Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿಜಾಬ್​ ವಿವಾದ- ಸುಪ್ರೀಂಕೋರ್ಟ್​ನಿಂದ ಇಂದು ತೀರ್ಪು ಪ್ರಕಟ ಸಾಧ್ಯತೆ
    ಇತ್ತೀಚಿನ ಸುದ್ದಿ

    ಹಿಜಾಬ್​ ವಿವಾದ- ಸುಪ್ರೀಂಕೋರ್ಟ್​ನಿಂದ ಇಂದು ತೀರ್ಪು ಪ್ರಕಟ ಸಾಧ್ಯತೆ

    October 13, 2022
    Share

    ನವದೆಹಲಿ: ಕರ್ನಾಟಕದ ಶಾಲಾ ಕಾಲೇಜುಗಳ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್​ ನಿಷೇಧಿಸಿ ಹೈಕೋರ್ಟ್​ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಪ್ರಕಟಿಸುವ ಸಾಧ್ಯತೆಯಿದೆ.

    ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ಪೀಠ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರೊಂದಿಗೆ ಅಂತಿಮ ತೀರ್ಪು ಪ್ರಕಟಿಸಲಿದೆ. ಪೀಠದ ನೇತೃತ್ವ ವಹಿಸಿದ್ದ ನ್ಯಾ. ಗುಪ್ತಾ ಅವರು ಅಕ್ಟೋಬರ್ 16 ರಂದು ನಿವೃತ್ತರಾಗಲಿರುವ ಕಾರಣ ಇಂದು ತೀರ್ಪು ಪ್ರಕಟವಾಗುವ ನಿರೀಕ್ಷೆಯಿದೆ. ಸೆಪ್ಟೆಂಬರ್ 22 ರಂದು ಪ್ರಕರಣದ ಕೊನೆಯ ದಿನದ ವಿಚಾರಣೆ ನಡೆದು, ವಾದ – ಪ್ರತಿವಾದ ಪೂರ್ಣಗೊಂಡ ಬಳಿಕ ದ್ವಿಸದಸ್ಯ ಪೀಠ ತನ್ನ ತೀರ್ಪು ಕಾಯ್ದಿರಿಸಿತ್ತು.

    ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ ಕರ್ನಾಟಕ ಹೈಕೋರ್ಟ್​ ನೀಡಿದ ತೀರ್ಪನ್ನು ತಡೆ ಹಿಡಿಯುವಂತೆ ಕೋರಲಾಗಿತ್ತು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದಿದ್ದರೆ ಅವರು ಶಾಲೆಗೆ ತೆರಳದೇ ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಹೀಗಾಗಿ ಶಾಲೆಯಲ್ಲೂ ಹಿಜಾಬ್​ ಧರಿಸಲು ಅವಕಾಶ ನೀಡಬೇಕು ಎಂದು ಫಿರ್ಯಾದುದಾರರ ಪರ ವಕೀಲರು ವಾದ ಮಂಡಿಸಿದ್ದರು. ಇದಲ್ಲದೇ ಈ ಬಿಕ್ಕಟ್ಟನ್ನು ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು ಎಂದು ವಾದಿಸಿದ್ದರು.

    ಮತ್ತೊಂದೆಡೆ, ರಾಜ್ಯದ ಪರ ವಾದ ಮಂಡಿಸಿದ್ದ ವಕೀಲರು, ಹಿಜಾಬ್​ ಧರಿಸುವುದರಿಂದ ಶಾಲಾ ಕಾಲೇಜುಗಳಲ್ಲಿ ಉಂಟಾಗುವ ಧಾರ್ಮಿಕ ಬಿಕ್ಕಟ್ಟು ನಿವಾರಣೆಗೆ ಸರ್ಕಾರ ಈ ಆದೇಶ ಹೊರಡಿಸಿತ್ತು. ಹಿಜಾಬ್​ ಧರಿಸುವುದು ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೈಕೋರ್ಟ್​ ತೀರ್ಪು ನೀಡಿದೆ. ವಿದ್ಯಾರ್ಥಿಗಳಲ್ಲಿ ಸಮಾನತೆ ತರುವ ದೃಷ್ಟಿಯಿಂದ ಸಮವಸ್ತ್ರ ಕಡ್ಡಾಯ ಮಾಡಿ, ಶಾಲಾ ಕಾಲೇಜುಗಳ ತರಗತಿಯೊಳಗೆ ಮಾತ್ರ ಹಿಜಾಬ್​ ನಿಷೇಧಿಸಲಾಗಿದೆ ಎಂದು ವಾದ ಮಂಡಿಸಿದ್ದರು.

    Post Views: 219

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.