Facebook Twitter Instagram
    Tuesday, November 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜಾಮೀನಿನ ಮೇಲೆ ಹೊರಬಂದ ಧರ್ಮಗುರುಗೆ ಮತ್ತೆ ಸಂಕಷ್ಟ – ಮತ್ತೊಂದು ಎಫ್‌ಐಆರ್ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಜಾಮೀನಿನ ಮೇಲೆ ಹೊರಬಂದ ಧರ್ಮಗುರುಗೆ ಮತ್ತೆ ಸಂಕಷ್ಟ – ಮತ್ತೊಂದು ಎಫ್‌ಐಆರ್ ದಾಖಲು

    November 10, 2026
    Share

    ಮಂಗಳೂರು: 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕ್ರೈಸ್ತ ಧರ್ಮಗುರು ಫಾ. ಸಿಪ್ರಿಯನ್ ಪಿಂಟೊ (65) ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಉಳ್ಳಾಲ ತಾಲ್ಲೂಕಿನ ಪೆರ್ಮನ್ನೂರು ಗ್ರಾಮದ ಸೇಂಟ್ ಸೆಬಾಸ್ಟಿಯನ್ ಚರ್ಚ್‌ಗೆ ಭಾನುವಾರ ಪ್ರಾರ್ಥನೆಗೆ ತೆರಳುತ್ತಿದ್ದ 13 ವರ್ಷದ ಬಾಲಕನಿಗೆ 2026ರ ಮೇ 13ರಂದು ಆರೋಪಿ ಫಾ. ಸಿಪ್ರಿಯನ್ ಪಿಂಟೊ ಲೈಂಗಿಕ ಕಿರುಕುಳ ನೀಡಿದ್ದ ಕುರಿತು ಸಂತ್ರಸ್ತ ಬಾಲಕ ದೂರು ನೀಡಿದ್ದಾನೆ.

    ದೂರಿನ ಆಧಾರದ ಮೇಲೆ ಮಹಿಳಾ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 75 (2) (ಲೈಂಗಿಕ ಕಿರುಕುಳ) ಹಾಗೂ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸೆಕ್ಷನ್ 8 ಮತ್ತು ಸೆಕ್ಷನ್ 12ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನು ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯ್ಕ್ ಅವರಿಗೆ ವಹಿಸಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

    ಆರೋಪಿ ಸಿಪ್ರಿಯನ್ ಪಿಂಟೊ ನಗರದ ವಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರೇರಾ ಚರ್ಚ್‌ನ ಧರ್ಮಗುರುವಾಗಿದ್ದಾಗ 14 ವರ್ಷದ ಮತ್ತೊಬ್ಬ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿತ್ತು. ಈ ಕುರಿತು ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಹಾಗೂ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸದರಿ ಪ್ರಕರಣದಲ್ಲಿ ಅಕ್ಟೋಬರ್ 18ರಂದು ಬಂಧನಕ್ಕೊಳಗಾಗಿದ್ದ ಸಿಪ್ರಿಯನ್ ಪಿಂಟೊ, ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದು, ಇತ್ತೀಚೆಗಷ್ಟೇ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ಅವರ ವಿರುದ್ಧ ಮತ್ತೊಂದು ಪೊಕ್ಸೊ ಪ್ರಕರಣ ದಾಖಲಾಗಿದೆ.

    Post Views: 1

    Related Posts

    ಉಡುಪಿ: ಪೆಟ್ರೋಲ್ ಪಂಪ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ!!

    November 9, 2026

    ಬಂಟ್ವಾಳ: ಅಕ್ರಮ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟ-ಲಾರಿ ವಶಕ್ಕೆ

    November 9, 2026

    ಉಡುಪಿ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ನಾಲ್ವರು ಆರೋಪಿಗಳ ಬಂಧನ

    November 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಜಾಮೀನಿನ ಮೇಲೆ ಹೊರಬಂದ ಧರ್ಮಗುರುಗೆ ಮತ್ತೆ ಸಂಕಷ್ಟ – ಮತ್ತೊಂದು ಎಫ್‌ಐಆರ್ ದಾಖಲು

    November 10, 2026

    ಉಡುಪಿ: ಪೆಟ್ರೋಲ್ ಪಂಪ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ!!

    November 9, 2026

    ಬಂಟ್ವಾಳ: ಅಕ್ರಮ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟ-ಲಾರಿ ವಶಕ್ಕೆ

    November 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.