Facebook Twitter Instagram
    Thursday, October 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘ (KCDA ) ಇದರ 68ನೇ ವಾರ್ಷಿಕ ಮಹಾಸಭೆ
    ಇತ್ತೀಚಿನ ಸುದ್ದಿ

    ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘ (KCDA ) ಇದರ 68ನೇ ವಾರ್ಷಿಕ ಮಹಾಸಭೆ

    October 1, 2026
    Share

    ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ 68ನೇ ವಾರ್ಷಿಕ ಮಹಾಸಭೆಯು ಮಂಗಳೂರಿನ ದೇರೆಬೈಲ್ ಚರ್ಚ್ ಹಾಲ್ ನಲ್ಲಿ ಸೆಪ್ಟೆಂಬರ್ 06 ರಂದು ನಡೆಯಿತು . ದಕ್ಷಿಣ ಕನ್ನ್ನಡ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘ (ರಿ ) SKDCDAಇದರ ಆತಿಥ್ಯ ವಹಿಸಿತ್ತು . ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ 300ಕ್ಕೂ ಹೆಚ್ಚು ಪ್ರತಿನಿಧಿಗಳು , ಜಿಲ್ಲಾ ಸಂಘಗಳ ಅದ್ಯಕ್ಷರು , ಪದಾಧಿಕಾರಿಗಳೂ ಈ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ್ದರು. ದಕ್ಷಿಣ ಕನ್ನ್ನಡ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘ ದ ಅದ್ಯಕ್ಷರಾದ ಶ್ರೀ ಅರುಣ್ ಶೆಟ್ಟಿ ಇವರು ಸಂಘದ ಕ್ರಿಯಾಶೀಲ ಚಟುವಟಿಕೆಗಳು ಹಾಗೂ ನಡೆದು ಬಂದ ಹಾದಿಯನ್ನು ಪ್ರಾಸ್ತಾ ವಿಕವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು. ಶ್ರೀ ಶಶಿಧರ ಪಳಂಗಾಯ ಇವರು ಕರಾವಳಿಯ ಸಾಂಪ್ರದಾಯಿಕ ವೈಶಿಷ್ಟ್ಯ , ಶ್ರೀಮಂತ ಪರಂಪರೆ , ಸಂಸ್ಕ್ರತಿ , ಕಲೆ, ಸಾಹಿತ್ಯ, ವೈದ್ಯಕೀಯ ಸೇವಾ ಪರಂಪರೆಯನ್ನು ಸಭೆ ಮುಂದಿರಿಸಿದರು.


    ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘ ದ ಅಧ್ಯಕ್ಷರಾದ ಶ್ರೀ ರಘುನಾಥ್ ರೆಡ್ಡಿ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎ.ಕೆ. ಜೀವನ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಶುಭ ಚಾಲನೆ ನೀಡಿದರು. ಕರಾವಳಿಯ ಫಲವಂತಿಕೆಯ ಸಂಕೇತವಾದ ಭತ್ತ ತುಂಬಿದ ಕಳಸದಲ್ಲಿ ತೆಂಗಿನ ಕೋಡನ್ನು ತೆರೆಯುವ ಮೂಲಕ ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಚಾಲನೆಯನ್ನು ವೇದಿಕೆಯಲ್ಲಿ ನೀಡಲಾಯಿತು . ನಾಡಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮವನ್ನು ಅಧಿಕೃತ ಅನಾವರಣಗೊಳಿಸಲಾಯಿತು.


    ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘ ದ ಅಧ್ಯಕ್ಷರಾದ ಶ್ರೀ ರಘುನಾಥ್ ರೆಡ್ಡಿ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎ .ಕೆ ಜೀವನ್ , ಉಪಾಧ್ಯಕ್ಷರಾದ ಶ್ರೀ ಬಿ. ಕೆ ಪ್ರಸನ್ನ ಕುಮಾರ್ , ಶ್ರೀ ಶಿವರಾಜ್ ಪಾಟೀಲ್ , ಖಜಾಂಚಿ ಬಿ.ಉಮೇಶ್ , ಸಹ ಕಾರ್ಯದರ್ಶಿ ಶ್ರೀ ಸತ್ಯನಾರಾಯಣ ಕೆಳಗಾರ್ , ಸಂಘಟನಾ ಕಾರ್ಯದರ್ಶಿ ವಿಜಯ ಕುಮಾರ್ ಎಸ್ ಬುರುಲಿ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಶ್ರೀ ಅರುಣ್ ಶೆಟ್ಟಿ ಹಾಗೂ ಕಾರ್ಯದರ್ಶಿ ಶ್ರೀ ಡಾ. ಎ. ಕೆ. ಜಮಾಲ್.ಜಮಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಧನ್ಯವಾದ ಸಮರ್ಪಿಸಿದರು. ಶ್ರೀ ಶಶಿಧರ ಪಳಂಗಾಯ ಕಾರ್ಯಕ್ರಮ ನಿರೂಪಿಸಿದರು.


