Facebook Twitter Instagram
    Saturday, November 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿಗೆ ಅನುಮತಿ: ಮಲ್ಪೆಗೆ ಬರಲು ಬಿಗಿ ಭದ್ರತೆ
    ಇತ್ತೀಚಿನ ಸುದ್ದಿ

    ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿಗೆ ಅನುಮತಿ: ಮಲ್ಪೆಗೆ ಬರಲು ಬಿಗಿ ಭದ್ರತೆ

    November 14, 2026
    Share

    ಉಡುಪಿ: ಭೂಗತ ಲೋಕದಲ್ಲಿ ಕುಖ್ಯಾತಿ ಪಡೆದಿರುವ ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರ್ತಿ (86) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಸ್ವಗ್ರಾಮಕ್ಕೆ ತೆರಳಲು ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.

    ಐದು ಮಕ್ಕಳನ್ನು ಅಗಲಿರುವ ಸುಶೀಲಾ ಪೂಜಾರ್ತಿ ಅವರು ಇಬ್ಬರು ಪುತ್ರಿಯರು ಹಾಗೂ ಮೂವರು ಪುತ್ರರನ್ನು ಹೊಂದಿದ್ದರು. ಅವರಲ್ಲಿ ರವಿ ಪೂಜಾರಿ ಒಬ್ಬರು. ಮಲ್ಪೆಯ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ನವೆಂಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ವಿಧಿವಿಧಾನಗಳು ನಡೆಯಲಿವೆ ಎಂದು ತಿಳಿದುಬಂದಿದೆ

    ನ್ಯಾಯಾಲಯದ ಆದೇಶದಂತೆ ರವಿ ಪೂಜಾರಿಯನ್ನು ಶುಕ್ರವಾರ ಮಧ್ಯಾಹ್ನ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಬೆಂಗಳೂರಿನಿಂದ ಉಡುಪಿಗೆ ಕರೆತರಲಾಗುತ್ತದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಬಳಿಕ ಅವರನ್ನು ಮತ್ತೆ ಪೊಲೀಸ್ ಎಸ್ಕಾರ್ಟ್‌ನಲ್ಲಿ ಬೆಂಗಳೂರಿಗೆ ಕರೆದೊಯ್ಯುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.

    ರವಿ ಪೂಜಾರಿಯ ಪ್ರಯಾಣಕ್ಕೆ ಅಗತ್ಯವಿರುವ ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆ ಕಲ್ಪಿಸುವಂತೆ ಬೆಂಗಳೂರಿನ ಆಡುಗೋಡಿಯ ಸಿಟಿ ಆರ್ಮ್ಡ್ ರಿಸರ್ವ್ (ದಕ್ಷಿಣ) ವಿಭಾಗದ ಡಿಸಿಪಿ ಹಾಗೂ ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.

    ಜೈಲು ಇಲಾಖೆಯ ವತಿಯಿಂದ ಪ್ರಯಾಣದ ವೇಳೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಉಡುಪಿ ಜಿಲ್ಲಾ ಪೊಲೀಸರೂ ಸ್ಥಳೀಯ ಮಟ್ಟದಲ್ಲಿ ಹೆಚ್ಚುವರಿ ಭದ್ರತೆ ಒದಗಿಸಲಿದ್ದಾರೆ. ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆಗೆ ತಗಲುವ ಸಂಪೂರ್ಣ ವೆಚ್ಚವನ್ನು ರವಿ ಪೂಜಾರಿಯೇ ಭರಿಸಬೇಕು ಎಂಬ ಷರತ್ತನ್ನೂ ನ್ಯಾಯಾಲಯ ವಿಧಿಸಿದೆ.

    ತಾಯಿಯ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ನ್ಯಾಯಾಲಯದ ಅನುಮತಿಯ ಮೇರೆಗೆ ಹಲವು ವರ್ಷಗಳ ಬಳಿಕ ರವಿ ಪೂಜಾರಿ ಸ್ವಗ್ರಾಮಕ್ಕೆ ಆಗಮಿಸುತ್ತಿರುವುದು ಗಮನ ಸೆಳೆದಿದೆ.

    Post Views: 7

    Related Posts

    ಮಂಗಳೂರು: ಪಣಂಬೂರು ಬೀಚ್ ಬಳಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ವಲಸಿಗರು ಪೊಲೀಸ್ ವಶಕ್ಕೆ

    November 14, 2026

    ಕಡಬದಲ್ಲಿ ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ ದೂರು ದಾಖಲು!

    November 13, 2026

    ಆರು ವರ್ಷಗಳ ಬಳಿಕ ಕೊಲೆಯಾದವಳು ಜೀವಂತವಾಗಿ ಪತ್ತೆ !!ಪೊಲೀಸರ ಎಡವಟ್ಟು – ನಿರಪರಾಧಿಗೆ 2 ವರ್ಷ 5 ತಿಂಗಳು ಜೈಲು

    November 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಬಳಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾ ವಲಸಿಗರು ಪೊಲೀಸ್ ವಶಕ್ಕೆ

    November 14, 2026

    ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿಗೆ ಅನುಮತಿ: ಮಲ್ಪೆಗೆ ಬರಲು ಬಿಗಿ ಭದ್ರತೆ

    November 14, 2026

    ಕಡಬದಲ್ಲಿ ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಆರೋಪ – ಇಬ್ಬರ ವಿರುದ್ಧ ದೂರು ದಾಖಲು!

    November 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.