ಮಂಗಳೂರು :ಸೋಮವಾರ ಸಂಜೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದೆ.
ವಿಮಾನ ಟೇಕ್ ಆಫ್ ಆಗಲು ರನ್ ವೇನಲ್ಲಿ ಚಲಿಸುತ್ತಿದ್ದ ವೇಳೆ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಪೈಲಟ್ ತಕ್ಷಣ ಸಮಯ ಪ್ರಜ್ಞೆ ಮೆರೆದು, ಟೇಕ್ ಆಫ್ ಆಗುವ ಕೊನೆಯ ಕ್ಷಣದಲ್ಲಿ ವಿಮಾನಕ್ಕೆ ಬ್ರೇಕ್ ಹಾಕಿದ್ದಾರೆ.
ಇದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.
ವಿಮಾನದಲ್ಲಿ 229 ಪ್ರಯಾಣಿಕರು ಹಾಗೂ 7 ಮಂದಿ ಸಿಬ್ಬಂದಿ ಸೇರಿದಂತೆ ಒಟ್ಟು 236 ಮಂದಿ ಇದ್ದರು. ಬಳಿಕ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ.
ಇಂಡಿಗೋ ಸಂಸ್ಥೆಯು ಪ್ರಯಾಣಿಕರ ಪ್ರಯಾಣಕ್ಕೆ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ




