ಉಡುಪಿ ಸಮೀಪದ ಮಣಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೆಂದೂರು ಕಟ್ಟೆ ಎಂಬಲ್ಲಿ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್‌ಗೆ ಬೆಳಗಿನ ಜಾವ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ.
ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಪೆಟ್ರೋಲ್ ಪಂಪ್ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ.
ವ್ಯಾಪ್ತಿಯ ದೆಂದೂರು ಕಟ್ಟೆ ಎಂಬಲ್ಲಿ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್‌ಗೆ ಬೆಳಗಿನ ಜಾವ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ
ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಪೆಟ್ರೋಲ್ ಪಂಪ್ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ.
ಬೆಂಕಿ ಹೊತ್ತಿಕೊಂಡ ಬಸ್‌ನ ಸಮೀಪದಲ್ಲೇ ಇನ್ನೆರಡು ಬಸ್‌ಗಳು ಹಾಗೂ ಟೆಂಪೋ ಕೂಡ ನಿಲ್ಲಿಸಲಾಗಿತ್ತು.
ಅಲ್ಲದೆ, ಬಸ್‌ಗಳ ಪಕ್ಕದಲ್ಲೇ ಪೆಟ್ರೋಲ್ ಪಂಪ್ ಇದ್ದ ಕಾರಣ ಬೆಂಕಿ ಇತರ ವಾಹನಗಳಿಗೆ ಅಥವಾ ಪೆಟ್ರೋಲ್ ಪಂಪ್‌ಗೆ ವ್ಯಾಪಿಸಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಅಪಾಯ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯಲ್ಲಿ ಬಸ್‌ಗೆ ಭಾರೀ ಹಾನಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಪೆಟ್ರೋಲ್ ಪಂಪ್ ಮಾಲೀಕರು ಹಾಗೂ ಬೆಂಕಿಗಾಹುತಿಯಾದ ಬಸ್‌ನ ಮಾಲೀಕರು ಒಬ್ಬರೇ ಎಂದು ವರದಿಯಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




