Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಳೆ ಸೂರ್ಯಗ್ರಹಣ : ಧರ್ಮಸ್ಥಳ ದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ
    ಇತ್ತೀಚಿನ ಸುದ್ದಿ

    ನಾಳೆ ಸೂರ್ಯಗ್ರಹಣ : ಧರ್ಮಸ್ಥಳ ದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ

    October 24, 2022
    Share

    ಆಕ್ಟೋಬರ್ 25ರಮಂಗಳವಾರದಂದು ಸೂರ್ಯಗ್ರಹಣ ಆವರಿಸಲಿರುವ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ ಆಗಲಿದ್ದು , ಭಕ್ತರು ಸಹಕರಿಸಬೇಕಾಗಿ ಕೋರಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ‌. ಮಂಗಳವಾರದಂದು ಮಧ್ಯಾಹ್ನದವರೆಗೆ ಎಂದಿನಂತೆ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶವಿದ್ದು, ನಂತರ ಮಧ್ಯಾಹ್ನ 2:30ರಿಂದ ರಾತ್ರಿ 7:30ರವರೆಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 2:30ರವರೆಗೆ ಭೋಜನ ಪ್ರಸಾದದ ವ್ಯವಸ್ಥೆ ಇರಲಿದೆ. ಬಳಿಕ ರಾತ್ರಿ 7:30ರ ನಂತರ ಭೋಜನ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.

    ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಸೂರ್ಯ ಗ್ರಹಣ ನಿಮಿತ್ತ ದೇವರ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಮಂಗಳವಾರ ಮಧ್ಯಾಹ್ನ ಎಂದಿನಂತೆ ದೇವಸ್ಥಾನದಲ್ಲಿ ಅನ್ನ ಪ್ರಸಾದವಿರುತ್ತದೆ. ಗ್ರಹಣ ಆರಂಭಗೊಳ್ಳುವ ಅವಧಿಯಿಂದ ಬಿಡುವವರೆಗೆ ಭಕ್ತರಿಗೆ ದೇವಸ್ಥಾನಕ್ಕೆ ಪ್ರವೇಶವಿದ್ದು, ದೇವಸ್ಥಾನದಲ್ಲಿ ಜಪಮಾಡಬಹುದು. ಆದರೆ ಈ ಅವಧಿಯಲ್ಲಿ ಯಾವುದೇ ಸೇವೆ, ಪ್ರಸಾದ ವಿತರಣೆ ಇರುವುದಿಲ್ಲ.

    ಅದೇ ರೀತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ. ಅಕ್ಟೋಬರ್ 25ರಂದು ದೇವಸ್ಥಾನ ಇಡೀ ದಿನ ಬಾಗಿಲು ಮುಚ್ಚಲಿದೆ. ಆ ದಿನ ಯಾವುದೇ ಸೇವೆಗಳು, ಭೋಜನ ವ್ಯವಸ್ಥೆ ಇರುವುದಿಲ್ಲ. ಅಕ್ಟೋಬರ್ 26ರ ಬೆಳಗ್ಗೆ 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪೂಜಾ ಸೇವೆಗಳು, ದೇವರ ದರ್ಶನ ಆರಂಭಗೊಳ್ಳಲಿದೆ.

    Post Views: 182

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.