Facebook Twitter Instagram
    Tuesday, September 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಅನಂತ ಪದ್ಮನಾಭ ಸ್ವಾಮಿ ಸನ್ನಿಧಿಯಲ್ಲಿದ್ದ ದೇವರ ಮೊಸಳೆ ‘ಬಬಿಯಾ’ ಇನ್ನಿಲ್ಲ
    ಇತ್ತೀಚಿನ ಸುದ್ದಿ

    ಕಾಸರಗೋಡು: ಅನಂತ ಪದ್ಮನಾಭ ಸ್ವಾಮಿ ಸನ್ನಿಧಿಯಲ್ಲಿದ್ದ ದೇವರ ಮೊಸಳೆ ‘ಬಬಿಯಾ’ ಇನ್ನಿಲ್ಲ

    October 10, 2022
    Share

    ಕಾಸರಗೋಡು: ಸರೋವರ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದ ಕುಂಬಳೆ ಸಮೀಪದ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರದ ಮೊಸಳೆ ಬಬಿಯಾʼ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

    ಈ ದೇವಾಲಯದ ಕೆರೆಯ ನಡುವಿನಲ್ಲಿ ನೆಲೆಸಿರುವ ‘ಅನಂತಪದ್ಮನಾಭನಿಗೆ ಮೊಸಳೆ-ಬಬಿಯಾ’ ‘ಕಾವಲು ಕಾಯುವ ಕೆಲಸ’ ಮಾಡುತ್ತದೆ ಎನ್ನುವ ನಂಬಿಕೆ ಇತ್ತು. ವರ್ಷದ ಎಲ್ಲಾ ದಿನವೂ ಶುದ್ಧ ನೀರಿನಿಂದ ತುಂಬಿರುವ ಈ ಕೆರೆಯೇ ಮೊಸಳೆಯ ವಾಸಸ್ಥಾನ. ದೇವರ ನೈವೇದ್ಯವೇ ಇದಕ್ಕೆ ನಿತ್ಯ ಆಹಾರ. ಬಬಿಯಾ ಈ ಕೆರೆಯಿಂದ ದೇವಾಲಯದಲ್ಲಿರುವ ದೊಡ್ಡ ಕೆರೆಗೆ ಮನುಷ್ಯರು ನಡೆದಾಡುವ ದಾರಿಯಲ್ಲೇ ಸಾಗುತ್ತಾ ಸ್ವಚ್ಚಂದವಾಗಿ ಜೀವನ ನಡೆಸುತ್ತಿತ್ತು.ಕ್ಷೇತ್ರದಲ್ಲೊಂದು ನಿರುಪದ್ರವಿ ಮೊಸಳೆ ಇರುವುದರಿಂದಲೇ ಅನಂತಪುರ ಕ್ಷೇತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುತೂಹಲ ಮೂಡಿಸಿ ಜನಪ್ರಿಯತೆ ಪಡೆದಿತ್ತು. ಸ್ವಾತಂತ್ರ್ಯ ಪೂರ್ವದಲ್ಲೇ ಕ್ಷೇತ್ರದಲ್ಲಿ ಮೊಸಳೆ ಇತ್ತು. ಅದನ್ನ ಈ ಪ್ರದೇಶದಲ್ಲಿ ಮಿಲಿಟರಿ ಕ್ಯಾಂಪ್ ಹಾಕಿದ್ದ ಬ್ರಿಟೀಷರು ಗುಂಡಿಕ್ಕಿ ಕೊಂದಿದ್ದರಂತೆ. ತದನಂತರ ಮತ್ತೊಂದು ಮೊಸಳೆ ಮರಿ ತಾನಾಗಿಯೇ ಕೆರೆಯಲ್ಲಿ ಪ್ರತ್ಯಕ್ಷಗೊಂಡಿತ್ತು. ಅದಕ್ಕೆ ಬಬಿಯಾ ಎಂದು ಹೆಸರಿಸಲಾಗಿತ್ತು. ಈ ವರೆಗೆ ಯಾರೊಬ್ಬರಿಗೂ ಉಪಟಳ ಮಾಡದ ದೇವರ ಮೊಸಳೆ ಇತ್ತೀಚಿನ ದಿನದಲ್ಲಿ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿತ್ತು. ಅದಕ್ಕೆ ಚಿಕಿತ್ಸೆಯೂ ನಡೆಯುತಿತ್ತು. ಈತನ್ಮಧ್ಯೆ ನಿನ್ನೆ ರಾತ್ರಿ ಅದು ನೀರಲ್ಲಿ ತೇಲಿತು.
    ಪರಿಸರದ ಭಕ್ತರು ಸೇರಿ ಮೊಸಳೆಯನ್ನು ನೀರಿನಿಂದ ಮೇಲೆತ್ತಿ ಕ್ಷೇತ್ರ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ತಂತ್ರಿಗಳ ಆಗಮನದ ಬಳಿಕ ಅದರ ಅಂತ್ಯವಿಧಿ ಕ್ರಿಯೆಗಳು ನಡೆಯಲಿದೆ.

    Post Views: 236

    Related Posts

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.