Facebook Twitter Instagram
    Friday, September 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ: 9 ಮಂದಿ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ: 9 ಮಂದಿ ಬಂಧನ

    September 24, 2026
    Share

    ಉಡುಪಿ ಜಿಲ್ಲೆಯ ಶಿರ್ವ ಹಾಗೂ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಒಟ್ಟು 9 ಮಂದಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಗಾಂಜಾ, ಮೆಥಾಂಫೆಟಮೈನ್, ನಗದು, ಎರಡು ಕಾರು, ಸ್ಕೂಟರ್, ಮೊಬೈಲ್ ಫೋನ್‌ಗಳು ಹಾಗೂ ತೂಕದ ಯಂತ್ರ ಸೇರಿದಂತೆ ಒಟ್ಟು 16,01,584 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಸೆ.22ರಂದು ಕಾಪು ಠಾಣಾ ಪಿಎಸ್‌ಐ ಶುಭಕರ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಬೆಳ್ಳೆ ಗ್ರಾಮದ ಪಡುಬೆಳ್ಳೆ ಭದ್ರಮ್ಮ ರಸ್ತೆಯಲ್ಲಿ ಸಂಜೆ 4.35ಕ್ಕೆ ದಾಳಿ ನಡೆಸಲಾಯಿತು. ಎರಡು ಕಾರು ಹಾಗೂ ಸ್ಕೂಟರ್‌ನಲ್ಲಿ ಮಾದಕ ವಸ್ತುಗಳನ್ನು ಹೊಂದಿದ್ದ ಆರೋಪಿಗಳಿಂದ 1,354.28 ಗ್ರಾಂ ಗಾಂಜಾ (₹67,714 ಮೌಲ್ಯ) ಮತ್ತು 32.74 ಗ್ರಾಂ ಮೆಥಾಂಫೆಟಮೈನ್ (₹1,30,960 ಮೌಲ್ಯ) ವಶಪಡಿಸಿಕೊಳ್ಳಲಾಯಿತು. ಇದಲ್ಲದೆ ಕೃತ್ಯಕ್ಕೆ ಬಳಸಿದ ಎರಡು ಕಾರುಗಳು ಹಾಗೂ ಒಂದು ಸ್ಕೂಟರ್, 9 ಮೊಬೈಲ್ ಫೋನ್‌ಗಳು, ಎರಡು ತೂಕದ ಯಂತ್ರಗಳು ಹಾಗೂ 75,010 ನಗದು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಅಲ್ನಾಜ್ ಅಲಿಯಾಸ್ ಮೊಹಮ್ಮದ್ ಅನಾಸ್, ಮೊಹಮ್ಮದ್ ಅಲ್ತಾಪ್, ಸ್ಟ್ಯಾನಿ ಸಂದೀಪ್, ಶಾಕೀಬ್, ಮೊಹಮ್ಮದ್ ಫೈಜಲ್, ಇಮ್ತಿಯಾಜ್, ಅಜಯ್ ಕುಮಾರ್ ಹಾಗೂ ಸಂತೋಷ್ ದೇವಾಡಿಗ ಎಂಬ 8 ಮಂದಿಯನ್ನು ಬಂಧಿಸಲಾಗಿದೆ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಅನಿಲ್ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಕೇರಳದ ಉಪ್ಪಳದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಾದಿರಾಜ ರಸ್ತೆಯ 3ನೇ ಅಡ್ಡರಸ್ತೆಯಲ್ಲಿರುವ ಮನೆಯೊಂದರ ಮೇಲೆ ಸೆ.23ರಂದು ರಾತ್ರಿ 12.10ಕ್ಕೆ ದಾಳಿ ನಡೆಸಿದ ಪೊಲೀಸರು, ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದ 1 ಕೆಜಿ 659.91 ಗ್ರಾಂ ಗಾಂಜಾ (ಅಂದಾಜು 83,000 ರೂ.ಮೌಲ್ಯ) ಹಾಗೂ 1,26,500 ನಗದು ವಶಪಡಿಸಿಕೊಂಡಿದ್ದಾರೆ. ಗಾಂಜಾ ತೂಕ ಮಾಡಲು ಬಳಸುತ್ತಿದ್ದ ಡಿಜಿಟಲ್ ಸ್ಕೇಲ್ ಹಾಗೂ ಇತರ ಸಾಮಗ್ರಿಗಳನ್ನೂ ವಶಪಡಿಸಿಕೊಂಡು, ಶ್ರೀವತ್ಸ ಕೆ.