೆಯಂತೆ ಪಿಎಸ್‌ಐ ತಿಮ್ಮೇಶ್ ಬಿ.ಎನ್. ಅವರು ತನಿಖೆ ಕೈಗೊಂಡಿದ್ದು, ಪ್ರಕರಣದ ಆರೋಪಿ ಎಂದು ಹೆಸರಿಸಲಾದ ಸಾಯಿ ಸಂಜಯ್ ಬಿಂಗಾರೆ (21), ತಂದೆ ಸಂಜಯ್ ಬಿಂಗಾರೆ, ಅಲೋಕ್ ಸಿಟಿ ಸೈಲಿ, ದಾದ್ರ ಮತ್ತು ನಗರ ಹವೇಲಿ ಹಾಗೂ ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶ ಎಂಬಾತನನ್ನು ಸೆಪ್ಟೆಂಬರ್ 9, 2026ರಂದು ಬಂಧಿಸಿದ್ದಾರೆ.

    ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 1

    Related Posts

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026

    ಮಂಗಳೂರು: ಸುಲಿಗೆ ಪ್ರಕರಣ- ಇಬ್ಬರು ಆರೋಪಿಗಳಿಗೆ 7 ವರ್ಷ ಜೈಲು, ₹25 ಸಾವಿರ ದಂಡ

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.