Facebook Twitter Instagram
    Thursday, October 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾನೂನು ಉಲ್ಲಂಘಿಸಿ “ಭಾರತ ಮಾತಾ ಕೀ ಜೈ” ಘೋಷಣೆ ಕೂಗಿದರೆ ಕಾನೂನು ಕ್ರಮದಿಂದ ತಪ್ಪಿಸಿ ಕೊಳ್ಳಲು ಸಾಧ್ಯವಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ
    ಇತ್ತೀಚಿನ ಸುದ್ದಿ

    ಕಾನೂನು ಉಲ್ಲಂಘಿಸಿ “ಭಾರತ ಮಾತಾ ಕೀ ಜೈ” ಘೋಷಣೆ ಕೂಗಿದರೆ ಕಾನೂನು ಕ್ರಮದಿಂದ ತಪ್ಪಿಸಿ ಕೊಳ್ಳಲು ಸಾಧ್ಯವಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

    October 15, 2026
    Share

    ಮಂಗಳೂರು: ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ದೇಶಭಕ್ತಿಯ ಸ್ಲೋಗನ್‌ಗಳನ್ನು ದುರುಪಯೋಗಪಡಿಸಿಕೊಳ್ಳುವುದರಿಂದ ದೇಶಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

    ಘಟನೆಯ ಬಗ್ಗೆ ವಿವರಣೆ ನೀಡಿರುವ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶಾಂತಿಭಂಗದ ಆತಂಕವಿರುವ ಸಂದರ್ಭಗಳಲ್ಲಿ ಷರತ್ತುಬದ್ಧ ಅನುಮತಿ ನೀಡಲಾಗುತ್ತದೆ. ಆದರೆ ಈ ಘಟನೆಯಲ್ಲಿ ಪ್ರತಿಭಟನಾಕಾರರು ಯಾವುದೇ ಮುಂಚಿತ ಅನುಮತಿ ಪಡೆದಿರಲಿಲ್ಲ ಅಥವಾ ಪೊಲೀಸರಿಗೆ ಮಾಹಿತಿಯನ್ನೂ ನೀಡಿರಲಿಲ್ಲ ಎಂದು ಕಮಿಷನರ್ ಹೇಳಿದ್ದಾರೆ.

    ಮಂಗಳೂರು: ನಗರದ ಸಂತ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆ ವಿಚಾರವಾಗಿ ಎಬಿವಿಪಿ ವತಿಯಿಂದ ನಡೆದ ಪ್ರತಿಭಟನೆ ಹಾಗೂ ಪೊಲೀಸ್ ಕಾರ್ಯಾಚರಣೆಯ ಬಗ್ಗೆ ಹರಿದಾಡುತ್ತಿರುವ ಅಪಪ್ರಚಾರಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟನೆ ನೀಡಿದ್ದು, ಕಾನೂನು ಉಲ್ಲಂಘಿಸಿ ದೇಶಭಕ್ತಿಯ ಘೋಷಣೆಗಳನ್ನು ಕವಚವಾಗಿ ಬಳಸಿಕೊಳ್ಳುವವರ ವಿರುದ್ಧ ಕಠಿಣ ಎಚ್ಚರಿಕೆ ನೀಡಿದ್ದಾರೆ.

    ದೇಶದ ರಕ್ಷಣೆ ಮತ್ತು ಸಂವಿಧಾನದ ಉದ್ಧಾರಕ್ಕಾಗಿ ಬದ್ಧರಾಗಿರುವ ತಾವು ಕಾನೂನು ಮೀರಿದವರ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದಿರುವ ಕಮಿಷನರ್, ಸಾರ್ವಜನಿಕ ಶಾಂತಿಗೆ ಭಂಗ ತರುವವರು “ಭಾರತ ಮಾತಾ ಕೀ ಜೈ” ಎಂಬ ಘೋಷಣೆ ಕೂಗಿ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ದೇಶಭಕ್ತಿಯ ಸ್ಲೋಗನ್‌ಗಳನ್ನು ದುರುಪಯೋಗಪಡಿಸಿಕೊಳ್ಳುವುದರಿಂದ ದೇಶಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ.

    ಘಟನೆಯ ಬಗ್ಗೆ ವಿವರಣೆ ನೀಡಿರುವ ಅವರು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶಾಂತಿಭಂಗದ ಆತಂಕವಿರುವ ಸಂದರ್ಭಗಳಲ್ಲಿ ಷರತ್ತುಬದ್ಧ ಅನುಮತಿ ನೀಡಲಾಗುತ್ತದೆ. ಆದರೆ ಈ ಘಟನೆಯಲ್ಲಿ ಪ್ರತಿಭಟನಾಕಾರರು ಯಾವುದೇ ಮುಂಚಿತ ಅನುಮತಿ ಪಡೆದಿರಲಿಲ್ಲ ಅಥವಾ ಪೊಲೀಸರಿಗೆ ಮಾಹಿತಿಯನ್ನೂ ನೀಡಿರಲಿಲ್ಲ ಎಂದಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಬದಲಿಗೆ ಅವರ ಪ್ರತಿಭಟನೆಗೆ ಅವಕಾಶ ಕಲ್ಪಿಸಿ ಅನುಕೂಲ ಮಾಡಿಕೊಡಲಾಗಿತ್ತು ಎಂದು ತಿಳಿಸಿದ್ದಾರೆ.

