ವಿಟ್ಲ: ಚಿಕ್ಕಪ್ಪನನ್ನೇ ಯುವತಿಯೊಬ್ಬಳು ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾನ ಸಮೀಪದ ಶಿರಂಕಲ್ಲು ಎಂಬಲ್ಲಿ ನಡೆದಿದೆ.
ಮೃತರನ್ನು ಚೆನ್ನಯ್ಯ ಪೂಜಾರಿ (50) ಎಂದು ಗುರುತಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.
ಕೊಲೆಗೆ ನಿಖರ ಕಾರಣವೇನು? ಘಟನೆ ಹೇಗೆ ನಡೆದಿದೆ? ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




