Facebook Twitter Instagram
    Monday, November 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ 19 ವರ್ಷದ ಯುವಕ ದುರ್ಮರಣ
    ಇತ್ತೀಚಿನ ಸುದ್ದಿ

    ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ 19 ವರ್ಷದ ಯುವಕ ದುರ್ಮರಣ

    November 16, 2026
    Share

    ಕಾರ್ಕಳ : ಬೆಳ್ಮಣ್‌ನಲ್ಲಿ ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 19 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಶನಿವಾರ (ನ.14) ನಡೆದಿದೆ. ಪಿಲಾರು ಗ್ರಾಮದ ಕುಂಜಿಗುಡ್ಡೆ ನಿವಾಸಿ ತ್ರಿಶಾಂತ್ ಅಲಿಯಾಸ್ ಪುನೀತ್ (19) ಮೃತ ದುರ್ದೈವಿ. ಸ್ಥಳೀಯವಾಗಿ ‘ಡಿಜೆ’ (DJ) ಆಗಿ ಗುರುತಿಸಿಕೊಂಡಿದ್ದ ಪುನೀತ್, ಪ್ರತಿಭಾನ್ವಿತ ಯುವಕನಾಗಿದ್ದರು.

    ಪುನೀತ್ ಅವರು ಬೆಳ್ಮಣ್‌ನಿಂದ ಪಿಲಾರು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಬೆಳ್ಮಣ್ ಸೊಸೈಟಿ ಮುಂಭಾಗದ ರಸ್ತೆಯಲ್ಲಿ ತಿರುವು ಪಡೆಯಲು ನಿಲ್ಲಿಸಿದ್ದ ಟಿಪ್ಪರ್ ಲಾರಿಯ ಮುಂಭಾಗಕ್ಕೆ ಬೈಕ್ ರಭಸವಾಗಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಢಿಕ್ಕಿಯ ತೀವ್ರತೆಗೆ ಪುನೀತ್ ಬೈಕ್‌ನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರ ತಲೆ ಟಿಪ್ಪರ್‌ನ ಮುಂಭಾಗಕ್ಕೆ ಬಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರಾದರೂ, ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    Post Views: 11

    dakshina kannada karnataka

    Related Posts

    ಪುತ್ತೂರು: ಜಮೀನು ವಿವಾದದ ಹಿನ್ನೆಲೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಆರೋಪ; 9 ಮಂದಿ ವಿರುದ್ಧ ದೂರು

    November 16, 2026

    ಬಂಟ್ವಾಳ: ಭೀಕರ ರಸ್ತೆ ಅಪಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ

    November 16, 2026

    ಮಂಗಳೂರು: ನಾಪತ್ತೆಯಾಗಿದ್ದ ಯುವಕನ ಅಸ್ಥಿಪಂಜರ ಪತ್ತೆ – ಸ್ನೇಹಿತನ ವಿರುದ್ಧ ಕೊಲೆ ಆರೋಪ

    November 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಮೀನು ವಿವಾದದ ಹಿನ್ನೆಲೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಆರೋಪ; 9 ಮಂದಿ ವಿರುದ್ಧ ದೂರು

    November 16, 2026

    ಬಂಟ್ವಾಳ: ಭೀಕರ ರಸ್ತೆ ಅಪಘಾತಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ

    November 16, 2026

    ಕಾರ್ಕಳ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ 19 ವರ್ಷದ ಯುವಕ ದುರ್ಮರಣ

    November 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.