Facebook Twitter Instagram
    Friday, October 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದಾಂಡಿಯಾ ಹೆಸರಿನಲ್ಲಿ ಕಾನೂನುಬಾಹಿರ ಚಟುವಟಿಕೆಗೆ ಕಾನೂನು ಕ್ರಮ
    ಇತ್ತೀಚಿನ ಸುದ್ದಿ

    ಮಂಗಳೂರು: ದಾಂಡಿಯಾ ಹೆಸರಿನಲ್ಲಿ ಕಾನೂನುಬಾಹಿರ ಚಟುವಟಿಕೆಗೆ ಕಾನೂನು ಕ್ರಮ

    October 9, 2026
    Share

    ಮಂಗಳೂರು: ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ ಹಾಗೂ ಪಾಶ್ಚಾತ್ಯ ಶೈಲಿಯ ಪಾರ್ಟಿ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ), ದುರ್ಗಾವಾಹಿನಿ ಹಾಗೂ ಬಜರಂಗದಳದ ಮುಖಂಡರು ಮಾಡಿರುವ ಆಗ್ರಹಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

    ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಆದರೆ, ಕಾನೂನುಬದ್ಧವಾಗಿ ಅನುಮತಿ ಪಡೆದಿರುವ ಯಾವುದೇ ಕಾರ್ಯಕ್ರಮವನ್ನು ತಮ್ಮ ವೈಯಕ್ತಿಕ ಅಭಿಪ್ರಾಯದ ಆಧಾರದ ಮೇಲೆ ಯಾರಾದರೂ ತಡೆಯಲು ಪ್ರಯತ್ನಿಸಿದರೆ, ಅಂತಹವರ ವಿರುದ್ಧವೇ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಆಯುಕ್ತರು ತಿಳಿಸಿದ್ದಾರೆ.

    ಕಾನೂನುಬಾಹಿರವಾದ ಯಾವುದೇ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು. ಪೊಲೀಸರು ಅಂತಹ ಚಟುವಟಿಕೆಗಳನ್ನು ತಡೆಯುತ್ತಾರೆ. ಆದರೆ, ಯಾರಿಗಾದರೂ ಯಾವುದಾದರೂ ಕಾರ್ಯಕ್ರಮ ಅನೈತಿಕ ಅಥವಾ ಆಕ್ಷೇಪಾರ್ಹವೆಂದು ಅನಿಸಿದ ಮಾತ್ರಕ್ಕೆ, ಅದು ಕಾನೂನುಬದ್ಧವಾಗಿದ್ದರೆ ಅದನ್ನು ಬಲವಂತವಾಗಿ ತಡೆಯಲು ಮುಂದಾಗಬಾರದು ಎಂದು ಅವರು ಹೇಳಿದ್ದಾರೆ.

    ಕಾನೂನುಬದ್ಧವಾಗಿ ನಡೆಯುತ್ತಿರುವ ಕಾರ್ಯಕ್ರಮವನ್ನು ತಡೆಯಲು ಯಾರಾದರೂ ಮುಂದಾಗಿ, ಸಂಬಂಧಪಟ್ಟ ವ್ಯಕ್ತಿಗಳು ದೂರು ನೀಡಿದರೆ, ತಡೆಯಲು ಯತ್ನಿಸಿದವರ ವಿರುದ್ಧ ಪ್ರಕರಣ ದಾಖಲಾಗಿ, ಅವರು ಕೈಗೊಂಡ ಕ್ರಮದ ಸ್ವರೂಪಕ್ಕೆ ಅನುಗುಣವಾಗಿ 10 ವರ್ಷಗಳವರೆಗೆ ಶಿಕ್ಷೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

    ಇದೇ ವೇಳೆ, ಸಮಾಜದಲ್ಲಿ ಕೊಲೆ ಅಥವಾ ಸುಲಿಗೆ ಸೇರಿದಂತೆ ಗಂಭೀರ ಅಪರಾಧಗಳಿಗೆ ಮುಂದಾಗುವವರ ವಿರುದ್ಧ ತಮ್ಮದೇ ಸಮುದಾಯದವರು ಧ್ವನಿ ಎತ್ತುವ ಬದಲು, ಕಾನೂನುಬದ್ಧವಾಗಿ ನಡೆಯುವ ಕಾರ್ಯಕ್ರಮಗಳನ್ನು ವಿರೋಧಿಸುವುದರ ಬಗ್ಗೆ ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ತಮ್ಮದೇ ಸಮುದಾಯದವರು ಕೊಲೆ ಮಾಡಲು ಮುಂದಾದಾಗ ಅಥವಾ ಸುಲಿಗೆ ನಡೆಸಿದಾಗ ಅದನ್ನು ಖಂಡಿಸುವಂತಹ ಬರಹಗಳು ಪ್ರಕಟವಾಗುವ ದಿನ ಬರಲಿ” ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ.

    Post Views: 11

    Related Posts

    ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟ, ಮಾರಾಟ: ಜಾಲ ಪತ್ತೆ ಹಚ್ಚಿದ ಪೊಲೀಸರು!!

    October 9, 2026

    ಉಡುಪಿ: SIR ನೆಪದಲ್ಲಿ ಮನೆಯೊಳಗೆ ಬಂದು ವೃದ್ಧೆಯ ಚಿನ್ನದ ಸರ ದರೋಡೆ

    October 9, 2026

    ರೇಣುಕಾಸ್ವಾಮಿ ಕೊಲೆ: ನಟ ದರ್ಶನ್‌ ಜತೆಗಿದ್ದ ಚಿಕ್ಕಣ್ಣ ಸೇರಿ ಇಬ್ಬರು ನಟರಿಗೆ ಕೋರ್ಟ್‌ನಿಂದ ನೋಟಿಸ್‌!

    October 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟ, ಮಾರಾಟ: ಜಾಲ ಪತ್ತೆ ಹಚ್ಚಿದ ಪೊಲೀಸರು!!

    October 9, 2026

    ಮಂಗಳೂರು: ದಾಂಡಿಯಾ ಹೆಸರಿನಲ್ಲಿ ಕಾನೂನುಬಾಹಿರ ಚಟುವಟಿಕೆಗೆ ಕಾನೂನು ಕ್ರಮ

    October 9, 2026

    ಉಡುಪಿ: SIR ನೆಪದಲ್ಲಿ ಮನೆಯೊಳಗೆ ಬಂದು ವೃದ್ಧೆಯ ಚಿನ್ನದ ಸರ ದರೋಡೆ

    October 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.