    ಹೊರಗಿನಿಂದ ಬಂದು ಕಾಲೇಜಿಗೆ ನುಗ್ಗಲು ಯತ್ನಿಸಿದವರನ್ನು ತಡೆಯಲಾಗಿದ್ದು, ಕಾಲೇಜು ಆಡಳಿತ ಮಂಡಳಿಯಿಂದ ದೂರು ಬಂದರೆ ಅದು ಅತಿಕ್ರಮಣವಾಗಲಿದೆ ಎಂದು ತಿಳಿಸಲಾಗಿದೆ. ಮೊದಲ ಬಾರಿ ಅವರನ್ನು ವಶಕ್ಕೆ ಪಡೆದಾಗ ಮುಚ್ಚಳಿಕೆ ಬರೆಸಿಕೊಳ್ಳಲು ಉದ್ದೇಶಿಸಲಾಗಿದ್ದರೂ, ವಿದ್ಯಾರ್ಥಿಗಳ ಮನವಿಯನ್ನು ಪುರಸ್ಕರಿಸಿ ಉದಾರವಾಗಿ ಬಿಡುಗಡೆ ಮಾಡಲಾಗಿತ್ತು. ಆದರೆ, ಕಾಲೇಜು ಆಡಳಿತ ಮಂಡಳಿಯು ಅವರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿದ್ದರೂ, ಮಧ್ಯಾಹ್ನ ಮತ್ತೊಮ್ಮೆ ಬಂದು ವಿದ್ಯಾರ್ಥಿಗಳನ್ನು ಪ್ರಚೋದಿಸಲು ಯತ್ನಿಸಿದ ಕಾರಣ ಅವರನ್ನು ಪುನಃ ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಗಿದೆ. ಪೊಲೀಸರು ಕೇವಲ ಒಮ್ಮೆ ಮಾತ್ರ ವಶಕ್ಕೆ ಪಡೆದಿದ್ದಾರೆ ಎಂಬ ತಪ್ಪು ಕಲ್ಪನೆಯನ್ನು ಸರಿಪಡಿಸಲು ಈ ಸ್ಪಷ್ಟನೆ ನೀಡಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

    Post Views: 12

    Related Posts

    ಪುತ್ತೂರು: ಸಂಟ್ಯಾ‌ರ್ ಬಳಿ ಭೀಕರ ಅಪಘಾತ-ಗಾಯಾಳು ಆಸ್ಪತ್ರೆಗೆ ದಾಖಲು,ಹೆದ್ದಾರಿ ಸಂಚಾರಕ್ಕೆ ತಡೆ!!

    October 15, 2026

    ಬೆಳ್ತಂಗಡಿ: ವೈದ್ಯರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ- ಓರ್ವನ ಬಂಧನ, ಇಬ್ಬರ ವಿಚಾರಣೆ

    October 15, 2026

    ಪುತ್ತೂರು: ಅಕ್ರಮ ಕೇರಳ ಲಾಟರಿ ಮಾರಾಟ- ಎರಡು ಅಂಗಡಿಗಳ ಮೇಲೆ ಪೊಲೀಸರ ದಾಳಿ..!!

    October 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಸಂಟ್ಯಾ‌ರ್ ಬಳಿ ಭೀಕರ ಅಪಘಾತ-ಗಾಯಾಳು ಆಸ್ಪತ್ರೆಗೆ ದಾಖಲು,ಹೆದ್ದಾರಿ ಸಂಚಾರಕ್ಕೆ ತಡೆ!!

    October 15, 2026

    ಕಾನೂನು ಉಲ್ಲಂಘಿಸಿ “ಭಾರತ ಮಾತಾ ಕೀ ಜೈ” ಘೋಷಣೆ ಕೂಗಿದರೆ ಕಾನೂನು ಕ್ರಮದಿಂದ ತಪ್ಪಿಸಿ ಕೊಳ್ಳಲು ಸಾಧ್ಯವಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

    October 15, 2026

    ಬೆಳ್ತಂಗಡಿ: ವೈದ್ಯರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ- ಓರ್ವನ ಬಂಧನ, ಇಬ್ಬರ ವಿಚಾರಣೆ

    October 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.