ನವದೆಹಲಿ : ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕ ಖರ್ಗೆ ಕಾಂಗ್ರೆಸ್ ಗೆ ಕಿಂಗ್ ಆಗಿದ್ದಾರೆ.
ಹೌದು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆ (Congress president’s election) ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಯ್ಕೆಯಾಗಿದ್ದಾರೆ.
ಇಂದು ಮತಎಣಿಕೆ ನಡೆದಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿಯಾದ ಶಶಿ ತರೂರ್ ಅವರಿಗೆ ಕೇವಲ 1072 ಮತಗಳನ್ನು ಪಡೆದಿದ್ದಾರೆ. ಈಮೂಲಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್(Congress)ಗೆ ಅಧ್ಯಕ್ಷೀಯ ಚುನಾವಣೆಯು ಅಕ್ಟೋಬರ್ 17 ಅಂದ್ರೆ, ಸೋಮವಾರ ನಡೆದಿತ್ತು. ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಆಯ್ಕೆಯಾಗಿದ್ದು, ಈ ಹಿನ್ನೆಲೆ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.
ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಅವರನ್ನು ಅವರ ಎದುರಾಳಿಯಾಗಿ ಸ್ಪರ್ಧಿಸಿದ್ದ ಶಶಿ ತರೂರ್ ಅಭಿನಂದಿಸಿದ್ದಾರೆ. ‘ಕಾಂಗ್ರೆಸ್ ಅಧ್ಯಕ್ಷರಾಗುವುದು ಎಂದರೆ ದೊಡ್ಡ ಗೌರವ ಮತ್ತು ದೊಡ್ಡ ಜವಾಬ್ದಾರಿ. ಖರ್ಗೆ ಅವರಿಗೆ ಈ ಜವಾಬ್ದಾರಿಯಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. ನನಗೆ ಸಾವಿರಕ್ಕೂ ಹೆಚ್ಚು ಗೆಳೆಯರ ಬೆಂಬಲ ಸಿಕ್ಕಿದ್ದನ್ನು ಕೃತಜ್ಞತೆಯಿಂದ ನೆನೆಯುತ್ತೇನೆ. ಭಾರತದೆಲ್ಲೆಡೆ ಇರುವ ಕಾಂಗ್ರೆಸ್ ಬೆಂಬಲಿಗರ ಆಶೋತ್ತರಗಳನ್ನು ಮುನ್ನಡೆಸಲಾಗುವುದು’ ಎಂದು ಟ್ವೀಟ್ನಲ್ಲಿ ಶಶಿ ತರೂರ್ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನಕ್ಕೆ ಕೇಂದ್ರದ ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಕಣದಲ್ಲಿದ್ದರು.2019 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ರಾಹುಲ್ ಗಾಂಧಿ ಅವರು ಸ್ಥಾನದಿಂದ ಕೆಳಗಿಳಿದ ನಂತರ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಸೋನಿಯಾ ಗಾಂಧಿ ಅವರ ಸ್ಥಾನವನ್ನು ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದಾರೆ. ಸೋಮವಾರ ನಡೆದ ಚುನಾವಣೆಯಲ್ಲಿ 9,500 ಕ್ಕೂ ಹೆಚ್ಚು ಪ್ರತಿನಿಧಿಗಳು ಮತ ಚಲಾಯಿಸಿದರು.