ಪುತ್ತೂರು: ನರಿಮೊಗರು ಗ್ರಾಮದ ಪಂಜಲದಲ್ಲಿ ತಡರಾತ್ರಿ ಕಳ್ಳರು ಸೇಂದಿ ಅಂಗಡಿಯೊಂದಕ್ಕೆ ನುಗ್ಗಿ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ಕಳವುಗೈದ ಘಟನೆ ನಡೆದಿದೆ.
ಪುರಂದರ ಶಿಬರಾಡಿ ಮಾಲಕತ್ವದ ಸೇಂದಿ ಅಂಗಡಿಯ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಅಂಗಡಿಯೊಳಗಿದ್ದ ಸಾಮಾನುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬಳಿಕ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ಕಾಣಿಕೆ ಡಬ್ಬಿಯಲ್ಲಿ ಸುಮಾರು ಸಾವಿರ ರೂಪಾಯಿಗೂ ಅಧಿಕ ಹಣವಿತ್ತು ಎಂದು ಅಂಗಡಿ ಮಾಲಕರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.




