ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ನಟರಿಗೆ ಸಂಕಷ್ಟ ಎದುರಾಗಿದೆ. ವಿಚಾರಣೆ ನಡೆಸುತ್ತಿರುವ ಬೆಂಗಳೂರು ಸೆಷನ್ಸ್ ಕೋರ್ಟ್ ನಟ ಚಿಕ್ಕಣ್ಣ, ಯಶಸ್ ಸೂರ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆಯುತ್ತಿದೆ.
ಆರೋಪಿಗಳ ಜತೆಗಿದ್ದರು ಎಂಬ ಕಾರಣಕ್ಕೆ ನಟ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ ಅಕ್ಟೋಬರ್ 13 ಬಂದು ಹೇಳಿಕೆ ದಾಖಲಿಸುವಂತೆ ಕೋರ್ಟ್ ನೋಟಿಸ್ ನೀಡಿದೆ.
ಪ್ರಕರಣದ ವಿಚಾರಣೆಯಲ್ಲಿ ಸಾಕ್ಷ್ಯಗಳು ಹಾಗೂ ಆರೋಪಿಗಳ ಜತೆಗಿದ್ದವರ ಹೇಳಿಕೆಗಳು ಪ್ರಮುಖ ಪಾತ್ರಹಿಸುತ್ತವೆ. ರೇಣುಕಾಸ್ವಾಮಿ ಅಪಹರಣವಾದ ದಿನ ನಟ ಚಿಕ್ಕಣ್ಣ ಅವರು ನಟ ದರ್ಶನ್ ಜತೆ ಪಬ್ನಲ್ಲಿ ನಡೆದ ಪಾರ್ಟಿಯಲ್ಲಿದ್ದರು ಎಂದು ಪೊಲೀಸರು ಪತ್ತೆ ಮಾಡಿದ್ದರು. ಈ ಹಿಂದೆಯು ಚಿಕ್ಕಣ್ಣ ಅವರನ್ನು ಪೊಲೀಸರು ಕರೆದು ವಿಚಾರಣೆ ನಡೆಸಿ ವಾಪಸ್ ಕಳುಹಿಸಿದ್ದರು.




