Facebook Twitter Instagram
    Sunday, November 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    November 15, 2026
    Share

    ಮಂಗಳೂರು: 2005ರಲ್ಲಿ ಪೊಳಲಿ ಅನಂತು ಎಂಬಾತನ ಹತ್ಯೆಯ ಬಳಿಕ ನಡೆದ ಶವಯಾತ್ರೆಯ ಸಂದರ್ಭದಲ್ಲಿ ಸಂಭವಿಸಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಮಂಗಳೂರು ಎನ್.ಎಂ.ಪಿ.ಟಿ. ಕಾಲೋನಿಯ 2ನೇ ಅವಿನ್ಯೂ ನಿವಾಸಿ ಮನೋಜ್ ಎಂದು ಗುರುತಿಸಲಾಗಿದೆ.
    2005ರಲ್ಲಿ ಕೈಕಂಬದ ಪೊಳಲಿ ದ್ವಾರದ ಬಳಿ ಪೊಳಲಿ ಅನಂತು ಎಂಬಾತನ ಹತ್ಯೆ ನಡೆದಿತ್ತು.

    ಈ ಘಟನೆಯ ಬಳಿಕ ನಡೆದ ಶವಮೆರವಣಿಗೆಯ ಸಂದರ್ಭದಲ್ಲಿ ಗಲಾಟೆ ಸಂಭವಿಸಿದ್ದು, ಈ ಸಂಬಂಧ ಮನೋಜ್ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಬಜಪೆ ಠಾಣೆಯ ಅಪರಾಧ ಸಂಖ್ಯೆ 101/2005ರಂತೆ ಕೆ.ಪಿ.ಡಿ.ಎಲ್.ಪಿ. ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮಂಗಳೂರಿನ 3ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಸಿ.ಸಿ. ನಂ. 4048/2007ರಂತೆ ವಿಚಾರಣೆ ನಡೆಯುತ್ತಿತ್ತು.

    ಇದೇ ರೀತಿ ಬಜಪೆ ಠಾಣೆಯ ಅಪರಾಧ ಸಂಖ್ಯೆ 104/2005ರಂತೆ ಮತ್ತೊಂದು ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ಸಿ.ಸಿ. ನಂ. 4049/2007ರಂತೆ ವಿಚಾರಣೆಯಲ್ಲಿತ್ತು.
    ಆರೋಪಿ ಮನೋಜ್ 2007ರಲ್ಲಿ ವಿದೇಶಕ್ಕೆ ತೆರಳಿದ್ದ. ಬಳಿಕ ವಿದೇಶದಿಂದ ವಾಪಸಾದರೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನಂತರ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ರಂಗನಪಲ್ಕೆ ಎಂಬಲ್ಲಿ ವಾಸವಾಗಿದ್ದ ಎನ್ನಲಾಗಿದೆ.

    ನ್ಯಾಯಾಲಯದ ವಿಚಾರಣೆಗೆ ನಿರಂತರವಾಗಿ ಗೈರುಹಾಜರಾಗಿದ್ದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಎರಡು ಪ್ರಕರಣಗಳಲ್ಲಿಯೂ ಎಲ್.ಪಿ.ಸಿ. ವಾರಂಟ್ ಜಾರಿಯಾಗಿತ್ತು. ಪ್ರಕರಣ ಸಂಖ್ಯೆ 101/2005ಕ್ಕೆ ಸಂಬಂಧಿಸಿದಂತೆ ಎಲ್.ಪಿ.ಸಿ. ನಂ. 26/2016 ಹಾಗೂ ಪ್ರಕರಣ ಸಂಖ್ಯೆ 104/2005ಕ್ಕೆ ಸಂಬಂಧಿಸಿದಂತೆ ಎಲ್.ಪಿ.ಸಿ. ನಂ. 50/2016ರಂತೆ ವಾರಂಟ್ ಹೊರಡಿಸಲಾಗಿತ್ತು. ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ನವೆಂಬರ್ 14ರಂದು ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಮುಂದಿನ ಕಾನೂನು ಕ್ರಮ ಹಾಗೂ ತನಿಖೆಗಾಗಿ ಆರೋಪಿಯನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

    Post Views: 6

    Related Posts

    ಮಂಗಳೂರು : ನಕಲಿ ಲಿಂಕ್ ಕಳುಹಿಸಿ ಖಾತೆಯಿಂದ 4.26ಲಕ್ಷ ರೂ. ವಂಚನೆ

    November 15, 2026

    10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026

    26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಅರೆಸ್ಟ್

    November 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು : ನಕಲಿ ಲಿಂಕ್ ಕಳುಹಿಸಿ ಖಾತೆಯಿಂದ 4.26ಲಕ್ಷ ರೂ. ವಂಚನೆ

    November 15, 2026

    ಮಂಗಳೂರು: 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    November 15, 2026

    10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.