Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಗಿಫ್ಟ್ ಕಳಿಸುವುದಾಗಿ ನಂಬಿಸಿ ಮಹಿಳೆಯಿಂದ 16.89 ಲಕ್ಷ ರೂ.ವರ್ಗಾಯಿಸಿ ವಂಚನೆ: ದೂರು ದಾಖಲು!
    ಇತ್ತೀಚಿನ ಸುದ್ದಿ

    ಉಡುಪಿ: ಗಿಫ್ಟ್ ಕಳಿಸುವುದಾಗಿ ನಂಬಿಸಿ ಮಹಿಳೆಯಿಂದ 16.89 ಲಕ್ಷ ರೂ.ವರ್ಗಾಯಿಸಿ ವಂಚನೆ: ದೂರು ದಾಖಲು!

    October 9, 2022
    Share

    ಉಡುಪಿ: ವಿದೇಶದಲ್ಲಿ ಡಾಕ್ಟರ್ ಎಂದು ಪರಿಚಯಿಸಿಕೊಂಡು ಗಿಫ್ಟ್ ಕಳಿಸುವುದಾಗಿ ನಂಬಿಸಿ ಚಾಂತಾರುವಿನ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಬರೋಬ್ಬರಿ 16.89 ಲಕ್ಷ ರೂ.ವಂಚಿಸಿದ್ದು, ಈ ಬಗ್ಗೆ ಸೆನ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.

    ಚಾಂತಾರು ನಿವಾಸಿ ಲವೀನಾ ಜೆನಿಫರ್ ಮೊರಾಸ್ ಎಂಬವರಿಗೆ ಇನ್ ಸ್ಟಾಗ್ರಾಮ್ ನಲ್ಲಿ ಜೋವನ್ ಎಂಬ ವ್ಯಕ್ತಿಯ ಪರಿಚಯವಾಗಿದ್ದು ಆತ ತಾನು ಕೆನಡಾದಲ್ಲಿ ಡಾಕ್ಟರ್ ಎಂಬುದಾಗಿ ಹೇಳಿಕೊಂಡಿದ್ದಾನೆ. ಬಳಿಕ ಇಬ್ಬರು ವಾಟ್ಸಾಪ್ ಮೂಲಕ ಮಾತುಕತೆ ನಡೆಸಿ ಸ್ನೇಹಿತರಾಗಿದ್ದು, ಅ.2 ರಂದು ಆತನು ಐಫೋನ್, ಚಿನ್ನ ಹಾಗೂ ಯುಎಸ್ ಡಾಲರ್ ನ್ನು ಪಾರ್ಸೆಲ್ ಕಳುಹಿಸುವುದಾಗಿ ನಂಬಿಸಿದ್ದಾನೆ. ಆ ಬಳಿಕ ಕಸ್ಟಮ್ಸ್ ಅಧಿಕಾರಿ ಎಂದು ಮೊ. 9233013312 ನೇ ನಂಬರ್ ನಿಂದ ಅಪರಿಚಿತ ವ್ಯಕ್ತಿ ಕರೆ ಮಾಡಿ ಕೆನಡಾದಿಂದ ಬಂದಿರುವ ಪಾರ್ಸೆಲ್ ಗೆ ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದು, ಇದನ್ನು ನಂಬಿದ ಲವೀನಾ ಅವರು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ರೂ.16,89,862 ಹಣವನ್ನು ಪಾವತಿಸಿದ್ದರು. ಆದರೆ ಆ ಬಳಿಕ ಯಾವುದೇ ಪಾರ್ಸೆಲ್ ಬಾದರೇ ಇದ್ದು ತಾವು ಮೋಸ ಹೋಗಿರುವುದು ತಿಳಿದು ಬಂದಿದೆ. ಅದರಂತೆ ಲವೀನಾ ಅವರಿಗೆ ವಿದೇಶದಲ್ಲಿ ಡಾಕ್ಟರ್ ಎಂದು ಪರಿಚಯಿಸಿಕೊಂಡು ಪಾರ್ಸೆಲ್ ಗಿಫ್ಟ್ ಕಳಿಸುವುದಾಗಿ ನಂಬಿಸಿ ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ಹಣ ಪಡೆದು ವಂಚಿಸಿರುವುದಾಗಿ ನೀಡಿದ ದೂರಿನಂತೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 234

    Related Posts

    ಕಾರ್ಕಳದಲ್ಲಿ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    September 20, 2026

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳದಲ್ಲಿ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    September 20, 2026

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.