Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಾಕಿಸ್ತಾನವನ್ನು ಬಗ್ಗು ಬಡಿದ ಬ್ಲೂ ಬಾಯ್ಸ್‌: ಭಾರತೀಯರಿಗೆ ಟೀಂ ಇಂಡಿಯಾ ದೀಪಾವಳಿ ಗಿಫ್ಟ್‌
    ಇತ್ತೀಚಿನ ಸುದ್ದಿ

    ಪಾಕಿಸ್ತಾನವನ್ನು ಬಗ್ಗು ಬಡಿದ ಬ್ಲೂ ಬಾಯ್ಸ್‌: ಭಾರತೀಯರಿಗೆ ಟೀಂ ಇಂಡಿಯಾ ದೀಪಾವಳಿ ಗಿಫ್ಟ್‌

    October 24, 2022
    Share

    ನವದೆಹಲಿ: ಪಾಕಿಸ್ಥಾನ ವಿರುದ್ದ ಭಾನುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ರೋಚಕ ಹಣಾಹಣಿಯಲ್ಲಿ ಭಾರತ ಗೆಲುವು ಸಾಧಿಸುತ್ತಿದ್ದಂತೆಯೇ ದೇಶದೆಲ್ಲೆಡೆ ಪಟಾಕಿ ಹಚ್ಚಿ ಸಂಭ್ರಮಿಸಲಾಗುತ್ತಿದೆ.

    ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ಥಾನ 20 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು 159 ರನ್ ಗಳಿಸಿದರೆ, ಭಾರತವು 6 ವಿಕೆಟ್ ಕಳೆದುಕೊಂಡು ಅಂತಿಮ ಎಸೆತದಲ್ಲಿ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಪಾಕಿಸ್ತಾನಕ್ಕೆ ಉತ್ತಮ ಆರಂಭವೇನು ಸಿಗಲಿಲ್ಲ. 15 ರನ್ ಆಗುವಷ್ಟರಲ್ಲಿ ನಾಯಕ ಬಾಬರ್ ಅಜಂ ಮತ್ತು ಕೀಪರ್ ರಿಜ್ವಾನ್ ಪೆವಿಲಿಯನ್ ಸೇರಿದ್ದರು. ನಂತರ ಜೊತೆಯಾದ ಮಸೂದ್ ಮತ್ತು ಇಫ್ತಿಕಾರ್ ಅಹಮದ್ 76 ರನ್ ಜೊತೆಯಾಟವಾಡಿದರು. ತಲಾ ಅರ್ಧಶತಕ ಸಿಡಿಸಿದ ಇಬ್ಬರು ಪಾಕ್ ತಂಡವನ್ನು ಆಧರಿಸಿದರು. ಕೊನೆಯಲ್ಲಿ ಶಹೀನ್ ಶಾ ಅಫ್ರಿದಿ 8 ಎಸೆತಗಳಲ್ಲಿ 16 ರನ್ ಗಳಿಸಿದರು. ಭಾರತದ ಪರ ಅರ್ಶದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ತಲಾ ಮೂರು ವಿಕೆಟ್ ಕಿತ್ತರು. ಭುವನೇಶ್ವರ್ ಮತ್ತು ಶಮಿ ತಲಾ ಒಂದು ವಿಕೆಟ್ ಕಿತ್ತರು. ಗುರಿ ಬೆನ್ನತ್ತಿದ ಭಾರತಕ್ಕೆ ಪಾಕ್ ಬೌಲರ್ ಗಳು ಕಾಡಿದರು. ಪವರ್ ಪ್ಲೇ ಮುಗಿಯುವ ವೇಳೆ ಭಾರತದ ನಾಲ್ಕು ಬ್ಯಾಟರ್ ಗಳು ಪೆವಿಲಿಯನ್ ಸೇರಿಯಾಗಿತ್ತು. ನಂತರ ಜೊತೆಯಾದ ವಿರಾಟ್ ಮತ್ತು ಹಾರ್ದಿಕ್ ಪಾಂಡ್ಯ ಶತಕದ ಜತೆಯಾಟವಾಡಿದರು. ಹಾರ್ದಿಕ್ 40 ರನ್ ಗಳಿಸಿದರೆ, ವಿರಾಟ್ ಅಜೇಯ 82 ರನ್ ಬಾರಿಸಿದರು. ಕೊನೆಯ 8 ಎಸೆತದಲ್ಲಿ ಭಾರತ ತಂಡಕ್ಕೆ 28 ರನ್ ಅಗತ್ಯವಿತ್ತು. ಸತತ ಎರಡು ಸಿಕ್ಸರ್ ಬಾರಿಸಿದ ವಿರಾಟ್ ಚೇಸಿಂಗ್ ಗೆ ಅಡಿಯಿಟ್ಟರು.

    Post Views: 216

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.