Facebook Twitter Instagram
    Sunday, November 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಅಸ್ಥಿಪಂಜರ ಪತ್ತೆ – ಸ್ನೇಹಿತನ ವಿರುದ್ಧ ಕೊಲೆ ಆರೋಪ
    ಇತ್ತೀಚಿನ ಸುದ್ದಿ

    ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಅಸ್ಥಿಪಂಜರ ಪತ್ತೆ – ಸ್ನೇಹಿತನ ವಿರುದ್ಧ ಕೊಲೆ ಆರೋಪ

    November 15, 2026
    Share

    ಮಂಗಳೂರು: ಬಜಪೆ ಸಮೀಪ ಕಳೆದ ತಿಂಗಳಿನಿಂದ ನಾಪತ್ತೆಯಾಗಿದ್ದ ಉತ್ತರ ಪ್ರದೇಶ ಮೂಲದ ಮನೀಶ್ ಶರ್ಮಾ (25) ಅವರ ಅಸ್ಥಿಪಂಜರ ಹಳೆ ಏರ್‌ಪೋರ್ಟ್ ರಸ್ತೆಯ ನಿರ್ಜನ ಪ್ರದೇಶದಲ್ಲಿ ನ.13ರಂದು ಪತ್ತೆಯಾಗಿದೆ.

    ಬಜಪೆ ಏರ್‌ಪೋರ್ಟ್‌ನಲ್ಲಿ ಹಿಟಾಚಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮನೀಶ್ ಅ.27ರಂದು ಸ್ನೇಹಿತ ಶ್ರವಣ್ ಜೊತೆ ಬೈಕ್‌ನಲ್ಲಿ ತೆರಳಿದ ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಸಹೋದರ ಸೋನು ಶರ್ಮಾ ನ.1ರಂದು ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ತನಿಖೆ ವೇಳೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಮನೀಶ್ ಶ್ರವಣ್ ಜೊತೆ ತೆರಳಿದ್ದು, ಬಳಿಕ ಶ್ರವಣ್ ಒಬ್ಬನೇ ವಾಪಸ್ಸಾಗಿರುವುದು ಕಂಡುಬಂದಿತ್ತು. ಅಲ್ಲದೆ, ಮನೀಶ್ ಅವರ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಯಾದ ವಿಚಾರವೂ ಬೆಳಕಿಗೆ ಬಂದಿದೆ.

    ನ.13ರಂದು ಹುಡುಕಾಟ ನಡೆಸುತ್ತಿದ್ದಾಗ ಹಳೆ ಏರ್‌ಪೋರ್ಟ್ ರಸ್ತೆಯ ನಿರ್ಜನ ಪ್ರದೇಶದ ಹೊಂಡದಲ್ಲಿ ಮೂಳೆಯ ತುಂಡುಗಳು, ತಲೆಬುರುಡೆಯ ಚೂರುಗಳು ಹಾಗೂ ಬಟ್ಟೆಗಳು ಪತ್ತೆಯಾಗಿವೆ. ಪತ್ತೆಯಾದ ಬಟ್ಟೆಗಳು ಮನೀಶ್ ಅವರಿಗೆ ಸೇರಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಸ್ನೇಹಿತ ಶ್ರವಣ್ ಯಾವುದೋ ದುರುದ್ದೇಶದಿಂದ ಮನೀಶ್ ಅವರನ್ನು ಕೊಲೆ ಮಾಡಿ ಸಾಕ್ಷ್ಯ ಮುಚ್ಚಿಟ್ಟಿರುವ ಶಂಕೆ ವ್ಯಕ್ತಪಡಿಸಿ ಸೋನು ಶರ್ಮಾ ದೂರು ನೀಡಿದ್ದಾರೆ. ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Post Views: 1

    Related Posts

    ಮಂಗಳೂರು : ನಕಲಿ ಲಿಂಕ್ ಕಳುಹಿಸಿ ಖಾತೆಯಿಂದ 4.26ಲಕ್ಷ ರೂ. ವಂಚನೆ

    November 15, 2026

    ಮಂಗಳೂರು: 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    November 15, 2026

    10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಅಸ್ಥಿಪಂಜರ ಪತ್ತೆ – ಸ್ನೇಹಿತನ ವಿರುದ್ಧ ಕೊಲೆ ಆರೋಪ

    November 15, 2026

    ಮಂಗಳೂರು : ನಕಲಿ ಲಿಂಕ್ ಕಳುಹಿಸಿ ಖಾತೆಯಿಂದ 4.26ಲಕ್ಷ ರೂ. ವಂಚನೆ

    November 15, 2026

    ಮಂಗಳೂರು: 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    November 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.