Facebook Twitter Instagram
    Saturday, November 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಸಿಲೆ ಘಾಟ್‌ನಲ್ಲಿ ಯುವತಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ- ಆರೋಪಿ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಬಿಸಿಲೆ ಘಾಟ್‌ನಲ್ಲಿ ಯುವತಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ- ಆರೋಪಿ ಪೊಲೀಸ್ ವಶಕ್ಕೆ

    November 7, 2026
    Share

    ಸುಬ್ರಹ್ಮಣ್ಯ: ಯುವತಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಕಡಬ ಕೊಣಾಜೆ ಗ್ರಾಮದ ಪ್ರಸಾದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಯುವತಿಗೆ ಕಳೆದ ಮೂರು ವರ್ಷಗಳಿಂದ ಪ್ರಸಾದ್ ಪರಿಚಯವಿದ್ದು, ಸ್ನೇಹ ಹೊಂದಿದ್ದರು ಎನ್ನಲಾಗಿದೆ.

    ನ.4ರಂದು ಸಂಜೆ ಆರೋಪಿಯು ಯುವತಿಯನ್ನು ಉಪ್ಪಿನಂಗಡಿಯಿಂದ ಕಾರಿನಲ್ಲಿ ಕರೆದುಕೊಂಡು ಕುಲ್ಕುಂದ ಮಾರ್ಗವಾಗಿ ಬಿಸಿಲೆ ಘಾಟ್‌ಗೆ ತೆರಳಿದ್ದಾನೆ. ರಾತ್ರಿ ವೇಳೆ ದಾರಿಮಧ್ಯೆ ಕೊಲೆ ಮಾಡುವ ಉದ್ದೇಶದಿಂದ ಕಬ್ಬಿಣದ ರಾಡ್‌ನಿಂದ ಯುವತಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಹಲ್ಲೆಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವತಿಗೆ ನ.5ರಂದು ಬೆಳಿಗ್ಗೆ ಪ್ರಜ್ಞೆ ಬಂದಿದ್ದು, ಬಳಿಕ ಸುಬ್ರಹ್ಮಣ್ಯಕ್ಕೆ ತೆರಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ BNS 2023ರ ಕಲಂ 118(1), 109(1)ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಕೃತ್ಯ ನಡೆದ ಸ್ಥಳ ಹಾಸನ ಜಿಲ್ಲೆಯ ಯೆಸಳೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಯೆಸಳೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

    Post Views: 7

    Related Posts

    MRPL–MSEZ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ: ಸಚಿವ ಯು.ಟಿ. ಖಾದರ್‌ಗೆ ಸತ್ಯಜಿತ್ ಸುರತ್ಕಲ್ ನೇತೃತ್ವದಲ್ಲಿ ಮನವಿ ಸಲ್ಲಿಕೆ

    November 7, 2026

    ಹಿರಿಯಡ್ಕ ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪನಿರೀಕ್ಷಕರಾಗಿ ತಿಮ್ಮೇಶ್

    November 7, 2026

    ಸೌಜನ್ಯ ಪ್ರಕರಣ: ತಿಮರೋಡಿ, ವಿಠಲ ಗೌಡ ವಿರುದ್ಧ ಎಸ್‌ಐಟಿಗೆ ದೂರು

    November 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MRPL–MSEZ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ: ಸಚಿವ ಯು.ಟಿ. ಖಾದರ್‌ಗೆ ಸತ್ಯಜಿತ್ ಸುರತ್ಕಲ್ ನೇತೃತ್ವದಲ್ಲಿ ಮನವಿ ಸಲ್ಲಿಕೆ

    November 7, 2026

    ಬಿಸಿಲೆ ಘಾಟ್‌ನಲ್ಲಿ ಯುವತಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ- ಆರೋಪಿ ಪೊಲೀಸ್ ವಶಕ್ಕೆ

    November 7, 2026

    ಹಿರಿಯಡ್ಕ ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪನಿರೀಕ್ಷಕರಾಗಿ ತಿಮ್ಮೇಶ್

    November 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.