Facebook Twitter Instagram
    Wednesday, September 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಟ- ಲಾರಿ ಹಾಗೂ ಚಾಲಕ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಟ- ಲಾರಿ ಹಾಗೂ ಚಾಲಕ ವಶಕ್ಕೆ

    September 23, 2026
    Share

    ಮಂಗಳೂರು: ನಗರದ ಪಡೀಲ್‌ನಲ್ಲಿ ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಕಂಕನಾಡಿ ನಗರ ಠಾಣೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದು, 17 ಜಾನುವಾರುಗಳನ್ನು ರಕ್ಷಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಲಾರಿ ಚಾಲಕ ಸಾದಿಕ್ ಜಿ (23) ಎಂಬಾತನನ್ನು ಬಂಧಿಸಲಾಗಿದ್ದು, ವಾಹನದಲ್ಲಿದ್ದ ಸುಬಾನ್ ಮತ್ತು ರೆಹಮಾನ್ ಎಂಬ ಇಬ್ಬರು ಆರೋಪಿಗಳು ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ.

    ಸೆಪ್ಟೆಂಬರ್ 22ರಂದು ಬೆಳಗಿನ ಜಾವ ಕಂಕನಾಡಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಹಾಗೂ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ, ಈಚರ್ ಲಾರಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬೆಳಿಗ್ಗೆ ಸುಮಾರು 06:30ರ ವೇಳೆಗೆ ಆಡ್ಯಾರು ಕಡೆಯಿಂದ ಮಂಗಳೂರು ನಗರದತ್ತ ಬರುತ್ತಿದ್ದ ಲಾರಿಯನ್ನು ಬೆನ್ನಟ್ಟಿ, ಪಡೀಲ್‌ನ ಟೊಯೋಟಾ ಕಾರ್ ಶೋರೂಮ್ ಎದುರು ತಡೆದು ನಿಲ್ಲಿಸಿದರು.

    ಪೊಲೀಸರು ಲಾರಿಯನ್ನು ತಡೆಯುತ್ತಿದ್ದಂತೆ ಅದರಲ್ಲಿದ್ದ ಒಬ್ಬ ವ್ಯಕ್ತಿ ವಾಹನದಿಂದ ಇಳಿದು ಓಡಿ ಹೋಗಿದ್ದಾನೆ. ಬಳಿಕ ಲಾರಿಯನ್ನು ಪರಿಶೀಲಿಸಿದಾಗ, ಹಸಿರು ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿದ್ದ ಬಾಡಿಯೊಳಗೆ 17 ಜಾನುವಾರುಗಳನ್ನು ಉಸಿರಾಟಕ್ಕೂ ತೊಂದರೆಯಾಗುವಂತೆ, ಹಿಂಸಾತ್ಮಕವಾಗಿ ಒಂದಕ್ಕೊಂದು ಬಿಗಿದು ಕಟ್ಟಿರುವುದು ಕಂಡುಬಂದಿದೆ.

    ಪೊಲೀಸರು ತಕ್ಷಣವೇ 17 ಜಾನುವಾರುಗಳನ್ನು ರಕ್ಷಿಸಿ, ಕೃತ್ಯಕ್ಕೆ ಬಳಸಿದ್ದ ಈಚರ್ ಲಾರಿ ಹಾಗೂ ಚಾಲಕನ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

    Post Views: 1

    Related Posts

    ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಕೊಲೆ..!! ಕಾರಿನಲ್ಲಿ 9 ತುಂಡಾಗಿ ಶವ ಪತ್ತೆ!!

    September 23, 2026

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026

    ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

    September 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಟ- ಲಾರಿ ಹಾಗೂ ಚಾಲಕ ವಶಕ್ಕೆ

    September 23, 2026

    ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಕೊಲೆ..!! ಕಾರಿನಲ್ಲಿ 9 ತುಂಡಾಗಿ ಶವ ಪತ್ತೆ!!

    September 23, 2026

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.