ಮಂಗಳೂರು: ಇಲ್ಲಿನ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ. ‘ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, 9 ಕಾರ್ಮಿಕರಿಗೆ ಗಾಯಗಳಾಗಿವೆ. ಪ್ರಸ್ತುತ ಬೆಂಕಿ ನಿಯಂತ್ರಣಕ್ಕೆ ಬಂದಿದೆ’ ಎಂದು ಮಂಗಳೂರು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಓರ್ವ ಸಾವು; 9 ಜನರಿಗೆ ಗಾಯ
ಮನೀಶ್(30) ಮೃತ ವ್ಯಕ್ತಿ. ಸುರತ್ಕಲ್ ನಿವಾಸಿ ರಾಜೇಶ್ಗೆ ಶೇಕಡಾ 35ರಷ್ಟು ಗಾಯಗಳಾಗಿದ್ದು, ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪ್ರಸಾದ್, ಇಂದ್ರಜೀತ್, ರಾಮನ್ಗೆ ಎಜಿ ಆಸ್ಪತ್ರೆಗೆ ಮತ್ತು ಗಾಯಾಳುಗಳಾದ ಜೆರೋಮ್, ಜಯರಾಮ್, ಅವಿನಾಶ್, ಅಕ್ಷಯ್ ಹಾಗೂ ಮತ್ತೋರ್ವನಿಗೆ MRPL ಆಸ್ಪತ್ರೆಗೆ ದಾಖಲಿಸಲಾಗಿದೆ.




