Facebook Twitter Instagram
    Monday, October 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ ಜಿಲ್ಲಾ ಕಾರಾಗೃಹದ ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ
    ಇತ್ತೀಚಿನ ಸುದ್ದಿ

    ಉಡುಪಿ ಜಿಲ್ಲಾ ಕಾರಾಗೃಹದ ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

    October 5, 2026
    Share

    ಉಡುಪಿ ಜಿಲ್ಲಾ ಕಾರಾಗೃಹದ ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿಗೆ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ತೀರ್ಪು ನೀಡಿದೆ.

    2011ರ ಡಿಸೆಂಬರ್ 3ರಂದು ಹಿರಿಯಡ್ಕ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದ ಮೊದಲ ಬ್ಯಾರಕ್‌ನ ಎದುರಿನ ವರಾಂಡದಲ್ಲಿ ಘಟನೆ ನಡೆದಿತ್ತು. ಜೈಲು ವಾರ್ಡನ್‌ ಅವರು ಬಂಧಿಗಳ ಲೆಕ್ಕ ತೆಗೆದುಕೊಳ್ಳುವ ಸಲುವಾಗಿ ತಮ್ಮ ತಮ್ಮ ಬ್ಯಾರಕ್‌ಗಳಿಗೆ ತೆರಳುವಂತೆ ಸೂಚಿಸಿದಾಗ, ಅಡುಗೆ ಕೋಣೆಯ ಎದುರಿದ್ದ ವಿಚಾರಣಾ ಬಂಧಿ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತನು ವಾರ್ಡನ್‌ರನ್ನು ಉದ್ದೇಶಿಸಿ ಅವಾಚ್ಯವಾಗಿ ಮಾತನಾಡಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ ಎಡ ಕೆನ್ನೆಗೆ ಹೊಡೆದು ನೋವುಂಟು ಮಾಡಿದ್ದನು.

    ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 75/2011, ಕಲಂ 506 ಮತ್ತು 333 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಳಿಸಿದ ಪೊಲೀಸರು 2012ರ ಜನವರಿ 10ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
    ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಪ್ರಕರಣವು 2022ರ ಜೂನ್ 24ರಂದು ಎಲ್‌ಪಿಸಿ ನಂ.02/2022 ಎಂದು ದಾಖಲಾಗಿತ್ತು.
    ಆರೋಪಿಯನ್ನು 2026ರ ಏಪ್ರಿಲ್ 23ರಂದು ಬಾಡಿ ವಾರಂಟ್ ಮೂಲಕ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣವು ಎಸ್‌ಸಿ ನಂ.21/2026ರಂತೆ ವಿಚಾರಣೆಗೊಂಡಿದ್ದು, ಸೆಪ್ಟೆಂಬರ್ 28ರಂದು ನ್ಯಾಯಾಲಯವು ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ತೀರ್ಪು ನೀಡಿದೆ.

    Post Views: 27

    Related Posts

    ಮಂಗಳೂರು: ಸಮುದ್ರದಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿ ನೀರುಪಾಲು

    October 5, 2026

    ಮಲ್ಪೆಯ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಆರೋಪಿಯ ಬಂಧನ

    October 5, 2026

    ಮಂಗಳೂರು: ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಹಲ್ಲೆ..!! ಜೀವ ಬೆದರಿಕೆ

    October 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಮುದ್ರದಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿ ನೀರುಪಾಲು

    October 5, 2026

    ಉಡುಪಿ ಜಿಲ್ಲಾ ಕಾರಾಗೃಹದ ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಶಿಕ್ಷೆ

    October 5, 2026

    ಮಲ್ಪೆಯ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಆರೋಪಿಯ ಬಂಧನ

    October 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.