Facebook Twitter Instagram
    Monday, September 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿದ್ಯುತ್ ಕೇಬಲ್ ಕಳವು ಪ್ರಕರಣ – ನಾಲ್ವರ ಅರೆಸ್ಟ್!!
    ಇತ್ತೀಚಿನ ಸುದ್ದಿ

    ವಿದ್ಯುತ್ ಕೇಬಲ್ ಕಳವು ಪ್ರಕರಣ – ನಾಲ್ವರ ಅರೆಸ್ಟ್!!

    September 28, 2026
    Share

    ಕಾಸರಗೋಡು; ಪೆರ್ಲ ಗುಣಾಜೆಯಲ್ಲಿ KSEB ಗೆ ಸೇರಿದ ಲಕ್ಷಾಂತರ ರೂಪಾಯಿ ಮೌಲ್ಯದ ವಿದ್ಯುತ್ ಕೇಬಲ್ ಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಬಿ.ಸಿ. ರೋಡ್ ನಿವಾಸಿ ನೌಶಾದ್ (34), ಕಿದೂರು ನಿವಾಸಿ ಮುಹಮ್ಮದ್ (41), ಕರ್ನಾಟಕ ಮೂಲದ ಸಾಹಿದ್ (29) ಮತ್ತು ನವೀನ್ (48) ಬಂಧಿತ ಆರೋಪಿಗಳು.

    ಕೃತ್ಯದಲ್ಲಿ ಭಾಗಿಯಾದ ಇನ್ನು ಇಬ್ಬರು ತಲೆಮರೆಸಿಕೊಂಡಿದ್ದು, ಪೊಲೀಸರು ಅವರಿಗಾಗಿ ಜಾಲ ಬೀಸಿದ್ದಾರೆ. ಸೆಪ್ಟೆಂಬರ್ 24ರಂದು ಮುಂಜಾನೆ ಪೆರ್ಲ ಎಲೆಕ್ಟ್ರಿಕಲ್ ಸೆಕ್ಷನ್ ವ್ಯಾಪ್ತಿಯ ಗುಣಾಜೆಯ ಟ್ರಾನ್ಸ್ಫಾರ್ಮರ್ ಬಳಿಯಿಂದ ಸುಮಾರು 4 ಲಕ್ಷ ರೂ. ಮೌಲ್ಯದ 1,000 ಮೀಟರ್ ಉದ್ದದ LTAB ಕೇಬಲ್ ಗಳನ್ನು ಕಳ್ಳರು ದೋಚಿದ್ದರು. ಮುಖವಾಡ ಧರಿಸಿ ಪಿಕಪ್ ವ್ಯಾನ್ ನಲ್ಲಿ ಬಂದಿದ್ದ ಕಳ್ಳರ ತಂಡವು ಕೇಬಲ್ ಗಳನ್ನು ಸಾಗಿಸುತ್ತಿದ್ದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಬೆಳಗ್ಗೆ ಸ್ಥಳೀಯರು ಗಮನಿಸಿ KSEB ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

    ಬಳಿಕ ಪೆರ್ಲ ಎಲೆಕ್ಟ್ರಿಕಲ್ ಸೆಕ್ಷನ್ ಅಸಿಸ್ಟೆಂಟ್ ಎಂಜಿನಿಯರ್ ಬದಿಯಾಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಆರಂಭಿಸಿದರು. ಕಳ್ಳತನದ ಬಳಿಕ ಆರೋಪಿಗಳು ಕರ್ನಾಟಕದ ಕಡೆಗೆ ಪಲಾಯನ ಮಾಡಿರುವುದು ಪತ್ತೆಯಾಗಿತ್ತು. ಬಂಧಿತರಿಂದ ಕಳವು ಮಾಡಲಾಗಿದ್ದ ಸಂಪೂರ್ಣ ಕೇಬಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ

    Post Views: 8

    Related Posts

    ಬಂಟ್ವಾಳ: ಮಾಣಿ ಫ್ಲೈ ಓವರ್ ರಸ್ತೆಯಲ್ಲಿ ಭೀಕರ ಅಫಘಾತ – ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

    September 28, 2026

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ:₹24 ಲಕ್ಷ ಮೌಲ್ಯದ 240 ಗ್ರಾಂ MDMA ವಶ, ಮೂವರ ಬಂಧನ

    September 27, 2026

    ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಗೆ ಪ್ರತಿಕಾರದ ಹತ್ಯೆಗೆ ನಡೆದಿದ್ದ ಭಾರಿ ಸಂಚು ಬಯಲು- ಪ್ರಕರಣ ದಾಖಲು

    September 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮಾಣಿ ಫ್ಲೈ ಓವರ್ ರಸ್ತೆಯಲ್ಲಿ ಭೀಕರ ಅಫಘಾತ – ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ..!

    September 28, 2026

    ವಿದ್ಯುತ್ ಕೇಬಲ್ ಕಳವು ಪ್ರಕರಣ – ನಾಲ್ವರ ಅರೆಸ್ಟ್!!

    September 28, 2026

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ:₹24 ಲಕ್ಷ ಮೌಲ್ಯದ 240 ಗ್ರಾಂ MDMA ವಶ, ಮೂವರ ಬಂಧನ

    September 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.