Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಒಂಟಿ ಮಹಿಳೆಗೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ-ಮೂವರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಒಂಟಿ ಮಹಿಳೆಗೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ-ಮೂವರು ಆರೋಪಿಗಳ ಬಂಧನ

    September 16, 2022
    Share

    ಮೂಡುಬಿದಿರೆ: ತಾಲೂಕಿನ ಅಶ್ವಥಪುರದ ಬೇರಿಂಜೆ ಗುಡ್ಡ ಎಂಬಲ್ಲಿ ಒಂಟಿ ಮಹಿಳೆ ಕಮಲ ಅವರ ಮನೆಗೆ ಕಳೆದ 15 ದಿನಗಳ ಹಿಂದೆ ನುಗ್ಗಿ ಕುತ್ತಿಗೆ ಹಿಡಿದು ಚಿನ್ನಾಭರಣ ಕಳವು ಮಾಡಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಶ್ವತ್ಥಪುರದ ನಿವಾಸಿಗಳಾದ ದಿನೇಶ್‌ ಪೂಜಾರಿ, ಸುಕೇಶ್‌ ಪೂಜಾರಿ ಹಾಗೂ ಹರೀಶ್ ಪೂಜಾರಿ ಬಂಧಿತ ಆರೋಪಿಗಳು. ಅಂಗನವಾಡಿ ಸಹಾಯಕಿಯಾಗಿ ದುಡಿಯುತ್ತಿದ್ದ ಕಮಲ ಒಂಟಿಯಾಗಿ ವಾಸವಿದ್ದು. ಇದರ ಮಾಹಿತಿ ಇದ್ದ ಆರೋಪಿಗಳು ಕಳೆದ ತಿಂಗಳು 2 ಜನ ಮಂಕಿಕ್ಯಾಪ್ ಹಾಕಿ ಕೈಗೆ ಹ್ಯಾಂಡ್ ಗೌಸ್ ಹಾಕಿ ಕೈಯಲ್ಲಿ ತಲವಾರು ಹಿಡಿದು ಕೊಂಡು ಬಂದು ಕಮಲರವರ ಕುತ್ತಿಗೆ ಅದುಮಿ ಹಿಡಿದು ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ಮತ್ತು ಚಿನ್ನದ 2 ಬಳೆಗಳನ್ನು ಬಲವಂತದಿಂದ ತೆಗೆದು ಸುಲಿಗೆ ಮಾಡಿದ್ದು, ಈ ಬಗ್ಗೆ ಮೂಡಬಿದ್ರೆ ಠಾಣೆಯಲ್ಲಿ ಪ್ರಕಣ ದಾಖಲಾಗಿತ್ತು.

    ಈ ಪ್ರಕರಣವು ಗಂಭೀರ ಪ್ರಕರಣವಾದ್ದರಿಂದ ಈ ಪ್ರಕರಣದ ಪತ್ತೆಗೆ ಬಗ್ಗೆ ಸಿಸಿಬಿ ಘಟಕದ ವಿಶೇಷ ತಂಡ ರಚನೆ ಮಾಡಿದ್ದು, ಸಿಸಿಬಿ ಘಟಕದ ವಿಶೇಷ ತಂಡದವರು ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿಕೊಂಡು ಪತ್ತೆಗೆ ಬಲೆ ಬೀಸಿದ್ದರು.ಸುಲಿಗೆ ಮಾಡಿದ ಆರೋಪಿಗಳು 3 ಜನ ಸೇರಿ ಚಿನ್ನಾಭರಣಗಳನ್ನು ಮಾರಾಟ ಮಾಡಲು ಮಂಗಳೂರಿಗೆ ಬರುತ್ತಿದ್ದಾರೆಂದು ಮಾಹಿತಿ ಪಡೆದು 3 ಜನ ಆರೋಪಿಗಳನ್ನು ಕುಲಶೇಖರ ಚರ್ಚ್‌ ಗೇಟ್ ಬಳಿ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರಿಂದ ಸುಲಿಗೆ ಮಾಡಿದ ಚಿನ್ನಾಭರಣಗಳನ್ನು ಮತ್ತು ಕೃತ್ಯಕ್ಕೆ ಬಳಸಿದ 2 ಸ್ಕೂಟರ್ ಮತ್ತು 3 ಮೊಬೈಲ್ ಫೋನ್, 1 ತಲವಾರು, 2 ಮಂಕಿಕ್ಯಾಪ್ ಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಫಿರ್ಯಾದಿದಾರರಾದ ಒಂಟಿ ಮಹಿಳೆ ಕಮಲಾರವರಿಗೆ ಹಿಂದೆ ಮುಂದೆ ಯಾರೂ ಸಂಬಂಧಿಕರಿಲ್ಲವೆಂದು, ಅವರಿಗೆ ಹಲ್ಲೆ ನಡೆಸಿ, ಸುಲುಗೆ ಮಾಡಿದರೆ ಯಾರೂ ಕೂಡ ಪೊಲೀಸ್ ಠಾಣೆಗೆ ದೂರು ನೀಡಲು ಬರುವುದಿಲ್ಲವೆಂದು. ನಡೆದು ಸುಲಿಗೆ ಯಾದ ನಂತರ ಸಹಾಯ ಮಾಡುವ ಹಾಗೆ ನಾಟಕಮಾಡಿಕೊಂಡು ಈ ಕೃತ್ಯ ಎಸಗಿರುತ್ತಾರೆ. ಅರೋಪಿಗಳಾದ ದಿನೇಶ್‌ ಪೂಜಾರಿ, ಸುಕೇಶ್ ಪೂಜಾರಿ ಮತ್ತು ಹರೀಶ್‌ ಪೂಜಾರಿ ರವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಅಡಿಕೆ ಕಳವು ಪ್ರಕರಣವು ದಾಖಲಾಗಿದ್ದು, 3 ಜನ ಕೂಡ ಸದ್ರಿ ಪ್ರಕರಣದಲ್ಲಿ ಆರೋಪಿಗಳಾಗಿರುತ್ತಾರೆ. ಆರೋಪಿಗಳ ಪೈಕಿ ಸುಕೇಶ್‌ ಪೂಜಾರಿ ಎಂಬಾತನ ವಿರುದ್ಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪೋಸ್ಕೊ ಪ್ರಕರಣದ ದಾಖಲಾಗಿದ್ದು, ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ:307 ಐಪಿಸಿ ಯಂತೆ ಕೊಲೆ ಯತ್ನ ಪ್ರಕರಣವು ದಾಖಲಾಗಿದ್ದು ಈ ಎರಡೂ ಪ್ರಕರಣದಲ್ಲೂ ಕೂಡ ಸುಕೇಶ್ ಪೂಜಾರಿ ಆರೋಪಿಯಾಗಿರುತ್ತಾನೆ.

    Post Views: 267

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.