Facebook Twitter Instagram
    Friday, November 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಕ್ಕಳ ಮಾರಾಟ ಕಾನೂನುಬಾಹಿರ: ಮಾರುವವರಿಗೆ, ಕೊಳ್ಳುವವರಿಗೆ 5 ವರ್ಷ ಜೈಲು ಶಿಕ್ಷೆ!
    ಇತ್ತೀಚಿನ ಸುದ್ದಿ

    ಮಕ್ಕಳ ಮಾರಾಟ ಕಾನೂನುಬಾಹಿರ: ಮಾರುವವರಿಗೆ, ಕೊಳ್ಳುವವರಿಗೆ 5 ವರ್ಷ ಜೈಲು ಶಿಕ್ಷೆ!

    November 20, 2026
    Share

    ಮಂಗಳೂರು: ಮಕ್ಕಳ ಮಾರಾಟವು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಅನಧಿಕೃತವಾಗಿ ಯಾವುದೇ ಮಗುವನ್ನು ನೀಡುವುದು ಮತ್ತು ಪಡೆಯುವುದು ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಎಚ್ಚರಿಸಿದೆ.

    ಬಾಲನ್ಯಾಯ ಕಾಯ್ದೆ- 2015ರ ಸೆಕ್ಷನ್ 81ರ ಅನ್ವಯ ಮಕ್ಕಳನ್ನು ಮಾರುವವರಿಗೆ ಹಾಗೂ ಕೊಳ್ಳುವವರಿಗೆ 5 ವರ್ಷಗಳವರೆಗೆ ಸೆರೆಮನೆ ವಾಸದೊಂದಿಗೆ 1ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಈ ಅಪರಾಧದಲ್ಲಿ ಆಶ್ರಯ ನೀಡಿದವರು ಶಾಮೀಲಾಗಿದ್ದರೆ, ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆಗೊಳ್ಳಲಿದೆ.

    ಅನಾಥ ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿ ಕಂಡುಬಂದಲ್ಲಿ ಅಥವಾ ಮಗುವನ್ನು ದತ್ತು ಪಡೆಯಲು ಅಪೇಕ್ಷಿಸುವ ಪೋಷಕರು ಸರ್ಕಾರಿ ವಿಶೇಷ ದತ್ತು ಸಂಸ್ಥೆ, ಸರ್ಕಾರಿ ಬಾಲಕರ ಬಾಲಮಂದಿರ ಆವರಣ ಮತ್ತು ಪಡೀಲ್ ಪ್ರಜಾಸೌಧದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕ (ದೂರವಾಣಿ ಸಂಖ್ಯೆ:0824-2440004 ಮಕ್ಕಳ ಸಹಾಯವಾಣಿ-1098, ಸರ್ಕಾರಿ ವಿಶೇಷ ದತ್ತು ಸಂಸ್ಥೆ ಮಂಗಳೂರು-0824-2484547, ರಾಮಕೃಷ್ಣ ಸೇವಾ ಸಮಾಜ ಪುತ್ತೂರು 08251-230016 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 8

    Related Posts

    ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ- ಲಾರಿ ವಶ, ಇಬ್ಬರ ವಿರುದ್ಧ ಪ್ರಕರಣ

    November 20, 2026

    ಮಹಿಳೆಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

    November 20, 2026

    ಮಂಗಳೂರು: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರ ಬಂಧನ!! ರೂ. 8,80,000 ಮೌಲ್ಯದ 88 ಗ್ರಾಂ MDMA ಮಾದಕ ವಸ್ತು ವಶ

    November 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ- ಲಾರಿ ವಶ, ಇಬ್ಬರ ವಿರುದ್ಧ ಪ್ರಕರಣ

    November 20, 2026

    ಮಕ್ಕಳ ಮಾರಾಟ ಕಾನೂನುಬಾಹಿರ: ಮಾರುವವರಿಗೆ, ಕೊಳ್ಳುವವರಿಗೆ 5 ವರ್ಷ ಜೈಲು ಶಿಕ್ಷೆ!

    November 20, 2026

    ಮಹಿಳೆಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

    November 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.