ಜಿ. (31) ಎಂಬಾತನನ್ನು ಬಂಧಿಸಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಪ್ರಕಾಶ್ ತನಿಖೆ ಕೈಗೊಂಡಿದ್ದಾರೆ. ಬಂಧಿತರ ಪೈಕಿ ಕೆಲವರ ವಿರುದ್ಧ ಈಗಾಗಲೇ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಸ್ಟ್ಯಾನ್ಲಿ ಸಂದೀಪ್ ವಿರುದ್ಧ ಮಣಿಪಾಲ ಠಾಣೆಯಲ್ಲಿ ಒಂದು ಪ್ರಕರಣ, ಮೊಹಮ್ಮದ್ ಫೈಜಲ್ ವಿರುದ್ಧ ಮಲ್ಪೆ, ಕಾರ್ಕಳ ಗ್ರಾಮಾಂತರ ಹಾಗೂ ಮಣಿಪಾಲ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಮೂರು ಪ್ರಕರಣಗಳಿವೆ. ಇಮ್ತಿಯಾಜ್ ವಿರುದ್ಧ ಉಡುಪಿ ನಗರ, ಬ್ರಹ್ಮಾವರ, ಮಲ್ಪೆ ಹಾಗೂ ಮಣಿಪಾಲ ಠಾಣೆಗಳಲ್ಲಿ ಒಟ್ಟು ಎಂಟು ಪ್ರಕರಣಗಳಿದ್ದು, ಅಜಯ್ ಕುಮಾರ್ ವಿರುದ್ಧ ಉಡುಪಿ ನಗರ, ಮಣಿಪಾಲ ಹಾಗೂ ಶಿರ್ವ ಠಾಣೆಗಳಲ್ಲಿ ಒಟ್ಟು ಮೂರು ಪ್ರಕರಣಗಳಿವೆ. ಸಂತೋಷ್ ದೇವಾಡಿಗ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಎರಡು ಗಾಂಜಾ ಸೇವನೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್‌ಪಿ ಈಶಿತಾ ಗುಪ್ತಾ ಹಾಗೂ ಉಡುಪಿ ಉಪವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಪಿ. ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಶಿರ್ವ ಪಿಎಸ್‌ಐ ಅನಿಲ್, ಕಾಪು ಪಿಎಸ್‌ಐ ಶುಭಕರ, ಎಎಸ್‌ಐ ಸುದೇಶ್‌, ಸುಂದರಗೌಡ, ಮಂಜುನಾಥ, ಹರ್ಷ, ಅರುಣ, ನಾಗರಾಜ, ಶರಣ, ಕಿಶೋರ ಹಾಗೂ ಸೆನ್ ಪೊಲೀಸ್ ಠಾಣಾ ಸಿಬ್ಬಂದಿಯವರಾದ ಪ್ರವೀಣ, ದೀಕ್ಷೀತ್‌, ಮಣಿಪಾಲ ಪೊಲೀಸ್ ಠಾಣೆಯ ವಿಶ್ವಜಿತ್‌ ಮತ್ತು ಉಡುಪಿ ನಗರ ಪೊಲೀಸ್‌ ಠಾಣಾ ಪಿಎಸ್ಐ ಭರತೇಶ್ ಕಂಕಣವಾಡಿ, ಪಿಎಸ್‌ಐ ಪ್ರಕಾಶ್‌, ಠಾಣಾ ಸಿಬ್ಬಂದಿಯವರಾದ ಬಶೀರ್‌ ಅಹ್ಮದ್‌, ಆನಂದ ಗಾಣಿಗ ಇತರ ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    Post Views: 42

    Related Posts

    18 ವರ್ಷ ಸೇವೆ ಸಲ್ಲಿಸಿದ್ದ ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

    September 25, 2026

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    18 ವರ್ಷ ಸೇವೆ ಸಲ್ಲಿಸಿದ್ದ ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

    September 25, 2026

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು; ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

    September 25, 2026

    ನಿಯಂತ್ರಣ ತಪ್ಪಿ ಆಟೋಗೆ ಆಂಬ್ಯುಲೆನ್ಸ್ ಡಿಕ್ಕಿ- ಚಾಲಕ ಗಂಭೀರ

    September 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.