Facebook Twitter Instagram
    Saturday, October 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಬ್ರಹ್ಮರಕೂಟ್ಲು ಸರ್ವಿಸ್ ರಸ್ತೆಯಲ್ಲಿ ಪೊಲೀಸ್ ಕಾರ್ಯಾಚರಣೆ; ಮಾದಕ ವಸ್ತು ಸಹಿತ ವ್ಯಕ್ತಿಯ ಬಂಧನ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಬ್ರಹ್ಮರಕೂಟ್ಲು ಸರ್ವಿಸ್ ರಸ್ತೆಯಲ್ಲಿ ಪೊಲೀಸ್ ಕಾರ್ಯಾಚರಣೆ; ಮಾದಕ ವಸ್ತು ಸಹಿತ ವ್ಯಕ್ತಿಯ ಬಂಧನ

    October 10, 2026
    Share

    ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ೪೮ ವರ್ಷದ ವ್ಯಕ್ತಿಯೊಬ್ಬನನ್ನು ಕಲ್ಲಿಗೆ ಗ್ರಾಮದ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪದ ಸರ್ವಿಸ್ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಒಟ್ಟು 1.93 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಹಾಗೂ ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಬಂಧಿತ ಆರೋಪಿಯನ್ನು ಪುದು ಗ್ರಾಮದ ಅಮ್ಮೆಮ್ಮಾರ್ ಮೂಲದ, ಪ್ರಸ್ತುತ ಫರಂಗಿಪೇಟೆಯ ಟಿ.ಕೆ. ಫ್ಲ್ಯಾಟ್‌ನಲ್ಲಿ ವಾಸಿಸುತ್ತಿರುವ ಅಶ್ರಫ್ ಅಲಿಯಾಸ್ ಮೊಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.

    ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಇನ್ಸ್‌ಪೆಕ್ಟರ್ ಅನಂತ ಪದ್ಮನಾಭ ಅವರ ನೇತೃತ್ವದ ಪೊಲೀಸ್ ತಂಡ ಸ್ಥಳದ ಮೇಲೆ ದಾಳಿ ನಡೆಸಿದೆ. ಪೊಲೀಸರನ್ನು ಕಂಡು ಅಶ್ರಫ್ ಪರಾರಿಯಾಗಲು ಯತ್ನಿಸಿದನಾದರೂ, ಆತನನ್ನು ವಶಕ್ಕೆ ಪಡೆದ ಪೊಲೀಸರು ತಪಾಸಣೆ ನಡೆಸಿದ್ದಾರೆ.

    ಆರೋಪಿಯ ಪ್ಯಾಂಟ್ ಜೇಬಿನಲ್ಲಿ ಬಿಳಿ ಬಣ್ಣದ ಪೌಡರ್ ಹೊಂದಿದ್ದ ನಾಲ್ಕು ಪ್ಯಾಕೆಟ್‌ಗಳು ಹಾಗೂ ಆತನ ಸ್ಕೂಟರ್ ಸೀಟ್‌ನಡಿಯಲ್ಲಿ ಐದು ಪ್ಯಾಕೆಟ್‌ಗಳು ಪತ್ತೆಯಾಗಿವೆ. ಪ್ರಾಥಮಿಕ ತನಿಖೆಯಲ್ಲಿ ಇದು ‘ಆಂಫಿಟಮೈನ್/ಮೆಥಾಂಫಿಟಮೈನ್’ ಮಾದರಿಯ ಮಾದಕ ದ್ರವ್ಯವಿರಬಹುದು ಎಂದು ಶಂಕಿಸಲಾಗಿದೆ.

    ಸಂಶಯಾಸ್ಪದ ಮಾದಕ ವಸ್ತುವಿನ ಜೊತೆಗೆ ಆರೋಪಿಯಿಂದ ಎರಡು ಮೊಬೈಲ್ ಫೋನ್‌ಗಳು, 1,870 ರೂ. ನಗದು, ಡೆಬಿಟ್ ಕಾರ್ಡ್, ಎಂಟು ಖಾಲಿ ಜಿಪ್-ಲಾಕ್ ಕವರ್‌ಗಳು, ತೂಕದ ಯಂತ್ರ ಹಾಗೂ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯವನ್ನು ಸುಮಾರು 1.93 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

    Post Views: 1

    Related Posts

    ಮಂಗಳೂರು: 13 ವರ್ಷಗಳಿಂದ ವಿಳಾಸ ಬದಲಾಯಿಸಿಕೊಂಡು ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿ ಅರೆಸ್ಟ್

    October 10, 2026

    ಪುತ್ತೂರು: ಪಿಕಪ್‌ನಲ್ಲಿ 11 ಜಾನುವಾರುಗಳ ಹಿಂಸಾತ್ಮಕ ಸಾಗಾಟ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಅರೆಸ್ಟ್

    October 10, 2026

    ಹೆದ್ದಾರಿಗಳಲ್ಲಿ ರಾತ್ರಿ ಮಂಗಳಮುಖಿಯರು ನಿಲ್ಲದಂತೆ ಅಗತ್ಯ ಕ್ರಮಕ್ಕೆ ಡಿಸಿ ದರ್ಶನ್ ಹೆಚ್.ವಿ ಸೂಚನೆ

    October 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಬ್ರಹ್ಮರಕೂಟ್ಲು ಸರ್ವಿಸ್ ರಸ್ತೆಯಲ್ಲಿ ಪೊಲೀಸ್ ಕಾರ್ಯಾಚರಣೆ; ಮಾದಕ ವಸ್ತು ಸಹಿತ ವ್ಯಕ್ತಿಯ ಬಂಧನ

    October 10, 2026

    ಮಂಗಳೂರು: 13 ವರ್ಷಗಳಿಂದ ವಿಳಾಸ ಬದಲಾಯಿಸಿಕೊಂಡು ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಆರೋಪಿ ಅರೆಸ್ಟ್

    October 10, 2026

    ಪುತ್ತೂರು: ಪಿಕಪ್‌ನಲ್ಲಿ 11 ಜಾನುವಾರುಗಳ ಹಿಂಸಾತ್ಮಕ ಸಾಗಾಟ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಅರೆಸ್ಟ್

    October 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.