ಬಂಟ್ವಾಳ: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮುಹಮ್ಮದ್ ಇರ್ಷಾದ್ ಎಂದು ತಿಳಿದು ಬಂದಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 139/2007ರ ಪ್ರಕರಣ ಸಂಬಂಧ ಭಾರತೀಯ ದಂಡ ಸಂಹಿತೆಯ ಕಲಂ 366, 368, 420, 120 ಮತ್ತು 149ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಸುಮಾರು ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅಕ್ಟೋಬರ್ 21ರಂದು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಪಾಸ್ಪೋರ್ಟ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.




