Facebook Twitter Instagram
    Sunday, September 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ:₹24 ಲಕ್ಷ ಮೌಲ್ಯದ 240 ಗ್ರಾಂ MDMA ವಶ, ಮೂವರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ:₹24 ಲಕ್ಷ ಮೌಲ್ಯದ 240 ಗ್ರಾಂ MDMA ವಶ, ಮೂವರ ಬಂಧನ

    September 27, 2026
    Share

    ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಬಂಧಿತರಿಂದ ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

    ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಂಗಳೂರಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸೆ.26 ರಂದು ಸಂಜೆ ಉಳ್ಳಾಲ ತಾಲೂಕು ಮುಡಿಪು ಕಾಯರ್ ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

    ಬಂಧಿತರಿಂದ 240 ಗ್ರಾಂ ಎಂಡಿಎಂಎ(₹24 ಲಕ್ಷ), 4 ಮೊಬೈಲ್ ಫೋನ್ ಹಾಗೂ ಸಾಗಾಟಕ್ಕೆ ಬಳಸಿದ ಟೆಂಪೋ ವಾಹನ ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹29,80,000 ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಂಧಿತ ಆರೋಪಿಗಳನ್ನು ನವಾಜ್ @ ನವ್ವಾ @ ಮುಡಿಪು ನವಾಜ್ (35), ಮೊಹಮ್ಮದ್ ಆರೀಫ್ ಎನ್ (36), ಲಾಯ್ಡ್ ಡಿಸೋಜಾ (35) ಎಂದು ಗುರುತಿಸಲಾಗಿದೆ.

    ಆರೋಪಿ ನವಾಜ್ @ ನವ್ವಾ @ ಮುಡಿಪು ನವಾಜ್ ಎಂಬಾತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ಮೋಸ, ದನಗಳ್ಳತನ ಹಾಗೂ ಮಾದಕವಸ್ತು ಮಾರಾಟ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 16 ಪ್ರಕರಣಗಳು ದಾಖಲಾಗಿವೆ. ಕೊಣಾಜೆಯಲ್ಲಿ 12, ಉಳ್ಳಾಲದಲ್ಲಿ 2, ಮುಲ್ಕಿ ಹಾಗೂ ಸುರತ್ಕಲ್ ನಲ್ಲಿ ತಲಾ 1 ಪ್ರಕರಣ ದಾಖಲಾಗಿದ್ದು, ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆ ಮತ್ತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ತಲಾ ಎರಡು ಪ್ರಕರಣ ಸೇರಿದಂತೆ ಒಟ್ಟು 04 ಪ್ರಕರಣಗಳು ದಾಖಲಾಗಿದೆ.

    ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Post Views: 1

    Related Posts

    ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಗೆ ಪ್ರತಿಕಾರದ ಹತ್ಯೆಗೆ ನಡೆದಿದ್ದ ಭಾರಿ ಸಂಚು ಬಯಲು- ಪ್ರಕರಣ ದಾಖಲು

    September 27, 2026

    ಮಂಗಳೂರು: ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

    September 27, 2026

    ಮಂಗಳೂರು: ವಿದ್ಯಾರ್ಥಿಗಳ ಕಾರ್ಯಕ್ರಮ ವೇಳೆ ಸಭಾಭವನದ ಬಾಲ್ಕನಿ ತಡೆಗೋಡೆ ಕುಸಿದು ಬಿದ್ದು 4 ಮಂದಿ ವಿದ್ಯಾರ್ಥಿಗಳಿಗೆ ಗಾಯ,ಓರ್ವ ಗಂಭೀರ

    September 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ:₹24 ಲಕ್ಷ ಮೌಲ್ಯದ 240 ಗ್ರಾಂ MDMA ವಶ, ಮೂವರ ಬಂಧನ

    September 27, 2026

    ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಗೆ ಪ್ರತಿಕಾರದ ಹತ್ಯೆಗೆ ನಡೆದಿದ್ದ ಭಾರಿ ಸಂಚು ಬಯಲು- ಪ್ರಕರಣ ದಾಖಲು

    September 27, 2026

    ಮಂಗಳೂರು: ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

    September 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.