Facebook Twitter Instagram
    Thursday, November 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲ ಪತ್ತೆ: ಹೊರಗುತ್ತಿಗೆ ಸಿಬ್ಬಂದಿ ಸಹಿತ ಮೂವರ ಬಂಧನ- ₹2.73 ಕೋಟಿ ಮೌಲ್ಯದ ಚಿನ್ನ, ನಗದು ವಶ
    ಇತ್ತೀಚಿನ ಸುದ್ದಿ

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲ ಪತ್ತೆ: ಹೊರಗುತ್ತಿಗೆ ಸಿಬ್ಬಂದಿ ಸಹಿತ ಮೂವರ ಬಂಧನ- ₹2.73 ಕೋಟಿ ಮೌಲ್ಯದ ಚಿನ್ನ, ನಗದು ವಶ

    November 26, 2026
    Share

    ಮಂಗಳೂರು: ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಶಾಮೀಲಾಗಿದ್ದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿ ಸಹಿತ ಮೂವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

    ಈ ಸಿಬ್ಬಂದಿ ದುಬೈ ಮತ್ತು ಕಾಸರಗೋಡು ಮೂಲದ ಕಳ್ಳಸಾಗಣೆದಾರರೊಂದಿಗೆ ಶಾಮೀಲಾಗಿ ಚಿನ್ನ ಕಳ್ಳಸಾಗಣೆಗೆ ಸಹಕರಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಮಂಗಳೂರು ಪ್ರಾದೇಶಿಕ ಘಟಕ ಅಧಿಕಾರಿಗಳಿಗೆ ಮಾಹಿತಿ ಲಭಿಸಿತ್ತು.ಯುಎಇಯಿಂದ ಆಗಮಿಸುವ ಕೆಲವು ಪ್ರಯಾಣಿಕರು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಬಚ್ಚಿಟ್ಟು ಹೋಗುವ ಚಿನ್ನವನ್ನು ತೆಗೆದುಕೊಂಡು ಹೋಗುವ ಕೃತ್ಯದಲ್ಲಿ ಈ ಸಿಬ್ಬಂದಿಯು ಭಾಗಿಯಾಗಿದ್ದರು ಎನ್ನಲಾಗಿದೆ.ಖಚಿತ ಮಾಹಿತಿಯ ಆಧಾರದ ಮೇಲೆ
    ಎಂಆರ್‌ಯು ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದ ಆಗಮನ ವಿಭಾಗದಲ್ಲಿ ರಹಸ್ಯ ನಿಗಾ ಇರಿಸಿ ಸಂಬಂಧಪಟ್ಟ ಸಿಬ್ಬಂದಿಯನ್ನು ಪತ್ತೆಹಚ್ಚಿದರು.

    ಅಂದರೆ ನ.23ರಂದು ಬೆಳಗ್ಗೆ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನವನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಓರ್ವ ಹೊರಗುತ್ತಿಗೆ ಸಿಬ್ಬಂದಿಯನ್ನು ಅಧಿಕಾರಿಗಳು ತಡೆದು ನಿಲ್ಲಿಸಿ ಆತನಿಂದ ಪೇಸ್ಟ್ ರೂಪದಲ್ಲಿದ್ದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡರು. ಈತ ಈ ಚಿನ್ನವನ್ನು ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಲು ಉದ್ದೇಶಿಸಿದ್ದ ಎಂದು ತಿಳಿದುಬಂದಿದ್ದು, ಆ ಸಿಬ್ಬಂದಿಯು ವಿಮಾನ ನಿಲ್ದಾಣದಿಂದ 2 ಕಿ.ಮೀ ದೂರದಲ್ಲಿ ಕಾಸರಗೋಡು ಮೂಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಈ ಎಲ್ಲಾ ಮಾಹಿತಿಯನ್ನು ಕಲೆ ಹಾಕಿದ ಅಧಿಕಾರಿಗಳು ಎರಡನೇ ಮತ್ತು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಾಗ ಸುಮಾರು 73 ಲಕ್ಷ ರೂ. ನಗದು ಪತ್ತೆಹಚ್ಚಿದರು. 2 ಕೋಟಿ ರೂ. ಮೌಲ್ಯದ 1.65 ಕೆಜಿ ವಿದೇಶಿ ಮೂಲದ ಚಿನ್ನ, 73 ಲಕ್ಷ ರೂ. ನಗದು
    ಹಾಗೂ ಕಳ್ಳಸಾಗಣೆಗೆ ಬಳಸಲಾದ ಒಂದು ಕಾರು ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡೆದಿದ್ದಾರೆ.

    ಮೂವರು ಆರೋಪಿಗಳನ್ನು ಕಸ್ಟಮ್ಸ್ ಕಾಯ್ದೆ 1962ರಡಿ ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಡಿ.7ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    Post Views: 11

    Related Posts

    ಉಪ್ಪಳದಲ್ಲಿ ಮಾದಕವಸ್ತು ಸಾಗಾಟ: ಮೂವರು ಅರೆಸ್ಟ್!!

    November 26, 2026

    ದೀಪೋತ್ಸವಕ್ಕೆ ಬಂದ ವೃದ್ಧನಿಗೆ ಸುತ್ತಿಗೆಯಿಂದ ಹಲ್ಲೆ, ಚಿನ್ನದ ಸರ ದೋಚಿ ಪರಾರಿ- ಆರೋಪಿ ಅರೆಸ್ಟ್

    November 26, 2026

    ಬೃಹತ್‌ ಡ್ರಗ್ಸ್ ಜಾಲ ಪತ್ತೆ: 11 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ, ಇಬ್ಬರು ಅರೆಸ್ಟ್!!

    November 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಪ್ಪಳದಲ್ಲಿ ಮಾದಕವಸ್ತು ಸಾಗಾಟ: ಮೂವರು ಅರೆಸ್ಟ್!!

    November 26, 2026

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲ ಪತ್ತೆ: ಹೊರಗುತ್ತಿಗೆ ಸಿಬ್ಬಂದಿ ಸಹಿತ ಮೂವರ ಬಂಧನ- ₹2.73 ಕೋಟಿ ಮೌಲ್ಯದ ಚಿನ್ನ, ನಗದು ವಶ

    November 26, 2026

    ದೀಪೋತ್ಸವಕ್ಕೆ ಬಂದ ವೃದ್ಧನಿಗೆ ಸುತ್ತಿಗೆಯಿಂದ ಹಲ್ಲೆ, ಚಿನ್ನದ ಸರ ದೋಚಿ ಪರಾರಿ- ಆರೋಪಿ ಅರೆಸ್ಟ್

    November 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.