Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್‌ನಲ್ಲಿ ಶಾಸಕರ ಜತೆ ಗರ್ಭಿಣಿಯ ಫೊಟೋ: , ಭಜರಂಗದಳ ಕಾರ್ಯಕರ್ತರ ಆಕ್ರೋಶ
    ಇತ್ತೀಚಿನ ಸುದ್ದಿ

    ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್‌ನಲ್ಲಿ ಶಾಸಕರ ಜತೆ ಗರ್ಭಿಣಿಯ ಫೊಟೋ: , ಭಜರಂಗದಳ ಕಾರ್ಯಕರ್ತರ ಆಕ್ರೋಶ

    September 28, 2022
    Share

    ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೋಟೋ ಅಳವಡಿಸಿದ ಬಗ್ಗೆ ಕೇರಳದ ಭಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರಿಗೆ ಸರಿಯಾಗಿ ಕ್ಲಾಸ್ ಕೊಟ್ಟ ಘಟನೆ ಕೋಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.

    ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಪೋಷಣ ಮಾಸಾಚರಣೆ ಕಾರ್ಯಕ್ರಮ,
    ಅನ್ನಪ್ರಾಶನ, ಪೌಷ್ಟಿಕ ಆಹಾರ ಹಾಗೂ ಸೀಮಂತ ಕಾರ್ಯಕ್ರಮ ಕೊಲ್ಯನಾರಾಯಣಗುರು ಸಭಾಂಗಣದಲ್ಲಿ ಬುಧವಾರ ನಡೆಯಿತು.

    ಕಾರ್ಯಕ್ರಮದ ಪ್ರಚಾರ ಪ್ರಯುಕ್ತ ಸಭಾಂಗಣದ ಮುಂದೆ ಅಳವಡಿಸಿದ್ದ ಫ್ಲೆಕ್ಸ್ ನಲ್ಲಿ ಹಿಂದೂ’ ಮಹಿಳೆಯೊಬ್ಬರ ಹಲವು ವರ್ಷಗಳ ಹಿಂದಿನ ಗರ್ಭಿಣಿ ಭಾವಚಿತ್ರವನ್ನು ಜಾಲತಾಣದಿಂದ ನಕಲು ಮಾಡಿ ಅಳವಡಿಸಲಾಗಿದೆ, ಪಕ್ಕದಲ್ಲೇ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರ ಫೋಟೋ ಬಳಸಲಾಗಿದೆ.

    ವಿಷಯ ತಿಳಿಯುತ್ತಿದ್ದಂತೆಯೇ ಕೆರಳಿದ ಭಜರಂಗ ದಳದ ಕಾರ್ಯಕರ್ತರು ಕಾರ್ಯಕ್ರಮ ನಡೆಯುತ್ತಿದ್ದ ನಾರಾಯಣಗುರು ಸಭಾಂಗಣದೊಳಗೆ ನುಗ್ಗಿ ಆಯೋಜಕರ ನಿರ್ಲಕ್ಷ್ಯತನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ಶಾಸಕರ ವಿರುದ್ಧ ಘೋಷಣೆ ಕೂಗಿದರು.

    ಮಹಿಳೆಯರ ಬಗ್ಗೆ ಪುಂಖಾನುಪುಂಖವಾಗಿ ಹೊಗಳುವ ಸರಕಾರಿ ಮಹಿಳಾ ಅಧಿಕಾರಿಗಳು ಮಾಡಿದ ಕ್ರಮ‌ ಸಮಂಜಸವಲ್ಲ ಎಂದು ಆರೋಪಿಸಿ ಶಾಸಕ ಯು.ಟಿ. ಖಾದರ್ ಅವರ ವಿರುದ್ಧ ಘೋಷಣೆ ಕೂಗಿದರು.

    ಬಳಿಕ ಆಯೋಜಕರು ಕಾರ್ಯಕರ್ತರ ಮನವೊಲಿಸಿ ಫ್ಲೆಕ್ಸ್ ತೆರವುಗೊಳಿಸಿದರಾದರೂ ಮಾದರಿ ಆಗಬೇಕಿದ್ದ ಸರಕಾರಿ‌ ಕಾರ್ಯಕ್ರಮ‌ ಆಯೋಜಕರ ಪ್ರಮಾದದಿಂದಾಗಿ ಕಾರ್ಯಕ್ರಮದ ಸತ್ವವನ್ನೇ ಕಳೆದುಕೊಳ್ಳುವಂತಾಯಿತು. ಶಾಸಕ ಯು.ಟಿ. ಖಾದರ್ ಅವರ ಉಪಸ್ಥಿತಿಯಲ್ಲೇ ಕಾರ್ಯಕ್ರಮ ನಡೆಯಿತಾದರೂ ಕಾರ್ಯಕ್ರಮದ ಮುನ್ನ ಇದ್ದ ಹುಮ್ಮಸ್ಸು ಮತ್ತೆ ಕಂಡುಬರಲಿಲ್ಲ.

    Post Views: 202

    Related Posts

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.