    ನಂತರ ನಡೆದ 68ನೇ ವಾರ್ಷಿಕ ಮಹಾಸಭೆಯ ಸರ್ವಾಧ್ಯಕ್ಷತೆಯನ್ನು ವಹಿಸಿದ KCDA ಇದರ ಅಧ್ಯಕ್ಷರಾದ ಶ್ರೀ ರಘುನಾಥ್ ರೆಡ್ಡಿಯವರು ಪ್ರಸ್ತುತ ಔಷಧಿ ವ್ಯಾಪಾರಿಗಳು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು ಮತ್ತು ಸಮಾಜದ ಮೇಲೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಸಂಘದ ವಾರ್ಷಿಕ ಲೆಕ್ಕಪತ್ರ ವನ್ನು ಸಭೆಯ ಮುಂದಿರಿಸಿ ಅನುಮೋದನೆ ಪಡೆಯಲಾಯಿತು . ಔಷಧಿ ವ್ಯಾಪಾರಿಗಳಾಗಿ ಸಾಮಾಜಿಕ ಅಭ್ಯುದಯಕ್ಕಾಗಿ ತಮ್ಮನ್ನು ತೊಡಗಿಸಿಕೊಂಡ ಮೂವರು ಹಿರಿಯ ಫಾರ್ಮಸಿಸ್ಟ್ ಗಳಾದ

    1 ಶ್ರೀ ಸದಾನಂದ ಶೆಟ್ಟಿ ಗಣೇಶ್ ಮೆಡಿಕಲ್ಸ್
    ಮಂಗಳೂರು
    2 ಶ್ರೀ ಅಶೋಕ್ ವಿ. ಬಿಜ್ಜಲ್ ಅಶೋಕ್ ಮೆಡಿಕಲ್ ಸ್ಟೋರ್ಸ್ ಬಾಗಲಕೋಟೆ.
    3 ಶ್ರೀ ಕೆ. ಪ್ರಭಾಕರನ್ ಭಾರ್ಗವಿ ಫಾರ್ಮ್ ಮಂಡ್ಯ

    “ಕೆಮಿಸ್ಟ್ ರತ್ನ ಪ್ರಶಸ್ತಿ-2026” ಪ್ರಧಾನ ಮಾಡಲಾಯಿತು , KCDA ಇದರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎ. ಕೆ. ಜೀವನ್ ಔಷಧ ವ್ಯಾಪಾರದಲ್ಲಿರುವ ಸವಾಲುಗಳ ಸಮರ್ಪಕ ನಿರ್ವಹಣಾ ಮನವಿಯನ್ನು ಸಭೆಯ ಮುಂದಿರಿಸಿ ಕರ್ನಾಟಕ ಸರಕಾರದ ಆರೋಗ್ಯ ಮಂತ್ರಿಗಳಾದ ಶ್ರೀ ಯು.ಟಿ ಖಾದರ್ ರವರಿಗೆ ಸಲ್ಲಿಸುವುದಾಗಿ ತಿಳಿಸಿದರು. ರಾಜ್ಯದ ವಿವಿದೆಡೆಯಿಂದ ಭಾಗವಹಿಸಿದ ಪ್ರತಿನಿಧಿಗಳಿಗೆ ನೆನಪಿನ ಸ್ಮರಣಿಕೆ ನೀಡುವುದರೊಂದಿಗೆ 68ನೇ ವಾರ್ಷಿಕ ಮಹಾಸಭೆಯು ಯಶಸ್ವಿಯಾಗಿ ನೆರವೇರಿತು.

    Post Views: 10

    Related Posts

    MRPL ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ: 2,300 ವಿದ್ಯಾರ್ಥಿಗಳಿಗೆ ಪದವಿ

    October 1, 2026

    ಮಂಗಳೂರು: AI ಬಳಸಿ ನಕಲಿ ಹಾಲ್‌ಟಿಕೆಟ್ ಸೃಷ್ಟಿಸಿ ಪೊಲೀಸ್ ನೇಮಕಾತಿ ದೈಹಿಕ ಪರೀಕ್ಷೆಗೆ ಹಾಜರಾಗಲು ಯತ್ನ -ಯುವಕ ಅರೆಸ್ಟ್

    October 1, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MRPL ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026

    ಕರ್ನಾಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘ (KCDA ) ಇದರ 68ನೇ ವಾರ್ಷಿಕ ಮಹಾಸಭೆ

    October 1, 2026

    ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ: 2,300 ವಿದ್ಯಾರ್ಥಿಗಳಿಗೆ ಪದವಿ

    October 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.