Facebook Twitter Instagram
    Monday, October 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು
    ಇತ್ತೀಚಿನ ಸುದ್ದಿ

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026
    Share

    ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಾಡು ಗ್ರಾಮದ ಕೆರೆಯೊಂದರಲ್ಲಿ ಬಟ್ಟೆ ಒಗೆಯಲು ತೆರಳಿದ್ದ ಇಬ್ಬರು ಶಾಲಾ ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ

    ಮೃತ ವಿದ್ಯಾರ್ಥಿನಿಯರನ್ನು ಮಲ್ಲಿಕಟ್ಟೆ ಹೆದ್ದಾರಿ ಪಕ್ಕದ ಜೋಪಡಿಯಲ್ಲಿ ವಾಸವಿದ್ದ, ಮೂಲತಃ ಹಾವೇರಿ ಜಿಲ್ಲೆಯವರಾದ ವೈಶಾಲಿ ಹಾಗೂ ಸುನಿತಾ ಎಂದು ಗುರುತಿಸಲಾಗಿದೆ.
    ಇಬ್ಬರೂ ಸಮೀಪದ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

    ಕೆರೆಯಲ್ಲಿ ಮುಳುಗಿದ ಬಾಲಕಿಯರ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ತುರ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ಆರಂಭಿಸಿದವು. ಘಟನಾ ಸ್ಥಳಕ್ಕೆ ಆಂಬುಲೆನ್ಸ್, ಅಗ್ನಿಶಾಮಕ ದಳದ ವಾಹನ ಹಾಗೂ ಮುಳುಗು ತಜ್ಞರ ತಂಡಗಳು ತಲುಪಲು ಸಾಕಷ್ಟು ಹರಸಾಹಸಪಡಬೇಕಾಯಿತು.

    ಗಂಗೊಳ್ಳಿ ಪೊಲೀಸರು, ಕುಂದಾಪುರ ಅಗ್ನಿಶಾಮಕ ದಳ, ಗಂಗೊಳ್ಳಿಯ ದಿನೇಶ್ ಖಾರ್ವಿ ತಂಡ, ಟೀಮ್ ಹೆಚ್‌ಐ ತುರ್ತು ಸ್ಪಂದನಾ ತಂಡ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸಿದರು. ಈ ವೇಳೆ ದಿನೇಶ್ ಖಾರ್ವಿ ಅವರು ಕಾರ್ಯಾಚರಣೆ ನಡೆಸಿ ಇಬ್ಬರು ಬಾಲಕಿಯರ ಮೃತದೇಹಗಳನ್ನು ಕೆರೆಯಿಂದ ಹೊರತೆಗೆದರು.
    ಬಳಿಕ ಮೃತದೇಹಗಳನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಯ ಶವಾಗಾರದ ಶೀತಲೀಕರಣ ಘಟಕಕ್ಕೆ ರವಾನಿಸಲಾಯಿತು. ಇಬ್ಬರು ವಿದ್ಯಾರ್ಥಿನಿಯರ ಅಕಾಲಿಕ ಸಾವಿನಿಂದ ಕುಟುಂಬಸ್ಥರ, ಹೆತ್ತವರ ಆಕ್ರಂದನ ಮುಗಿಲುಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.
    ಘಟನೆಯ ಕುರಿತು ಗಂಗೊಳ್ಳಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

    Post Views: 1

    Related Posts

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026

    ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ₹4.35 ಲಕ್ಷ ವಂಚನೆ

    October 26, 2026

    ಮಂಗಳೂರು: ದ್ವಿಚಕ್ರ ವಾಹನಗಳ ಕಳವು- 9 ದ್ವಿಚಕ್ರ ವಾಹನಗಳ ವಶಕ್ಕೆ

    October 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026

    ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ₹4.35 ಲಕ್ಷ ವಂಚನೆ

    October 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.