ಬೆಳ್ತಂಗಡಿ : ರಾಜ್ಯ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಅಭಿಯಾನದ ಬೆನ್ನಲ್ಲೆ ಇದೀಗ ಕರಾವಳಿಗೂ ಪೇ ಎಂಎಲ್ ಎ ಪೋಸ್ಟರ್ ಅಭಿಯಾನ ಎಂಟ್ರಿ ಕೊಟ್ಟಿದ್ದು, ಶಾಸಕರ ಫೋಟೋ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಕ್ಯಾಂಪೇನ್ ಶುರು ಮಾಡಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಫೋಟೋ ಹಾಕಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕ್ಯಾಂಪೇನ್ ಶುರು ಮಾಡಿದ್ದು, ಬೆಳ್ತಂಗಡಿಯ ಬಸ್ ನಿಲ್ದಾಣ, ಸಾರ್ವಜನಿಕ ಶೌಚಾಲಯ ಹಾಗೂ ಬಸ್ ಗಳಲ್ಲಿ ಪೇ ಎಂಎಲ್ ಎ ಪೋಸ್ಟರ್ ಅಂಟಿಸಿ ಅಭಿಯಾನ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಪೇ-ಸಿಎಂ ಪೋಸ್ಟರ್ ಅಂಟಿಸುವ ಮೂಲಕ ರಾಜ್ಯ ಕಾಂಗ್ರೆಸ್ ವಿನೂತನ ಅಭಿಯಾನ ಆರಂಭಿಸಿದ್ದು, ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದೆ. ಈ ಬೆನ್ನಲ್ಲೇ ಕರಾವಳಿಯಲ್ಲೂ ಇದೀಗ ಪೇ ಎಂಎಲ್ ಎ ಅಭಿಯಾನ ಶುರುವಾಗಿದೆ.