Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಉತ್ತರಕಾಶಿ ಹಿಮಪಾತದಲ್ಲಿ ಕನ್ನಡಿಗರ ಸಾವು : ಬೆಂಗಳೂರು ಮೂಲದ ಇಬ್ಬರು ಯುವಕರ ಶವ ಪತ್ತೆ 
    ಇತ್ತೀಚಿನ ಸುದ್ದಿ

    BREAKING NEWS : ಉತ್ತರಕಾಶಿ ಹಿಮಪಾತದಲ್ಲಿ ಕನ್ನಡಿಗರ ಸಾವು : ಬೆಂಗಳೂರು ಮೂಲದ ಇಬ್ಬರು ಯುವಕರ ಶವ ಪತ್ತೆ 

    October 9, 2022
    Share

     ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ.

    ಬೆಂಗಳೂರು ಮೂಲದ ವಿಕ್ರಮ್. ರಶ್ಮಿತ್ ಎಂಬ ಯುವಕರ ಶವ ಪತ್ತೆಯಾಗಿದೆ.

    ಅಕ್ಟೋಬರ್ 08 ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವ ಹೊರಕ್ಕೆ ತೆಗೆಯಲಾಗಿದೆ.. ಕಳೆದ ಮಂಗಳವಾರ ಹಿಮಪಾತ ಸಂಭವಿಸಿದ ಬಳಿಕ ಯುವಕರು ನಾಪತ್ತೆಯಾಗಿದ್ದರು. ರಕ್ಷಣಾ ಕಾರ್ಯಚರಣೆ ವೇಳೆ ಮೃತ ದೇಹಗಳು ಪತ್ತೆಯಾಗಿವೆ.

    ಉತ್ತರಕಾಶಿ ಹಿಮಪಾತದಲ್ಲಿ ಒಟ್ಟು 29 ಮಂದಿ ಮೃತಪಟ್ಟಿದ್ದು, ವಿಪತ್ತು ನಿರ್ವಹಣಾ ತಂಡಗಳು ಸ್ಥಳದಲ್ಲಿ ನಿರಂತರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

    ಉತ್ತರಕಾಶಿ ಜಿಲ್ಲೆಯ ದ್ರೌಪದಿಯ ದಂಡ-2 ಪ್ರದೇಶಕ್ಕೆ ಅಕ್ಟೋಬರ್​ 4ರಂದು ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡ ತೆರಳಿತ್ತು. ಈ ವೇಳೆ, ಹಿಮಕುಸಿತ ಉಂಟಾಗಿ ಪರ್ವತಾರೋಹಿಗಳು ಸಿಲುಕಿದ್ದರು. ಮೊದಲ ದಿನವೇ 10 ಜನರ ಮೃತಪಟ್ಟಿದ್ದರು. ಆದರೆ, ಪ್ರತಿಕೂಲ ಹವಾಮಾನ ಕಾರಣ ರಕ್ಷಣಾ ಕಾರ್ಯಕ್ಕೆ ತೊಂದರೆ ಉಂಟಾಗಿತ್ತು.

    ರಕ್ಷಣಾ ಕಾರ್ಯಕ್ಕೆ 30 ಜನರ ತಂಡವನ್ನು ನಿಯೋಜಿಸಲಾಗಿದ್ದು, ಐಟಿಬಿಪಿ, ನೆಹರು ಪರ್ವತಾರೋಹಣ ಸಂಸ್ಥೆ, ವಾಯುಸೇನೆ, ಸೇನೆ, ಎಸ್‌ಡಿಆರ್‌ಎಫ್ ಹೀಗೆ ವಿವಿಧ ತಂಡಗಳ ಒಟ್ಟು 30 ಜನ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.

    Post Views: 201

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.