Facebook Twitter Instagram
    Friday, October 30
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌಜನ್ಯ ಪ್ರಕರಣ: SIT ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಥೋಡ್ ನೇಮಕ – ಶಶಿಕುಮಾರ್‌ ಬಿಡುಗಡೆ
    ಇತ್ತೀಚಿನ ಸುದ್ದಿ

    ಸೌಜನ್ಯ ಪ್ರಕರಣ: SIT ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಥೋಡ್ ನೇಮಕ – ಶಶಿಕುಮಾರ್‌ ಬಿಡುಗಡೆ

    October 30, 2026
    Share

    ಧರ್ಮಸ್ಥಳ/ಬೆಂಗಳೂರು : ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಉಜಿರೆಯ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ‘ವಿಶೇಷ ತನಿಖಾ ತಂಡ’ದ  ಮುಖ್ಯಸ್ಥರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಿಐಡಿ  ವಿಭಾಗದಲ್ಲಿ ಐಜಿಪಿ  ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚೇತನ್ ಸಿಂಗ್ ರಾಥೋಡ್ ಅವರಿಗೆ ಇದೀಗ ಎಸ್‌ಐಟಿ ಸಾರಥ್ಯದ ಹೊಸ ಜವಾಬ್ದಾರಿಯನ್ನು ವಹಿಸಲಾಗಿದೆ.

    ಇದುವರೆಗೆ ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು ಆ ಜವಾಬ್ದಾರಿಯಿಂದ ತೆರವುಗೊಳಿಸಲಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಶಶಿಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ವೈಯಕ್ತಿಕ ಕಾರಣಗಳಿಂದ ತಮ್ಮನ್ನು ಈ ತನಿಖಾ ತಂಡದ ಜವಾಬ್ದಾರಿಯಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಅವರ ಮನವಿಯನ್ನು ಪರಿಗಣಿಸಿದ ಸರ್ಕಾರ ಹೊಸ ಮುಖ್ಯಸ್ಥರನ್ನು ನೇಮಿಸಿದೆ.

    ಎಸ್‌ಐಟಿ ಮುಖ್ಯಸ್ಥರ ಬದಲಾವಣೆಯ ಜೊತೆಗೆ ತನಿಖಾ ತಂಡದಲ್ಲಿ ಮತ್ತೊಂದು ಪ್ರಮುಖ ಹುದ್ದೆಯ ಪರಿಷ್ಕರಣೆಯಾಗಿದೆ. ಪ್ರಸ್ತುತ ಹಾಸನ ಡಿವೈಎಸ್‌ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀನಿಧಿ ಅವರನ್ನು ಎಸ್‌ಐಟಿ ತಂಡಕ್ಕೆ ಹೊಸದಾಗಿ ನಿಯೋಜನೆ ಮಾಡಲಾಗಿದೆ. ಈ ಹಿಂದೆ ತಂಡದಲ್ಲಿದ್ದ ಡಿವೈಎಸ್‌ಪಿ ವೆಂಕಟೇಶ ಪ್ರಸನ್ನ ಅವರು ಸಹ ತಮ್ಮನ್ನು ತನಿಖಾ ತಂಡದಿಂದ ಹೊರಗಿಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಅವರ ಸ್ಥಾನಕ್ಕೆ ಶ್ರೀನಿಧಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ನೂತನ ಮುಖ್ಯಸ್ಥರ ನೇತೃತ್ವದಲ್ಲಿ ಸೌಜನ್ಯಾ ಪ್ರಕರಣದ ಮರುತನಿಖೆ ಇನ್ನುಮುಂದೆ ಚುರುಕುಗೊಳ್ಳಲಿದೆ.

    Post Views: 1

    Related Posts

    ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದ ವ್ಯಕ್ತಿಯ ಅಪಹರಣ, 1.15 ಕೋಟಿ ರೂ. ಹಣ ದೋಚಿದ ದುಷ್ಕರ್ಮಿಗಳು!

    October 30, 2026

    ಮದ್ರಸಾ ಶಿಕ್ಷಕನಿಂದ ವಿದ್ಯಾರ್ಥಿನಿಯೊಂದಿಗೆ ಮದುವೆ; ಮೊದಲ ಮದುವೆ ವಿಚಾರ ಮರೆಮಾಚಿ ಯುವತಿಯನ್ನು ವರಿಸಿದ 40ರ ಧರ್ಮಗುರು

    October 30, 2026

    ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಬ್ಲ್ಯಾಕ್‌ಮೇಲ್ ಆರೋಪ – ₹42.97 ಲಕ್ಷ ಸುಲಿಗೆ, ಇಬ್ಬರ ಬಂಧನ

    October 30, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಪ್ರಕರಣ: SIT ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಥೋಡ್ ನೇಮಕ – ಶಶಿಕುಮಾರ್‌ ಬಿಡುಗಡೆ

    October 30, 2026

    ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದ ವ್ಯಕ್ತಿಯ ಅಪಹರಣ, 1.15 ಕೋಟಿ ರೂ. ಹಣ ದೋಚಿದ ದುಷ್ಕರ್ಮಿಗಳು!

    October 30, 2026

    ಮದ್ರಸಾ ಶಿಕ್ಷಕನಿಂದ ವಿದ್ಯಾರ್ಥಿನಿಯೊಂದಿಗೆ ಮದುವೆ; ಮೊದಲ ಮದುವೆ ವಿಚಾರ ಮರೆಮಾಚಿ ಯುವತಿಯನ್ನು ವರಿಸಿದ 40ರ ಧರ್ಮಗುರು

    October 30, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.