Facebook Twitter Instagram
    Saturday, October 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರಿನಲ್ಲಿ ದನ ಕದ್ದು ಪರಾರಿಯಾಗಿದ್ದ ಗ್ಯಾಂಗ್‌ನ ಪ್ರಮುಖ ಆರೋಪಿ ಬಂಧನ..!
    ಇತ್ತೀಚಿನ ಸುದ್ದಿ

    ಕಾರಿನಲ್ಲಿ ದನ ಕದ್ದು ಪರಾರಿಯಾಗಿದ್ದ ಗ್ಯಾಂಗ್‌ನ ಪ್ರಮುಖ ಆರೋಪಿ ಬಂಧನ..!

    October 2, 2026
    Share

    ಕುಂದಾಪುರ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್‌ ಡಿಸೈರ್‌ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ತುಂಬಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೊಲ್ಲೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

    ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ಬಂದು ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ತೆರಳಿದ್ದರು. ಈ ಕೃತ್ಯದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಸ್ಥಳೀಯರು ನೀಡಿದ ದೂರಿನ ಆಧಾರದಲ್ಲಿ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದುಕೊಂಡು, ಪ್ರಮುಖ ಆರೋಪಿ ಮೊಹಮ್ಮದ್‌ ಸಿನಾನ್‌ (20), ತಂದೆ ಅಬೂಬಕ್ಕರ್‌ ಸಿದ್ದಿಕ್‌, ತೋಟದ ಮನೆ, ಗುಲ್ವಾಡಿ ಅಂಚೆ ಮತ್ತು ಗ್ರಾಮ, ಕುಂದಾಪುರ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
    ಕಲಂ 303(2) ಬಿಎನ್‌ಎಸ್‌, ಪ್ರಿವೆನ್ಶನ್‌ ಆಫ್‌ ಕ್ರೂಯೆಲ್ಟಿ ಟು ಅನಿಮಲ್ಸ್‌ ಆಕ್ಟ್‌ 1960ರ ಕಲಂ 11(1)(d), ಕರ್ನಾಟಕ ಜಾನುವಾರು ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020ರ ಕಲಂ 4, 5, 12 ಹಾಗೂ ಐಎಂವಿ ಕಾಯ್ದೆಯ ಕಲಂ 66(1) r/w 192(a) ಅಡಿ ಪ್ರಕರಣ ದಾಖಲಿಸಲಾಗಿದೆ.

    ಕುಂದಾಪುರ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕ ಎಚ್‌.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್‌ ಅವರ ಉಸ್ತುವಾರಿಯಲ್ಲಿ ಕೊಲ್ಲೂರು ಠಾಣೆ ಪಿಎಸ್‌ಐ ವಿನಯ್‌ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳಾದ ಎಚ್‌ಸಿ ನಾಗೇಂದ್ರ, ಸಿಪಿಸಿ ರುದ್ರೇಶ, ನವೀನ್‌ ಕುಮಾರ್‌, ವಿಲಾಸ್‌ ರಾಠೋಡ ಮತ್ತು ನಾಗರಾಜ ಅವರು ಕಾರ್ಯಾಚರಣೆ ನಡೆಸಿದ್ದಾರೆ.

    ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವುದು ಪೊಲೀಸ್‌ ತನಿಖೆಯಿಂದ ತಿಳಿದುಬಂದಿದ್ದು, ಅವರ ಪತ್ತೆಗೆ ತನಿಖೆ ಮುಂದುವರಿದಿದೆ. ಬಂಧಿತ ಆರೋಪಿ ಮೊಹಮ್ಮದ್‌ ಸಿನಾನ್‌ ಕುಂದಾಪುರ ಉಪವಿಭಾಗದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿರುವ ಐದು ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 13

    Related Posts

    ಬಂದೂಕು ತಪಾಸಣೆ ವೇಳೆ ನಿಯಮ ಉಲ್ಲಂಘನೆ ಪತ್ತೆ: ಪರವಾನಿಗೆದಾರನ ವಿರುದ್ಧ ಕೇಸ್

    October 2, 2026

    ಖೋಟಾನೋಟು ಚಲಾವಣೆಗೆ ಯತ್ನ: 7 ಮಂದಿ ಸೆರೆ, ₹21 ಲಕ್ಷ ನಕಲಿ ನೋಟು ಜಪ್ತಿ

    October 2, 2026

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ: ಮಂಗಳೂರಿಗೆ SIT ಮುಖ್ಯಸ್ಥ ಶಶಿಕುಮಾರ್ ಆಗಮನ

    October 2, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂದೂಕು ತಪಾಸಣೆ ವೇಳೆ ನಿಯಮ ಉಲ್ಲಂಘನೆ ಪತ್ತೆ: ಪರವಾನಿಗೆದಾರನ ವಿರುದ್ಧ ಕೇಸ್

    October 2, 2026

    ಕಾರಿನಲ್ಲಿ ದನ ಕದ್ದು ಪರಾರಿಯಾಗಿದ್ದ ಗ್ಯಾಂಗ್‌ನ ಪ್ರಮುಖ ಆರೋಪಿ ಬಂಧನ..!

    October 2, 2026

    ಖೋಟಾನೋಟು ಚಲಾವಣೆಗೆ ಯತ್ನ: 7 ಮಂದಿ ಸೆರೆ, ₹21 ಲಕ್ಷ ನಕಲಿ ನೋಟು ಜಪ್ತಿ

    October 2, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.