ಮಂಗಳೂರು: 2021 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 30 ವರ್ಷದ ವ್ಯಕ್ತಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಆರೋಪಿಯನ್ನು ಕಡಬದ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ ಎಂದು ಗುರುತಿಸಲಾಗಿದೆ.
ಘಟನೆ ಮೇ 8, 2021 ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದಾನೆ. ಕಡಬ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376(2)(ಎಫ್)(ಎನ್), 376(3), ಮತ್ತು 506 ರ ಅಡಿಯಲ್ಲಿ ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 5(ಜೆ)(ii)(ಎಲ್) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆಗಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಯು ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದರು. ವಿಚಾರಣೆಯ ನಂತರ, ನ್ಯಾಯಾಧೀಶೆ ಸುಮಂಗಲಾ ಚಕಲಬ್ಬಿರವರು, ಆರೋಪಿಯನ್ನು ತಪ್ಪಿತಸ್ಥರೆಂದು ಘೋಷಿಸಿದರು. ಪೋಕ್ಸೋ ಕಾಯ್ದೆಯ ಸೆಕ್ಷನ್ 5(l) ಜೊತೆಗೆ 6 ರ ಅಡಿಯಲ್ಲಿ ಶೇಖರ್ಗೆ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿದೆ. ದಂಡವನ್ನು ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ವರ್ಷ ಸಾಧಾರಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಇದಲ್ಲದೆ, ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ, ಅವರಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ. ಇದನ್ನು ವಿಧಿಸಲು ವಿಫಲವಾದರೆ ಅವರು ಇನ್ನೊಂದು ವರ್ಷ ಸಾಧಾರಣ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ಒಟ್ಟಾರೆಯಾಗಿ, ಅಪರಾಧಿಯು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 50,000 ರೂ. ದಂಡವನ್ನು ಘೋಷಣೆ ಮಾಡಲಾಗಿದೆ. ಪ್ರಕರಣದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅಡ್ಯಂತ್ತಾಯ ಸಮರ್ಥವಾಗಿ ವಾದಮಂಡಿಸಿದ್ದರು.




